Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಮಹರ್ಷಿ ವಾಲ್ಮೀಕಿ ಅವರ ಜೀವನ...

ಮಹರ್ಷಿ ವಾಲ್ಮೀಕಿ ಅವರ ಜೀವನ ಪ್ರತಿಯೊಬ್ಬರಿಗೂ ದೊಡ್ಡ ಪ್ರೇರಣೆ: ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ

ವಾರ್ತಾಭಾರತಿವಾರ್ತಾಭಾರತಿ26 Oct 2026 7:32 PM IST
share
ಮಹರ್ಷಿ ವಾಲ್ಮೀಕಿ ಅವರ ಜೀವನ ಪ್ರತಿಯೊಬ್ಬರಿಗೂ ದೊಡ್ಡ ಪ್ರೇರಣೆ: ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ

ಯಾದಗಿರಿ: ರತ್ನಾಕರನಿಂದ ಆದಿಕವಿಯಾಗಿ ಮಾರ್ಪಟ್ಟ ಮಹರ್ಷಿ ವಾಲ್ಮೀಕಿ ಅವರ ಜೀವನ ಪ್ರತಿಯೊಬ್ಬರಿಗೂ ದೊಡ್ಡ ಪ್ರೇರಣೆಯಾಗಿದೆ ಎಂದು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಸಮಿತಿ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಮಾಯಣದ ಮೂಲಕ ವಾಲ್ಮೀಕಿ ಅವರು ಸಮಾಜಕ್ಕೆ ಪ್ರತಿಯೊಂದು ಪಾತ್ರದ ಸ್ಪಷ್ಟ ಆದರ್ಶಗಳನ್ನು ನೀಡಿದ್ದಾರೆ. ಮರ್ಯಾದಾ ಪುರುಷೋತ್ತಮನಾಗಿ ಒಬ್ಬ ಪುರುಷ, ಮಗ, ಮಗಳು ಹಾಗೂ ತಂದೆ ಹೇಗಿರಬೇಕು, ಒಬ್ಬ ಆದರ್ಶ ಪತ್ನಿ, ಭ್ರಾತೃ (ಸೋದರ) ಹಾಗೂ ಭಕ್ತನ ಲಕ್ಷಣಗಳೇನು ಎಂಬುದನ್ನು ವಿವರಿಸಿದ್ದಾರೆ. ಅಷ್ಟೇ ಅಲ್ಲದೆ ರಾವಣನ ಚರಿತ್ರೆಯ ಮೂಲಕ ಒಬ್ಬ ಆದರ್ಶ ತಪಸ್ವಿ ಹೇಗಿರಬೇಕು ಎಂದು ತಿಳಿಸಿಕೊಟ್ಟಿದ್ದಾರೆ. ಮಹರ್ಷಿ ವಾಲ್ಮೀಕಿ ಅವರು ನೀಡಿದ ಮಾರ್ಗದರ್ಶನ ಮತ್ತು ಆದರ್ಶಗಳನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ನಾವು ಸಲ್ಲಿಸುವ ನಿಜವಾದ ಶ್ರದ್ಧಾಂಜಲಿಯಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರು, "ಮಹರ್ಷಿ ವಾಲ್ಮೀಕಿ ಅವರನ್ನು 'ಆದಿಕವಿ' ಎಂದು ಕರೆಯಲಾಗುತ್ತದೆ. ರಾಮಾಯಣ ಮಹಾಕಾವ್ಯವು ಎಲ್ಲರಿಗೂ ಒಂದು ಮೌಲ್ಯಯುತ ಜೀವನವನ್ನು ಹೇಗೆ ನಡೆಸಬೇಕು ಎಂಬುದನ್ನು ತಿಳಿಸಿಕೊಟ್ಟಿದ್ದಾರೆ ಎಂದು ಹೇಳಿದರು.

ವಾಲ್ಮೀಕಿ ನಾಯಕ ಸಂಘದ ಜಿಲ್ಲಾಧ್ಯಕ್ಷರಾದ ಗೌಡಪ್ಪಗೌಡ ಅಲ್ದಾಳ ಮಾತನಾಡಿ, "ಸಮಾಜಕ್ಕೆ ಕೊಡುಗೆ ನೀಡಿದ ಮಹಾನ್ ವ್ಯಕ್ತಿಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಸರ್ಕಾರವು ಪ್ರತಿಯೊಂದು ಜಯಂತಿಗಳನ್ನು ಆಚರಿಸುತ್ತದೆ. ಮಹಾಪುರುಷರು ಯಾವುದೇ ಒಂದು ಜಾತಿ ಅಥವಾ ವರ್ಗಕ್ಕೆ ಸೀಮಿತರಲ್ಲ, ಅವರು ಇಡೀ ಮಾನವ ಸಮಾಜದ ಒಳಿತನ್ನು ಬಯಸಿದವರು. ಎಲ್ಲಾ ಮಹಾಪುರುಷರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ, ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು" ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಯಾದಗಿರಿ ಸರಕಾರಿ ಪದವಿ ಮಹಾವಿದ್ಯಾಲಯದ ಕನ್ನಡ ಸಹಾಯಕ ಪ್ರಾಧ್ಯಾಪಕ ನಾಗಪ್ಪ ವೈ. ಮಾನ್ಯದಾರ್ ಅವರು ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ಕಾವ್ಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಿದ್ದಣ್ಣ ಅಣಬಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಸರೋಜಾ ಜಿ.ಟಿ., ಯುವಜನ ಕ್ರೀಡಾ ಇಲಾಖೆ ಅಧಿಕಾರಿ ರಾಜು ಭಾವಿಹಳ್ಳಿ ,ಮಿನುಗಾರಿಗೆ ಇಲಾಖೆ ಅಧಿಕಾರಿ ಶರಣ ಬಸವ, ಪಿಂಚಣಿ ಮತ್ತು ಸಂಘ ಉಳಿತಾಯ ಅಧಿಕಾರಿ ಶಂಕರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು, ಬಂಧುಗಳು ಉಪಸ್ಥಿತರಿದ್ದರು


Tags

MaharshiValmikiDistrictCollectorRahul Pandve
share
ವಾರ್ತಾಭಾರತಿ
ವಾರ್ತಾಭಾರತಿ
Next Story
X