ಸಮಾಜದ ಅಂಕುಡೊಂಕುಗಳನ್ನು ತಿದ್ದಿದ ನಿಜಶರಣ ಅಂಬಿಗರ ಚೌಡಯ್ಯ:ಟಿ.ಎನ್. ಭೀಮುನಾಯಕ

ಯಾದಗಿರಿ: ನಿಜ ಶರಣ ಅಂಬಿಗರ ಚೌಡಯ್ಯ ಅವರು ವಚನಗಳ ಮೂಲಕ ಶ್ರೇಷ್ಠ ವಚನಕಾರಾಗಿ ಸಮಾಜದ ಅಂಕುಡೊಂಕುಗಳನ್ನು ತಿದ್ದಿದ ಶರಣರಲ್ಲಿ ಶರಣ ಮಹಾ ನಿಜ ಶರಣ ಅಂಬಿಗರ ಚೌಡಯ್ಯನವರು ಎಂದು ಕರವೇ ಜಿಲ್ಲಾಧ್ಯಕ್ಷರಾದ ಟಿ.ಎನ್. ಭೀಮುನಾಯಕ ಹೇಳಿದರು.
ನಗರದ ಜಿಲ್ಲಾ ಕರವೇ ಕಾರ್ಯಾಲಯದಲ್ಲಿ ನಿಜಶರಣ ಅಂಬಿಗರ ಚೌಡಯ್ಯನ ಅವರ 905 ನೇ ಜಯಂತ್ಯೋತ್ಸವದ ನಿಮಿತ್ಯ ನಿಜಶರಣರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಜಯಂತಿ ಆಚರಣೆ ಮಾಡಿ ಮಾತನಾಡಿದ ಅವರು ಅವರು 12 ನೇ ಶತಮಾನದಲ್ಲಿ ಜೀವಿಸಿದ್ದ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತಿಯಿಂದ ಅಂಬಿಗ ಪ್ರವೃತ್ತಿಯಲ್ಲಿ ಅನುಭಾವಿ ನೇರ ನಿರ್ಭಿತ ನುಡಿಗಳಿಂದ ವಚನಗಳನ್ನು ಬರೆದಿರುವುದು ಗೋಚರಿಸುತ್ತದೆ ಎಂದು ಹೇಳಿದರು.
ಬಸವಣ್ಣನವರ ಅನುಭವ ಮಂಟಪದಲ್ಲಿ ಸಮಾನ ಭೂಮಿಕೆಯ ಸಮ್ಮೇಳನದಲ್ಲಿ ಸೇರಿಕೊಂಡವ. ತನ್ನ ಕಾಯಕ ಅಥವಾ ವ್ಯಕ್ತಿನಾಮವಾದ ಅಂಬಿಗರ ಚೌಡಯ್ಯ ಎಂಬುದೇ ಈತನ ವಚನಗಳ ಅಂಕಿತವಾಗಿದೆ. ಕನ್ನಡ ಸಾಹಿತ್ಯದಲ್ಲಿ ಈ ಬಗೆಯ ದಿಟ್ಟತನ, ವ್ಯಗ್ರತೆ ಕಂಡುಬರುವುದು ಬಹುಶಃ ಇಬ್ಬರಲ್ಲೇ ಎಂದು ತೋರುತ್ತದೆ. ಒಬ್ಬ ಸಿಡಿಲು ನುಡಿಯ ಸರ್ವಜ್ಞ; ಇನ್ನೊಬ್ಬ ಕೆಚ್ಚೆದೆಯ ವಚನಕಾರ ಅಂಬಿಗರ ಚೌಡಯ್ಯ ಎಂದು ನುಡಿದರು.
ತಾನು ಕೇವಲ ತುಂಬಿದ ಹೊಳೆಯಲ್ಲಿ ದೋಣಿಗೆ ಹುಟ್ಟು ಹಾಕುವ ಅಂಬಿಗ ಮಾತ್ರವಲ್ಲ, ಭವಸಾಗರದಲ್ಲೂ ಹುಟ್ಟು ಹಾಕುವ ಕೌಶಲವುಳ್ಳುವ ಎಂದು ಹೇಳಿಕೊಳ್ಳುವುದರಲ್ಲಿ ತನ್ನ ಅನುಭವ ದೃಷ್ಟಿಯನ್ನು ಪ್ರಕಟಿಸಿದ್ದಾನೆ.
ಈ ಸಂದರ್ಭದಲ್ಲಿ ಕರವೇ ಮುಖಂಡರಾದ ಮಲ್ಲು ಮಾಳಿಕೇರಿ, ಸಿದ್ದುನಾಯಕ ಹತ್ತಿಕುಣಿ, ಅಂಬ್ರೇಶ ಹತ್ತಿಮನಿ, ಶರಣಬಸಪ್ಪ ಯಲ್ಹೇರಿ, ವಿಶ್ವರಾಜ ಪಾಟೀಲ್ ಹೊನಗೇರಾ, ಕಾಶಿನಾಥ ನಾನೇಕ, ಯಲ್ಲಾಲಿಂಗ ಚಾಮನಳ್ಳಿ. ಮಂಜುನಾಥ ನಾಯ್ಕೋಡಿ, ನಾಗು ಶೆಟ್ಟಗೇರಾ, ಮಲ್ಲು ಬಂದಳ್ಳಿ, ರಮೇಶ.ಡಿ.ನಾಯಕ ನಾಗರಾಜ ಪಲ್ಲಿ, ರಾಮಪ್ಪ ನಕ್ಕಲ್, ಇನ್ನೂ ಅನೇಕ ಕಾರ್ಯಕರ್ತರು ಭಾಗಿಯಾಗಿದ್ದರು.







