Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಗಾಂಧಿ ಸ್ಮೃತಿ ಜನಜಾಗೃತಿ...

ಸುರಪುರ | ಗಾಂಧಿ ಸ್ಮೃತಿ ಜನಜಾಗೃತಿ ಜಾಥಾ: ನಶೆ ಮುಕ್ತರಿಗೆ ಸನ್ಮಾನ

ಸರಕಾರ ಮದ್ಯ ನಿಷೇಧ ಮಾಡಲು ಸರ್ವರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ10 Oct 2026 12:08 AM IST
share
ಸುರಪುರ | ಗಾಂಧಿ ಸ್ಮೃತಿ ಜನಜಾಗೃತಿ ಜಾಥಾ: ನಶೆ ಮುಕ್ತರಿಗೆ ಸನ್ಮಾನ

ಸುರಪುರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಗಾಂಧಿ ಜಯಂತಿ ಸಂಭ್ರಮಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮೃತಿ ಮತ್ತು ಜನಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.

ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮವನ್ನು ಟಿಎಪಿಸಿಎಂಎಸ್ ಅಧ್ಯಕ್ಷ ರಾಜಾ ಸಂತೋಷ ನಾಯಕ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಟ್ರಸ್ಟ್ ಪ್ರಾದೇಶಿಕ ನಿರ್ದೇಶಕ ದಿನೇಶ ಪೂಜಾರಿ ಮಾತನಾಡಿ, ಮಹಾತ್ಮ ಗಾಂಧಿ ಅವರು ದುಶ್ಚಟಗಳಿಂದ ಉಂಟಾಗುವ ಪರಿಣಾಮ ಅರಿತಿದ್ದರು, ದುಶ್ಚಟಗಳಿಂದ ದೇಶ ಮುಕ್ತ ಮಾಡಬೇಕು ಎನ್ನುವುದು ಅವರ ಆಸೆಯಾಗಿತ್ತು. ಅದನ್ನೆ ಆದರ್ಶವಾಗಿ ಇಟ್ಟುಕೊಂಡು ನಮ್ಮ ಸಂಸ್ಥೆಯಿಂದ ನಶೆ ಮುಕ್ತ ಜಾಗೃತಿಯ ಕುರಿತು ಅಕ್ಟೋಬರ್ 2 ರಿಂದ ಈವರೆಗೆ 127 ಕಾರ್ಯಕ್ರಮ ನಡೆಸಲಾಗಿದೆ. ಇನ್ನೂ ಅನೇಕ ಜಿಲ್ಲೆಗಳಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. 24 ಸಾವಿರ ಶಿಬಿರಗಳ ಮೂಲಕ 1 ಲಕ್ಷ 40 ಸಾವಿರ ಶಿಬಿರಾರ್ಥಿಗಳು ಮದ್ಯ ಮುಕ್ತರಾಗಿದ್ದಾರೆ. ವಿದ್ಯಾರ್ಥಿಗಳಿಗಾಗಿ ಸ್ವಾಸ್ಥ್ಯ ಸಂಕಲ್ಪ ಯೋಜನೆ ಮೂಲಕ ವಿದ್ಯಾರ್ಥಿಗಳಲ್ಲೂ ಕುಡಿತದ ಕೆಟ್ಟ ಪರಿಣಾಮದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.

ಮಂಜೂರಾತಿ ಪತ್ರ ವಿತರಿಸಿದ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಸುರೇಶ್ ಸಜ್ಜನ್ ಮಾತನಾಡಿ, ಸರಕಾರಗಳು ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುತ್ತಿದೆ, ಇದರಿಂದ ಜನ ಕುಡಿತದ ದಾಸರಾಗುತ್ತಾರೆ. ಸರಕರಾವೇ ಇದನ್ನು ನಿಷೇಧ ಮಾಡಬೇಕಿದೆ, ಇಂತಹ ಕಾರ್ಯಕ್ರಮ ಈ ಸಂಸ್ಥೆ ಮಾಡಿ ದುಶ್ಟದಿಂದ ಮುಕ್ತರಾದವರ ಕುಟುಂಬಗಳಿಗೆ ದಾರಿದೀಪವಾಗಿದೆ. ಮಹಿಳೆಯರು ಕೂಡ ಮುಂದೆ ಬಂದು ಮದ್ಯಪಾನ ನಿಷೇಧಕ್ಕೆ ಹೋರಾಟ ಮಾಡಬೇಕು. ಸರಕಾರದಿಂದ ಆಗದ ಕೆಲಸವನ್ನು ಜನಜಾಗೃತಿ ವೇದಿಕೆ ಮಾಡುತ್ತಿದೆ.

ಅಧ್ಯಕ್ಷತೆ ವಹಿಸಿದ್ದ ನಾಗರತ್ನ ಅನಪೂರ ಮಾತನಾಡಿ, ಟ್ರಸ್ಟ್ ಕೇವಲ ಕುಡಿತ ಮಾತ್ರ ಬಿಡಿಸುವುದಲ್ಲ ಬದುಕಿಗೆ ಬೇಕಾಗುವ ಒಳ್ಳೆ ವಿಚಾರ ಶಿಬಿರದಲ್ಲಿ ಕಲಿಸಲಾಗುತ್ತದೆ.ಈ ಸಂಸ್ಥೆ ಮಹಿಳೆಯರ ಉಪ ಜೀವನಕ್ಕೆ ಅನೇಕ ಯೋಜನೆಗಳ ಮೂಲಕ ನೆರವಾಗುವುದು, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ,ನಿರ್ವಸತಿಯವರಿಗೆ ಮನೆ ಸೇರಿ ಹಲವು ರೀತಿಯ ನೆರವು ಸಂಸ್ಥೆ ನೀಡುವ ಶ್ರೀಗಳ ಸೇವೆ ಪೂಜ್ಯನೀಯವಾಗಿದೆ ಎಂದರು.

ವೇದಿಕೆಯಲ್ಲಿದ್ದ ಜಿ.ಪಂ ಮಾಜಿ ಸದಸ್ಯ ಬಸವರಾಜ ಸ್ಥಾವರಮಠ, ಚಂದ್ರಶೇಖರ ದಂಡಿನ್,ಸೂಗೂರೇಶ ವಾರದ ಮಾತನಾಡಿದರು.

ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಮಂಜುನಾಥ ಸ್ವಾಮಿ, ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಮಿಸಿದರು.ನಂತರ ಅಶಕ್ತರಿಗೆ ವಾಟರ್ ಬೆಡ್, ವ್ಹೀಲ್ ಚೇರ್,45 ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನ, ಜ್ಞಾನ ದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರ, ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ಬಹುಮಾನ ವಿತರಣೆ ಮಾಡಲಾಯಿತು.

ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದಿಂದ ವೀರಶೈವ ಕಲ್ಯಾಣ ಮಂಟಪದ ವರೆಗೆ ಜನಜಾಗೃತಿ ಜಾಥಾ ನಡೆಯಿತು.ಕಾರ್ಯಕ್ರಮದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮೆಚ್ಚುಗೆ ಪಡೆದವು.

ವೇದಿಕೆಯಲ್ಲಿ ಪತ್ರಕರ್ತ ಮಲ್ಲಿಕಾರ್ಜುನ ಮುದನೂರ, ವಕೀಲ ಜಯಲಲಿತಾ ಪಾಟೀಲ,ಈರಯ್ಯ ಹಿರೇಮಠ, ಅನಿಲ್ ರಾಂಪುರ,ಶೈಲಜಾ ರೆಡ್ಡಿ, ಬಸವರಾಜ ಸಜ್ಜನ್ ಉಪಸ್ಥಿತರಿದ್ದರು.

ಟ್ರಸ್ಟ್ ಯಾದಗಿರಿ ಯೋಜನಾಧಿಕಾರಿ ಮಂಜುನಾಥ ನಿರೂಪಿಸಿದರು, ಸುರಪುರ ತಾ.ಯೋಜನಾಧಿಕಾರಿ ನಾಗೇಶ್ ಸ್ವಾಗತಿಸಿದರು.ಪ್ರಕಾಶ ಅಂಗಡಿ ಕನ್ನೆಳ್ಳಿ ವಂದಿಸಿದರು.ಸಂಸ್ಥೆಯ ನಾಗೇಶ್,ಅನಿತಾ, ತ್ರಿವೇಣಿ ಸೇರಿದಂತೆ ಎಲ್ಲ ಸಿಬ್ಬಂದಿಗಳು ಹಾಗೂ ನೂರಾರು ಜನ ಭಾಗವಹಿಸಿದ್ದರು.

Tags

Surapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X