ಡಾ. ಶ್ಯಾಮಪ್ರಸಾದ್ ಮುಖರ್ಜಿ ಶ್ರೇಷ್ಠ ರಾಷ್ಟ್ರೀಯ ನಾಯಕ: ಮಹೇಶರಡ್ಡಿ ಮುದ್ನಾ

ಯಾದಗಿರಿ: ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಜನ್ಮದಿನದ ಮತ್ತು ಮಾಜಿ ಉಪ ಪ್ರಧಾನಿ ಮಂತ್ರಿ ಬಾಬು ಜಗಜೀವನರಾಂ ಅವರ ಪುಣ್ಯ ಸ್ಮರಣೆ ಪ್ರಯುಕ್ತ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಡಾ. ಮುಖರ್ಜಿ ಯವರ ಭಾವಚಿತ್ರಕ್ಕೆ ಬಾಬು ಜಗಜೀವನರಾಂ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಮಹೇಶರಡ್ಡಿ ಮುದ್ನಾಳ ಅವರು, "ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಜೀವನವೇ ಒಂದು ಸಂದೇಶ. ಅವರ ಚಿಂತನೆಗಳಿಂದ ಇಂದು ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನೂ ಧೈರ್ಯವಂತರಾಗಿ ದೇಶ ಮೊದಲು ಎಂಬ ಸಿದ್ಧಾಂತಕ್ಕೆ ಬದ್ಧರಾಗಿದ್ದಾರೆ" ಎಂದು ಹೇಳಿದರು.
ಡಾ. ಮುಖರ್ಜಿ ಅವರು ದೇಶದ ಏಕತೆ, ಸಮಗ್ರತೆ, ಸಾಂಸ್ಕೃತಿಕ ಹಿರಿಮೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶ್ರೇಷ್ಠ ರಾಷ್ಟ್ರೀಯ ನಾಯಕ. ನಮ್ಮ ಪಕ್ಷಕ್ಕೆ ಸೈದ್ಧಾಂತಿಕ ಅಡಿಪಾಯ ಹಾಕಿ ಕೊಟ್ಟ ಭಾರತೀಯ ಜನಸಂಘದ ಸ್ಥಾಪಕರು. ದೇಶದ ರಾಜಕಾರಣದಲ್ಲಿ ಒಂದು ಬಲಿಷ್ಠ ರಾಷ್ಟ್ರೀಯವಾದಿ ಸಿದ್ಧಾಂತ ಇರುವ ರಾಜಕೀಯ ಪರಿವಾರಕ್ಕೆ ನಾಂದಿ ಹಾಡಿದವರು. 370 ನೇ ವಿಧಿಯನ್ನು ವಿರೋಧಿಸಿ ಜಮ್ಮು ಮತ್ತು ಕಾಶ್ಮೀರವನ್ನು ಭಾರತದೊಂದಿಗೆ ಸಂಪೂರ್ಣವಾಗಿ ಒಗ್ಗೂಡಿಸಲು ಗಟ್ಟಿಯಾಗಿ ನಿಂತು, ಅದಕ್ಕಾಗಿ ತಮ್ಮ ಪ್ರಾಣವನ್ನೇ ಸಮರ್ಪಿಸಿದ ಧೀಮಂತ ನಾಯಕ ಎಂದು ಅವರು ನೆನಪಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಕ್ತಾರ ಹಣಮಂತ ಇಟಗಿ, ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟರೆಡ್ಡಿ ಅಬ್ಬೆತುಮಕೂರು, ಮಾಜಿ ಯುಡ ಅಧ್ಯಕ್ಷ ರುದ್ರುಗೌಡ ಪಾಟೀಲ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಆರ್ ಸಾಹುಕಾರ, ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ಹೊನಿಗೇರಿ,ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೆರಿ, ಮೌನೇಶ್ ಬೆಳಿಗೇರ,ಶಕುಂತಲಾ ಜಿ, ಸ್ನೇಹ ರಸಳಕರ್, ಚಂದ್ರಕಲಾ ಕೀಲನಕೇರ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ರಮೇಶ ದೊಡಮನಿ ಮತ್ತು ಮಲ್ಲಿಕಾರ್ಜುನ ಕಟ್ಟಿಮನಿ,ಧಾನ್ಯ ನಾಯಕ ಮುದ್ನಾಳ ತಾಂಡಾ,ಲಕ್ಷ್ಮಿಪುತ್ರ ಮಾಲಿಪಾಟೀಲ,ಮಲ್ಲು ಕೊಲಿವಾಡ, ಶಿವಣ್ಣ ಪಾಚಂಳ, ಮಲ್ಲುಗೌಡ ತಳಕ, ಮಲ್ಲಿಕಾರ್ಜುನ ಮುದ್ನಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.