Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿಯಲ್ಲಿ ವೈದ್ಯರ ದಿನಾಚರಣೆ

ಯಾದಗಿರಿಯಲ್ಲಿ ವೈದ್ಯರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ6 July 2026 6:04 PM IST
share
ಯಾದಗಿರಿಯಲ್ಲಿ ವೈದ್ಯರ ದಿನಾಚರಣೆ
ರೋಗಿಗಳೊಂದಿಗೆ ಪ್ರೀತಿ, ವಿಶ್ವಾಸದಿಂದ ನಡೆದುಕೊಳ್ಳಿ: ವೈದ್ಯರಿಗೆ ಶಾಸಕ ಚನ್ನಾರೆಡ್ಡಿ ಪಾಟೀಲ್ ಕಿವಿಮಾತು

ಯಾದಗಿರಿ: ವೈದ್ಯರು ಎರಡನೇ ದೇವರು ಎಂಬ ಭಾವನೆ ಜನರಲ್ಲಿ ಇದೆ. ಚಿಕಿತ್ಸೆಗಾಗಿ ಬರುವ ರೋಗಿಗಳೊಂದಿಗೆ ಪ್ರೀತಿ ಮತ್ತು ವಿಶ್ವಾಸದಿಂದ ಮಾತನಾಡಿದರೆ ಅವರ ಅರ್ಧ ರೋಗವೇ ಕಡಿಮೆಯಾಗುತ್ತದೆ. ಈ ನಿಟ್ಟಿನಲ್ಲಿ ವೈದ್ಯರು ಮಾನವೀಯತೆ ಹಾಗೂ ಸ್ಪಂದನೆಯೊಂದಿಗೆ ಸೇವೆ ಸಲ್ಲಿಸಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.

ಭಾರತೀಯ ವೈದ್ಯಕೀಯ ಸಂಘ (ಐಎಂಎ) ಜಿಲ್ಲಾ ಘಟಕ ಭಾನುವಾರ ಸಂಜೆ ನಗರದ ಎನ್‌ವಿಎಂ ಸಭಾಂಗಣದಲ್ಲಿ ಆಯೋಜಿಸಿದ್ದ ವೈದ್ಯರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಅತ್ಯಾಧುನಿಕ ಉಪಕರಣಗಳು ಲಭ್ಯವಿವೆ. ಬಹುತೇಕ ರೋಗಗಳಿಗೆ ಪರಿಣಾಮಕಾರಿ ಚಿಕಿತ್ಸೆ ನೀಡುವ ಸಾಮರ್ಥ್ಯ ವೈದ್ಯಕೀಯ ಕ್ಷೇತ್ರ ಹೊಂದಿದೆ. ಆದರೆ, ರೋಗಿಗಳ ಬಗ್ಗೆ ವಿಶೇಷ ಕಾಳಜಿ ಮತ್ತು ಮಾನವೀಯತೆಯಿಂದ ಚಿಕಿತ್ಸೆ ನೀಡಿದರೆ ಅದು ಇನ್ನಷ್ಟು ಉಪಕಾರಿಯಾಗುತ್ತದೆ ಎಂದು ಹೇಳಿದರು.

ಪ್ರತಿ ವರ್ಷ ವೈದ್ಯರ ಸಂಖ್ಯೆ ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರತಿಯೊಂದು ಮನೆಯಲ್ಲೂ ಒಬ್ಬ ವೈದ್ಯರಿರುವಂತಹ ಪರಿಸ್ಥಿತಿ ನಿರ್ಮಾಣವಾಗಬಹುದು. ಮಹಿಳೆಯರು ಕಠಿಣ ಪರಿಶ್ರಮದ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಹಿರಿಯ ವೈದ್ಯರಾದ ಡಾ. ಸಂಗಮ್ಮ ಹಾಗೂ ಡಾ. ವೀರಬಸವಂತರೆಡ್ಡಿ ಮುದ್ನಾಳ ಅವರು ಯುವ ವೈದ್ಯರಿಗೆ ಮಾದರಿಯಾಗಿದ್ದಾರೆ ಎಂದು ಪ್ರಶಂಸಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ. ಚಂದ್ರಶೇಖರ ಪೂಜಾರಿ ಅವರು ಸಂಘದ ವಾರ್ಷಿಕ ಚಟುವಟಿಕೆಗಳ ಕುರಿತು ವಿವರಿಸಿ, ವೈದ್ಯಕೀಯ ಸೇವೆಯನ್ನು ಇನ್ನಷ್ಟು ಜನಪರಗೊಳಿಸಲು ಸಂಘ ಬದ್ಧವಾಗಿದೆ ಎಂದು ತಿಳಿಸಿದರು.

ಅತಿಥಿಗಳಾಗಿ ಸ್ತ್ರೀರೋಗ ತಜ್ಞೆ ಡಾ.ಸಂಗಮ್ಮ ಡಾ.ವೀರಬಸವಂತರೆಡ್ಡಿ ಮುದ್ನಾಳ ಮಾತನಾಡಿದರು. ಹಿರಿಯ ವೈದ್ಯ ಡಾ.ಸುಭಾಷ ಕರಣಗಿ ಅತಿಥಿಗಳಾಗಿ ಭಾಗವಹಿಸಿದ್ದರು. ಡಾ.ಲಕ್ಷ್ಮೀ ಪಾಟೀಲ್ ಮಾತನಾಡಿದರು. ಕಾರ್ಯಕ್ರಮ ನಿರೂಪಿಸಿದ ವೈದ್ಯ ಡಾ.ವೀರೇಶ ಜಾಕಾ, ಜಿಲ್ಲೆಯಲ್ಲಿ ವೈದ್ಯಕೀಯ ಸೌಲಭ್ಯಗಳ ಬಗ್ಗೆ ವಿವರಿಸಿದರು.

ಇದೇ ವೇಳೆ ವೈದ್ಯರಾದ ಡಾ. ಭಗವಂತ ಅನವಾರ್, ಡಾ. ಸಿ.ಎಂ.ಪಾಟೀಲ್, ಡಾ.ಸುರೇಶರೆಡ್ಡಿ, ಡಾ.ಸುರೇಖಾ ಹಾಗೂ ಡಾ.ಶೈಲಜಾ ವರ್ಮಾ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ಆರಂಭದಲ್ಲಿ ಡಾ. ಭಗವಂತ ಅನವಾರ್ ಅವರು ವೈದ್ಯರು ಮತ್ತು ರೋಗಿಗಳ ನಡುವೆ ನಡೆಯುವ ದೇಶಿ ಶೈಲಿಯ ಸಂಭಾಷಣೆ ಹಾಸ್ಯದ ಮೂಲಕ ಹೇಳಿ ಸಭಿಕರಿಗೆ ನಗೆಗಡಲಲ್ಲಿ ತೆಲಿಸಿದರು. ಡಾ.ಪ್ರಶಾಂತ ಬಾಸುತಕರ್ ಸೇರಿದಂತೆಯೇ ಇತರರಿದ್ದರು.

Tags

YadgirDoctors' Day
share
ವಾರ್ತಾಭಾರತಿ
ವಾರ್ತಾಭಾರತಿ
Next Story
X