Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿಯಲ್ಲಿ ಎಸ್‌ಐಆರ್ ಎಣಿಕೆ ನಮೂನೆಗಳ...

ಯಾದಗಿರಿಯಲ್ಲಿ ಎಸ್‌ಐಆರ್ ಎಣಿಕೆ ನಮೂನೆಗಳ ವಿತರಣೆ ಶೇ.100ರಷ್ಟು ಪೂರ್ಣ

ವಾರ್ತಾಭಾರತಿವಾರ್ತಾಭಾರತಿ11 July 2026 5:50 PM IST
share
ಯಾದಗಿರಿಯಲ್ಲಿ ಎಸ್‌ಐಆರ್ ಎಣಿಕೆ ನಮೂನೆಗಳ ವಿತರಣೆ ಶೇ.100ರಷ್ಟು ಪೂರ್ಣ
ಬಿಎಲ್‌ಒಗಳಿಗೆ ದಾಖಲೆ ನೀಡಿ ಸಹಕರಿಸುವಂತೆ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಮನವಿ

ಯಾದಗಿರಿ, ಜು.12: ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಯಶಸ್ವಿಯಾಗಿ ಸಾಗುತ್ತಿದ್ದು, ಮತದಾರರಿಗೆ ಎಣಿಕೆ ನಮೂನೆ (Enumeration Form–EF) ವಿತರಿಸುವ ಕಾರ್ಯವನ್ನು ಶೇ.100ರಷ್ಟು ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಾಹುಲ್ ಪಾಂಡ್ವೆ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜೂನ್ 16, 2026ರ ಅಂತ್ಯದ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 10,53,236 ಮತದಾರರು ನೋಂದಣಿಯಾಗಿದ್ದು, ಜೂನ್ 30ರಿಂದ ಬಿಎಲ್‌ಒಗಳ ಮೂಲಕ ಮನೆ–ಮನೆಗೆ ತೆರಳಿ ಎಣಿಕೆ ನಮೂನೆಗಳನ್ನು ವಿತರಿಸುವ ಕಾರ್ಯ ಕೈಗೊಳ್ಳಲಾಗಿದೆ. ಈ ಅಭಿಯಾನ ಜುಲೈ 29ರವರೆಗೆ ಮುಂದುವರಿಯಲಿದ್ದು, ಮತದಾರರ ಪಟ್ಟಿಯನ್ನು ನಿಖರ ಹಾಗೂ ದೋಷರಹಿತಗೊಳಿಸುವ ಉದ್ದೇಶದಿಂದ ಪರಿಷ್ಕರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮುದ್ರಿಸಲಾದ ಎಲ್ಲಾ 10,53,236 ಎಣಿಕೆ ನಮೂನೆಗಳು (ಶೇ.100) ಮತದಾರರಿಗೆ ಯಶಸ್ವಿಯಾಗಿ ವಿತರಿಸಲಾಗಿದೆ. ಇದುವರೆಗೆ 1,86,796 (ಶೇ.17.74) ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದ್ದು, 1,645 (ಶೇ.0.16) ಅರ್ಜಿಗಳು ಆನ್‌ಲೈನ್ ಮೂಲಕ ಸ್ವೀಕರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪರಿಶೀಲನಾ ಪ್ರಕ್ರಿಯೆಯಲ್ಲಿ ಒಟ್ಟು 2,598 ಮತದಾರರನ್ನು ವಿವಿಧ ಕಾರಣಗಳಿಂದ ಗುರುತಿಸಲಾಗಿದ್ದು, ಇವರಲ್ಲಿ 1,213 ಮಂದಿ ಮೃತಪಟ್ಟವರು, 875 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡವರು, 440 ಮಂದಿ ಬೇರೆಡೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡವರು, 53 ಮಂದಿ ಗೈರುಹಾಜರಾಗಿರುವವರು ಹಾಗೂ 17 ಪ್ರಕರಣಗಳು ಇತರೆ ಕಾರಣಗಳಿಗೆ ಸಂಬಂಧಿಸಿದವು ಎಂದು ತಿಳಿಸಿದ್ದಾರೆ.

ತಾಲ್ಲೂಕುವಾರು ಪ್ರಗತಿಯಲ್ಲಿ ಶೋರಾಪುರ, ಶಹಾಪುರ, ಯಾದಗಿರಿ, ಗುರುಮಿಠಕಲ್, ವಡಗೇರಾ ಹಾಗೂ ಹುನಸಗಿ ತಾಲ್ಲೂಕುಗಳಲ್ಲಿ ಎಣಿಕೆ ನಮೂನೆಗಳ ವಿತರಣೆ ಶೇ.100ರಷ್ಟು ಪೂರ್ಣಗೊಂಡಿದೆ. ಡಿಜಿಟಲೀಕರಣದಲ್ಲಿ ಶಹಾಪುರ ತಾಲ್ಲೂಕು ಶೇ.24.17ರೊಂದಿಗೆ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಗತಿ ಸಾಧಿಸಿದ್ದು, ಹುನಸಗಿ (ಶೇ.20.93), ಗುರುಮಿಠಕಲ್ (ಶೇ.20.76), ಶೋರಾಪುರ (ಶೇ.14.78), ವಡಗೇರಾ (ಶೇ.13.53) ಹಾಗೂ ಯಾದಗಿರಿ (ಶೇ.12.14) ತಾಲ್ಲೂಕುಗಳು ನಂತರದ ಸ್ಥಾನದಲ್ಲಿವೆ.

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಒದಗಿಸಿ ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಾಹುಲ್ ಪಾಂಡ್ವೆ ಮನವಿ ಮಾಡಿದ್ದಾರೆ.

Tags

YadgirSIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X