Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ʼಸ್ಥಳ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ʼಸ್ಥಳ ಶುದ್ದೀಕರಣʼ; ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ19 Aug 2026 2:31 PM IST
share
ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ʼಸ್ಥಳ ಶುದ್ದೀಕರಣʼ; ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಯಾದಗಿರಿ: ಉತ್ತರಾಖಂಡ ರಾಜ್ಯದ ಹಲ್ದಾನಿಯಲ್ಲಿ ಆಗಸ್ಟ್ 8ರಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿ ಭಾಷಣ ಮಾಡಿದ ಸ್ಥಳವನ್ನು ʼಶುದ್ಧೀಕರಣʼ ಮಾಡಿರುವ ಘಟನೆಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ದಲಿತ ಮುಖಂಡ ಶ್ಯಾಮಸನ್ ಮಾಳಿಕೇರಿ ಅವರು ದೇಶದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವುದಕ್ಕೆ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿರುವ ಘಟನೆಯೇ ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಂಬೇಡ್ಕರ್ ಅವರ ಕಾಲದಿಂದಲೂ ಜಾತಿ ತಾರತಮ್ಯದ ವಿರುದ್ಧ ಹೋರಾಟ ನಡೆಯುತ್ತಿದ್ದರೂ, ಇಂದಿಗೂ ದಲಿತರಿಗೆ ಹೋಟೆಲ್, ದೇವಸ್ಥಾನ, ಸಭೆ ಸಮಾರಂಭ ಗಳಲ್ಲಿಯೂ ಅವಕಾಶ ನೀಡದಂತಹ ಘಟನೆಗಳು ನಡೆಯುತ್ತಿವೆ. ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡುವ ಮೂಲಕ ಅವರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇರಕರ್ ಮಾತನಾಡಿ, ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳವನ್ನು ಶುದ್ಧೀಕರಣ ಮಾಡಿದ ಘಟನೆ ಅತ್ಯಂತ ವಿಕೃತ ಹಾಗೂ ಖಂಡನಾರ್ಹವಾಗಿದ್ದು, 21ನೇ ಶತಮಾನದ ಪ್ರಜಾಪ್ರಭುತ್ವದ ಭಾರತದಲ್ಲೂ ಜಾತಿ ತಾರತಮ್ಯದ ಮನಸ್ಥಿತಿ ಜೀವಂತವಾಗಿರುವುದು ಶೋಚನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂತಹ ಜಾತಿವಾದಿ ಮನಸ್ಥಿತಿಗೆ ಕಡಿವಾಣ ಹಾಕಬೇಕು. ಘಟನೆಯಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅಗತ್ಯವಿದ್ದಲ್ಲಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಅಧ್ಯಕ್ಷ ಬಾಬುರಾವ್ ಕಾಡ್ಲೂರ್ಗೋಪಾಲ ತೇಳಗೇರಿ, ಸೈದಪ್ಪ ಕೂಲೂರ್, ಭೀಮರಾಯ ಹೊಸ್ಮನಿ, ಪರಶುರಾಮ ಒಡೆಯರ್, ನಿಂಗಪ್ಪ ಬೀರನಾಳ್, ಹೊನ್ನಪ್ಪ ನಾಟೇಕಾರ್, ಲಾಲಪ್ಪ ತಲಾರಿ, ಸೇರಿದಂತೆ ಅನೇಕರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X