ಯಾದಗಿರಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಚಾಂದ್ ಪಾಶ ಗುರುಮಠಕಲ್ ನೇಮಕ

ಯಾದಗಿರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ರಾಜ್ಯಾಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ ಹಿರಿಯ ಕಾಂಗ್ರೆಸ್ ಮುಖಂಡರಾದ ಚಾಂದ್ ಪಾಶ ಗುರುಮಠಕಲ್ ಅವರನ್ನು ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಸರೆಡ್ಡಿ ಎಂ. ಪಾಟೀಲ್ ಅವರು ನೂತನ ಕಾರ್ಯದರ್ಶಿ ಚಾಂದ್ ಪಾಶ ಅವರಿಗೆ ಅಧಿಕೃತ ಆದೇಶ ಪತ್ರವನ್ನು ಹಸ್ತಾಂತರಿಸಿ, ಶಾಲು ಹೊದಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಸರೆಡ್ಡಿ ಎಂ. ಪಾಟೀಲ್, ಚಾಂದ್ ಪಾಶ ಅವರ ಪಕ್ಷನಿಷ್ಠೆ ಹಾಗೂ ಸೇವೆಯನ್ನು ಗುರುತಿಸಿ ಈ ಹುದ್ದೆಗೆ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಅವರಿಗೆ ವಹಿಸಲಾದ ಹೊಣೆಯನ್ನು ನಿಷ್ಠೆಯಿಂದ ನಿರ್ವಹಿಸಿ, ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು. ಜೊತೆಗೆ ಕಿರಿಯ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ಸಹಕಾರದೊಂದಿಗೆ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ಸೂಚಿಸಿದರು.
ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ಜನಸಾಮಾನ್ಯರಿಗೆ ತಲುಪಿಸಿ ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ಅವರು ಕರೆ ನೀಡಿದರು.
ನೂತನ ಕಾರ್ಯದರ್ಶಿಯಾಗಿ ನೇಮಕಗೊಂಡ ಚಾಂದ್ ಪಾಶ ಗುರುಮಠಕಲ್ ಮಾತನಾಡಿ, ಯಾದಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಿಡಿತವನ್ನು ಗಟ್ಟಿಗೊಳಿಸಲು ಸಾಧ್ಯವಾದಷ್ಟು ಶ್ರಮಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅಲ್ಲಾ ಪಾಟೀಲ್, ಶಹಾಪುರ ಶರಣಪ್ಪ ಮೊಟನಹಳ್ಳಿ, ಮಾಣಿಕ್ ಮುಕಡಿ, ಬಸವರಾಜ್ ಬಾಚವಾರ್, ಸಾಯಪ್ಪ ಪೆದ್ದಬೋಯಿ, ತಿಮಯ್ಯ ನಾಯಕ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿರಿಯ ಹಾಗೂ ಕಿರಿಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.







