ದೇವರಗೋನಾಲ | ʼಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯತಿ ಕಡೆʼ ಕಾರ್ಯಕ್ರಮ

ಸುರಪುರ: ತಾಲೂಕಿನ ದೇವರಗೋನಾಲ ಗ್ರಾಮದಲ್ಲಿ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯತಿ ಕಡೆಗೆ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅನೇಕ ಮುಖಂಡರು ಮಾತನಾಡಿ, ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳು ಸಾರ್ವಜನಿಕರ ಅನುಕೂಲಕ್ಕಾಗಿ ಜಾರಿಗೊಳಿಸಿದ್ದು,ಎಲ್ಲ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕು. ಅನ್ನ ಭಾಗ್ಯ, ಶಕ್ತಿ ಯೋಜನೆ, ಯುವನಿಧಿ ,ಗೃಹ ಲಕ್ಷ್ಮಿ, ಗೃಹ ಜ್ಯೋತಿ ಯೋಜನೆಗಳು ನಾಡಿನ ಪ್ರತಿ ಮನೆಗೆ ತಲುಪಿಸಿದ ಕೀರ್ತಿ ಮುಖ್ಯಮಂತ್ರಿಗಳಿಗೆ ಹಾಗೂ ಸರಕಾರಕ್ಕೆ ಸಲ್ಲುತ್ತದೆ. ಗ್ಯಾರಂಟಿ ಯೋಜನೆ ಪ್ರತಿ ಫಲಾನುಭವಿಗೆ ತಲುಪಿಸುವ ಜವಬ್ದಾರಿ ಅಧಿಕಾರಿಗಳ ಮೇಲಿದೆ. ಅಧಿಕಾರಿಗಳು ಲೋಪ ಎಸಗಿದಲ್ಲಿ ಅದಕ್ಕೆ ಅಧಿಕಾರಿಗಳೆ ಹೊಣೆಯಾಗಲಿದ್ದೀರಿ ಎಂದು ಎಚ್ಚರಿಕೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಬೀರಲಿಂಗ ಬಾದ್ಯಾಪುರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ರಮೇಶ ದೊರೆ ಆಲ್ದಾಳ, ಮುಖಂಡ ಶಿವರಾಜ ಕಾಡ್ಲೂರ ಮಾತನಾಡಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಂಗಮ್ಮ ಎಲ್.ಕಟ್ಟಿಮನಿ, ಗ್ರಾಮ ಪಂಚಾಯತ್ ಸದಸ್ಯರಾದ ಬಸವರಾಜ, ನಿಂಗಣ್ಣ, ನಾನೆಗೌಡ, ಮಾಜಿ ಗ್ರಾ.ಪಂ ಅಧ್ಯಕ್ಷ ಭೀಮಣ್ಣ ದಿವಳಗುಡ್ಡ, ಪಿಡಿಓ ಅಮರೇಶ ದೇವದುರ್ಗ ಉಪಸ್ಥಿತರಿದ್ದರು. ಅಂಗನವಾಡಿ ಆಶಾ ಕಾರ್ಯಕರ್ತೆಯರು ಹಾಗೂ ಅನೇಕ ಜನ ಫಲಾನುಭವಿಗಳು ಭಾಗವಹಿಸಿದ್ದರು.







