ಯಾದಗಿರಿ | ವಾಲ್ಮೀಕಿ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ : ಠಾಣಗುಂದಿ

ಯಾದಗಿರಿ: ಮಹರ್ಷಿ ವಾಲ್ಮೀಕಿ ನಾಯಕ ಸಂಘದ ವತಿಯಿಂದ ಅ. 7 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಮಾಜದ ವತಿಯಿಂದ ನಿರ್ಧಾರ ಮಾಡಿದ್ದೇವೆ ಎಂದು ವಾಲ್ಮೀಕಿ ನಾಯಕ ಸಮಾಜದ ಮುಖಂಡ ಭೀಮರಾಯ ಠಾಣಗುಂದಿ ಹೇಳಿದರು.
ಸೋಮವಾರ ನಗರದ ವಾಲ್ಮೀಕಿ ಭವನದಲ್ಲಿ ಆಯೋಜಿಸಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿಯನ್ನು ಉದ್ದೇಶಿಸಿ ಮಾತನಾಡಿದರು.
ವಾಲ್ಮೀಕಿ ನಾಯಕ ಸಮಾಜದ ಜನಸಂಖ್ಯೆ ನಮ್ಮ ಜಿಲ್ಲೆಯಲ್ಲಿ ಅತಿ ಹೆಚ್ಚು ಇದ್ದಾರೆ ಸಮಾಜದ ಭಾಂದವರು ಎಲ್ಲರು ಸೇರಿ ನಮ್ಮ ಕುಲ ಗುರುಗಳಾದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣವಾಗಿ ಆಚರಣೆ ಮಾಡೋಣ ಅಂದು ತಮ್ಮ ತಮ್ಮ ಗ್ರಾಮಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ ಜಯಂತಿಯಲ್ಲಿ ವಾಲ್ಮೀಕಿ ಸಮಾಜದ ಮುಖಂಡರು ಮಹಿಳೆಯರು, ಯುವಕರು, ಪಾಲ್ಗೊಂಡು ಯಶಸ್ವಿಯಾಗಿ ಕಾರ್ಯಕ್ರಮ ಮಾಡೋಣ ಎಂದು ಮನವಿ ಮಾಡಿದರು.
ಈ ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮಾಜಕ್ಕೆ ಸೇವೆ ಸಲ್ಲಿಸಿ ಶ್ರಮಿಸಿದ ಹಿರಯರನ್ನು ಗೌರವವಿಸುವುದು. ವಿಶೇಷ ಉಪನ್ಯಾಸ ನೀಡುವುದು. ಕಾರ್ಯಕ್ರಮದ ಮುಂಚಿತವಾಗಿ ನಗರದ ತಹಸೀಲ್ದಾರರ ಕಛೇರಿಯಿಂದ ವಾಲ್ಮೀಕಿ ಭವನದವರೆಗೆ ಮೆರವಣಿಗೆ ಇರುತ್ತದೆ ಎಂದು ಮಾಹಿತಿ ನೀಡಿದರು.





