Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ...

ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಗುತ್ತಿಗೆದಾರರು ಆದ್ಯತೆ ನೀಡಬೇಕು : ಶಾಸಕ ಶರಣಗೌಡ ಕಂದಕೂರ

ವಾರ್ತಾಭಾರತಿವಾರ್ತಾಭಾರತಿ17 Jun 2025 5:37 PM IST
share
ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಗುತ್ತಿಗೆದಾರರು ಆದ್ಯತೆ ನೀಡಬೇಕು : ಶಾಸಕ ಶರಣಗೌಡ ಕಂದಕೂರ

ಯಾದಗಿರಿ: ಗುರುಮಠಕಲ್ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಗುಣಮಟ್ಟದ ರಸ್ತೆಗಳ ಸುಧಾರಣೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಕೆಟ್ಟು ಹೋದ ರಸ್ತೆಗಳನ್ನು ಮರು ನಿರ್ಮಿಸಲಾಗುತ್ತಿದೆ. ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಗುತ್ತಿಗೆದಾರರು ಆದ್ಯತೆ ನೀಡಬೇಕು. 6 ತಿಂಗಳ ಗಡುವಿನಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು.

ಗುರುಮಠಕಲ್ ತಾಲೂಕಿನ ಮಾಧ್ವಾರ ಗ್ರಾಮದಲ್ಲಿ ಮುಧೋಳ – ಯಲಗೇರಾ ಆಂಧ್ರದ ಗಡಿವರೆಗೆ 4 ಕೋಟಿ ರೂ. ವೆಚ್ಚದ ರಸ್ತೆ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಮತಕ್ಷೇತ್ರದ ಎಲ್ಲ ಸಮುದಾಯವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು, ಸಿಸಿ ರಸ್ತೆ ಸೇರಿದಂತೆ ಗುಣಮಟ್ಟದ ರಸ್ತೆಗಳ ಸುಧಾರಣೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಸುಭಾಶ್ಚಂದ್ರ ಕಟಕಟಿ, ಪಿಡಬ್ಲುಡಿ ಎಇಇ ಪರಶುರಾಮ ಮುಷ್ಟೂಕರ್, ತಾಪಂ ಇಓ ಅಮರೇಶ ಪಾಟೀಲ, ಅಮರನಾಥರಡ್ಡಿ ವಂಕಸಂಬ್ರ, ಬನ್ನಪ್ಪಗೌಡ ವಂಕಸಂಬ್ರ, ಶಂಕ್ರಪ್ಪ ಕಾಳಗಿ, ಶರಣಗೌಡ, ಸಾಯಪ್ಪ, ಗೋಪಾಲ, ಶಿವರಾಜ, ಜಾನಪ್ಪ, ಶಂಕರರಡ್ಡಿ ಯಲಸತ್ತಿ, ವೀರೇಂದ್ರರಡ್ಡಿ ಯಲಸ್ತಕಂದಕೂರ, ಆನಂದ ವಡವಟ್, ಗುರುನಾಥರಡ್ಡಿ, ಮಲ್ಲಿಕಾರ್ಜುನ ಅರುಣಿ, ನರಸಪ್ಪ ಕವಡೆ, ಪರ್ವತರಡ್ಡಿ ಕಾಳಬೆಳಗುಂದಿ, ರಾಘವೇಂದ್ರ ಜೈಗ್ರಾಮ, ಭೀಮರಾಯ ಗುಡ್ಲಗುಂಟಾ ಸೇರಿದಂತೆ ಇತರರಿದ್ದರು.

ಮಾಧ್ವಾರ ಗ್ರಾಮದಲ್ಲಿ ಜನರ ಸಮಸ್ಯೆ ಆಲಿಸಿದ ಶಾಸಕ ಕಂದಕೂರ

ಮಾಧ್ವಾರ ಗ್ರಾಮದ ವಾರ್ಡ್ ನಂ 1ರಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಮಳೆ ಬಂದರೆ ಸಾಕು ಇಡೀ ಅಂಗನವಾಡಿಯಲ್ಲಿ ನೀರು ನಿಲ್ಲುತ್ತವೆ. ಇದರಿಂದ ಮಕ್ಕಳಿಗೆ ತೀವ್ರ ತೊಂದರೆಯಾಗುತ್ತಿದ್ದು, ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಶಾಸಕ ಶರಣಗೌಡ ಕಂದಕೂರ ಅವರಲ್ಲಿ ಮನವಿ ಮಾಡಿದರು.

ಇದೇ ವೇಳೆ ತಾಪಂ ಇಓ ಅವರಿಗೆ ಕ್ರಮಕೈಗೊಳ್ಳುವಂತೆ ಸೂಚಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗೆ ಫೋನ್ ಮಾಡಿ ಅಂಗನವಾಡಿ ಸಮಸ್ಯೆಯನ್ನು ಪರಿಶೀಲಿಸಿ, ಕ್ರಮಕೈಗೊಳ್ಳುವಂತೆ ತಿಳಿಸಿದರು.

ಕಳೆದ 2 ವರ್ಷಗಳಿಂದ ಹಲವು ಗ್ರಾಮ ಮತ್ತು ತಾಂಡಾಗಳಲ್ಲಿ ಶಾಲೆ, ಆಸ್ಪತ್ರೆ, ಅಂಗನವಾಡಿ ನಿರ್ಮಾಣ ಮಾಡಿದ್ದೇವೆ, ಆದರೂ ಇನ್ನೂ ಹೆಚ್ಚಿನ ರೀತಿಯಲ್ಲಿ ಕಾಮಗಾರಿಗಳನ್ನು ನಿರ್ವಹಿಸುತ್ತೇವೆ, ಮುಂದಿನ ದಿನಗಳಲ್ಲಿ ರಸ್ತೆ, ಚರಂಡಿ ಸೇರಿದಂತೆ ಹಲವು ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಮುಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ನೀಡುತ್ತೇನೆ ಎಂದು ಹೇಳಿದರು.

ವಂಕ್ರಸಂಬ್ರ ಗ್ರಾಮದ ಜನರ ಮನವಿ ಆಲಿಸಿದ ಶಾಸಕರು, ಕೂಡಲೇ ವಿದ್ಯುತ್ ಸಮಸ್ಯೆ ನಿವಾರಿಸಬೇಕು ಎಂದು ಜೆಸ್ಕಾಂ ಅಧಿಕಾರಿ ರಾಠೋಡ ಅವರಿಗೆ ಸೂಚಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X