Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ದಲಿತರನ್ನು ರಾಜಕೀಯವಾಗಿ ದಮನ ಮಾಡಿದ್ದೇ...

ದಲಿತರನ್ನು ರಾಜಕೀಯವಾಗಿ ದಮನ ಮಾಡಿದ್ದೇ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ31 Oct 2026 6:37 PM IST
share
ದಲಿತರನ್ನು ರಾಜಕೀಯವಾಗಿ ದಮನ ಮಾಡಿದ್ದೇ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

ಶಹಾಪುರ: ಕಾಂಗ್ರೆಸ್ ಪಕ್ಷವು ದಶಕಗಳಿಂದ ದಲಿತರನ್ನು ರಾಜಕೀಯವಾಗಿ ಬಳಸಿಕೊಂಡು, ಅವರ ಅಭಿವೃದ್ಧಿ ಮತ್ತು ರಾಜಕೀಯ ಪ್ರಾತಿನಿಧ್ಯಕ್ಕೆ ಅಡ್ಡಿಪಡಿಸುತ್ತಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

ನಗರದ ಮಾತೋಶ್ರೀ ಸಭಾಂಗಣದಲ್ಲಿ ನಡೆದ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಪಕ್ಷ ಅನ್ಯಾಯ ಮಾಡಿದೆ. ಅವರನ್ನು ಚುನಾವಣೆಯಲ್ಲಿ ಸೋಲಿಸುವ ಮೂಲಕ ರಾಜಕೀಯವಾಗಿ ಹತ್ತಿಕ್ಕಲು ಪ್ರಯತ್ನಿಸಿತ್ತು. ಇಂದಿಗೂ ದಲಿತ ಸಮುದಾಯವನ್ನು ಮತಬ್ಯಾಂಕ್ ಆಗಿ ಬಳಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ದಲಿತರು ಕಾಂಗ್ರೆಸ್ ಪಕ್ಷದ ರಾಜಕೀಯ ತಂತ್ರಗಳನ್ನು ಅರ್ಥಮಾಡಿಕೊಂಡು ಜಾಗೃತರಾಗಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್ ಪಕ್ಷವು ದಲಿತರ ಅಭಿವೃದ್ಧಿಯ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದು, ಶೋಷಿತ ಮತ್ತು ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳಿಗಾಗಿ ಜಾಗೃತರಾಗಬೇಕು. ಡಾ. ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅರಿತುಕೊಂಡು ರಾಜಕೀಯವಾಗಿ ಸ್ವಾವಲಂಬಿಗಳಾಗಬೇಕು ಎಂದರು.

ದಲಿತ ಹಿರಿಯ ಮುಖಂಡ ಮಲ್ಲಿಕಾರ್ಜುನ ಪೂಜಾರಿ ಅವರು ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾಗಿರುವುದು ಪಕ್ಷದ ಸಂಘಟನೆಗೆ ಬಲ ನೀಡಲಿದೆ. ಪಕ್ಷದ ಸಿದ್ಧಾಂತಗಳನ್ನು ಒಪ್ಪಿಕೊಂಡು ಸಂಘಟನೆಯ ಬಲವರ್ಧನೆಗೆ ಶ್ರಮಿಸುವ ಮೂಲಕ ತಮ್ಮ ಮುಂದಿನ ರಾಜಕೀಯ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರನೂರಿನ ಶರಣಗೌಡ ವಣಿಕ್ಯಾಳ ಅವರ ಬೆಂಬಲಿಗರು, ಖಾನಾಪುರ, ಹೊಸಕೇರಾ ಸೇರಿದಂತೆ ವಿವಿಧ ಗ್ರಾಮಗಳ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.

ಬಿಜೆಪಿ ಮುಖಂಡ ಅಮೀನರಡ್ಡಿ ಯಾಳಗಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಂಗ್ರೆಸ್ ಶಾಸಕರ ದರ್ಪದ ಆಡಳಿತದಿಂದ ಬೇಸತ್ತು ಕ್ಷೇತ್ರದ ಜನರು ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾರ್ಯಕರ್ತರು ಈಗಿನಿಂದಲೇ ಸಂಘಟಿತರಾಗಬೇಕು ಎಂದರು. ಕ್ಷೇತ್ರದಲ್ಲಿ ಶಾಸಕರ ಸಂಬಂಧಿಕರೇ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯಾದಗಿರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ ಮಾತನಾಡಿದರು.

ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ಯಾದಗಿರಿ ಕ್ಷೇತ್ರದ ಬಿಜೆಪಿ ಮುಖಂಡ ಮಹೇಶರಡ್ಡಿ ಮುದ್ನಾಳ, ಹಿರಿಯ ಮುಖಂಡರಾದ ಸಿದ್ದನಗೌಡ ಕಾಡಮನೋರ, ಡಾ. ಚಂದ್ರಶೇಖರ ಸುಬೇದಾರ, ಮಲ್ಲನಗೌಡ ಏವೂರ, ಅಡಿವೆಪ್ಪ ಜಾಕಾ, ಗುರು ಕಾಮಾ, ರಾಜುಗೌಡ ಗೂಗಲ್, ರಾಜುಗೌಡ ಉಕ್ಕಿನಾಳ, ಪರಶುರಾಮ ಕುರಕುಂದಿ, ತಾಲೂಕು ಬಿಜೆಪಿ ಅಧ್ಯಕ್ಷ ತಿರುಪತಿ ಹತ್ತಿಕಟಗಿ, ನಗರ ಅಧ್ಯಕ್ಷ ಚಂದ್ರು ಯಾಳಗಿ, ದೇವು ಕೊನೇರ, ಶರಣಪ್ಪ ಸಾವೂರ, ಶರಣು ಸಂಘರ್ಷ, ಬಲಭೀಮ ಬೇವಿನಳ್ಳಿ, ಮಲ್ಲಿನಾಥ ಬಡಿಗೇರ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

Tags

CongresspoliticalDalits
share
ವಾರ್ತಾಭಾರತಿ
ವಾರ್ತಾಭಾರತಿ
Next Story
X