Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಬೆಳೆ ವಿಮೆ ಮಾಡಿಸಿಕೊಳ್ಳಲು ಹಳ್ಳಿಗಳಲ್ಲಿ...

ಬೆಳೆ ವಿಮೆ ಮಾಡಿಸಿಕೊಳ್ಳಲು ಹಳ್ಳಿಗಳಲ್ಲಿ ಡಂಗುರ ಸಾರಿ ಜಾಗೃತಿ ಮೂಡಿಸಲು ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ6 Aug 2026 7:36 PM IST
share
ಬೆಳೆ ವಿಮೆ ಮಾಡಿಸಿಕೊಳ್ಳಲು ಹಳ್ಳಿಗಳಲ್ಲಿ ಡಂಗುರ ಸಾರಿ ಜಾಗೃತಿ ಮೂಡಿಸಲು ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ಸೂಚನೆ

ಯಾದಗಿರಿ: ಮಳೆಯ ಕೊರತೆಯಿಂದ ತಾಲೂಕಿನಾದ್ಯಂತ ಬೆಳೆಗಳು ಒಣಗುತ್ತಿದ್ದು, ಪ್ರತಿಯೊಬ್ಬ ರೈತರೂ ಆಗಸ್ಟ್‌ 10ರೊಳಗೆ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ಕರೆ ನೀಡಿದರು.

ತಾಲೂಕಿನ ಮುಡಬೂಳ ಗ್ರಾಮದ ಹೊಲಗಳಿಗೆ ಗುರುವಾರ ಭೇಟಿ ನೀಡಿ ಬೆಳೆ ಪರಿಸ್ಥಿತಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 10 ಕೊನೆಯ ದಿನವಾಗಿರುವುದರಿಂದ ಪ್ರತಿ ಗ್ರಾಮದಲ್ಲೂ ಡಂಗೂರ ಸಾರಿ ರೈತರಿಗೆ ಮಾಹಿತಿ ನೀಡುವಂತೆ ತಾಲೂಕು ಪಂಚಾಯಿತಿ ಇಒ ಹಾಗೂ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಮಳೆಯ ಅಭಾವದಿಂದ ಉಂಟಾಗಿರುವ ಬೆಳೆ ಹಾನಿಯ ಸಮಗ್ರ ವರದಿಯನ್ನು ತಕ್ಷಣ ಸಿದ್ಧಪಡಿಸಿ ಕಂದಾಯ ಇಲಾಖೆಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದರು.

ಕಳೆದ ವರ್ಷ ಕೇವಲ 1,700 ರೈತರು ಬೆಳೆ ವಿಮೆ ಮಾಡಿಸಿಕೊಂಡಿದ್ದರೆ, ಈ ಬಾರಿ ಈಗಾಗಲೇ ಸುಮಾರು 10 ಸಾವಿರ ರೈತರು ವಿಮೆ ಮಾಡಿಸಿರುವ ಮಾಹಿತಿ ಕೃಷಿ ಇಲಾಖೆಯಿಂದ ಲಭ್ಯವಾಗಿದೆ. ಉಳಿದ ರೈತರೂ ವಿಳಂಬ ಮಾಡದೆ ವಿಮೆ ಮಾಡಿಸಿಕೊಳ್ಳುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು.

ರಾಜ್ಯದ ಎಲ್ಲ ಜಿಲ್ಲೆಗಳ ಮಳೆ ಹಾಗೂ ಬೆಳೆ ಹಾನಿ ವರದಿಗಳನ್ನು ಪರಿಶೀಲಿಸಿದ ಬಳಿಕ ಆಗಸ್ಟ್‌ ಕೊನೆಯ ವಾರ ಅಥವಾ ಸೆಪ್ಟೆಂಬರ್‌ ಮೊದಲ ವಾರದಲ್ಲಿ ಬರ ಘೋಷಣೆ ಮತ್ತು ಪರಿಹಾರ ಕುರಿತು ಮುಖ್ಯಮಂತ್ರಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ರಸಗೊಬ್ಬರ ವಿತರಣೆಯಲ್ಲಿ ಅಕ್ರಮಗಳ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಟೋಕನ್ ವ್ಯವಸ್ಥೆಯ ಮೂಲಕವೇ ರಸಗೊಬ್ಬರ ವಿತರಣೆ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಕಡೆಚೂರು ದುರಂತ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ :

ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಮೂವರು ಕಾರ್ಮಿಕರ ಸಾವಿನ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಸಚಿವರು, ಪ್ರಕರಣದ ಸಮಗ್ರ ತನಿಖೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಜನರ ಜೀವಕ್ಕೆ ಅಪಾಯ ಉಂಟುಮಾಡುವ ಪರಿಸ್ಥಿತಿಯನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೂ ಅಗತ್ಯ ನಿರ್ದೇಶನ ನೀಡಲಾಗುವುದು. ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಮೃತರ ಕುಟುಂಬಗಳಿಗೆ ಕಂಪನಿ ಹಾಗೂ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಡ್ಯಾಂಗಳು ಭರ್ತಿಯಾಗಿದ್ದು, ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬೆಳೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ತೊಂದರೆಯಾಗುವುದಿಲ್ಲ ಎಂದು ಸಚಿವರು ತಿಳಿಸಿದರು.

ಅದ್ಧೂರಿ ಸ್ವಾಗತ :

ಮುಡಬೂಳ ಗ್ರಾಮದ ಕ್ರಾಸ್ ಬಳಿ ಸಚಿವ ಶರಣಪ್ರಕಾಶ ಪಾಟೀಲ್ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಪಟಾಕಿ ಸಿಡಿಸಿ, ಬೃಹತ್ ಹಾರ ಹಾಕುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದರು.

ಶಹಾಪುರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಮನವಿ :

ಈ ಸಂದರ್ಭದಲ್ಲಿ ಮುಡಬೂಳ ಗ್ರಾಮದ ಅಶೋಕ ಮಲ್ಲಾಬಾದಿ ಅವರು ಶಹಾಪುರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು. ಸಮರ್ಪಕ ಮಳೆಯಿಲ್ಲದೆ ಹತ್ತಿ, ತೊಗರಿ ಸೇರಿದಂತೆ ಮುಂಗಾರು ಬೆಳೆಗಳು ತೇವಾಂಶದ ಕೊರತೆಯಿಂದ ಬಾಡಿದ್ದು, ರೈತರು ಎಕರೆಗೆ ಸುಮಾರು 25 ಸಾವಿರ ರೂ. ವೆಚ್ಚ ಮಾಡಿದ್ದರೂ ಭಾರೀ ನಷ್ಟ ಅನುಭವಿಸಿದ್ದಾರೆ. ಆದ್ದರಿಂದ ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು ಹಾಗೂ ರೈತರ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ‌ ಮಾಜಿ ಸಚಿವ, ಶಾಸಕ ಶರಣಬಸಪ್ಪ ದರ್ಶನಾಪುರ, ಜಿಲ್ಲಾಧಿಕಾರಿ ಶ್ರೀ ರಾಹುಲ್ ತುಕಾರಾಮ ಪಾಂಡ್ವೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಕೃಷಿ ಜಂಟಿ ನಿರ್ದೇಶಕ ಶ್ರೀ ರತೇಂದ್ರನಾಥ ಸುಗೂರ್, ತಾಲೂಕು ಪಕ್ಷದ ಅಧ್ಯಕ್ಷ ಶಿವಮಾಂತಪ್ಪ ಸಾಹು, ಮುಖಂಡರಾದ ಸಂಗಣ್ಣಗೌಡ ಮಾಲಿಪಾಟೀಲ, ಅಶೋಕ್ ಮಲ್ಲಾಬಾದಿ, ಬಸವರಾಜ ಮುದ್ನೂರ, ಶಾಂತಗೌಡ ಮಾಲಿಪಾಟೀಲ್, ಮಲ್ಲನಗೌಡ ಮಾಲಿಪಾಟೀಲ್, ಬಸವಲಿಂಗಪ್ಪ ಹವಾಲ್ದಾರ್, ಬಸವರಾಜ ಹವಾಲ್ದಾರ್, ಕೃಷ್ಣಪ್ಪ ನಾಯ್ಕೊಡಿ, ಗುರುರಾಜ ಕುಲಕರ್ಣಿ, ಗುರಣ್ಣ ಬಡಕಲ್, ಚನ್ನಬಸಪ್ಪ, ಶ್ರೀಶೈಲಪ್ಪ ಸಾಹು, ಮಲ್ಲಿಕಾರ್ಜುನ ಹೂಸಳ್ಳಿ, ದ್ಯಾವಣ್ಣ ಕುನ್ನೂರು,‌ ಮೈಲಾರಿ ಪೂಜಾರಿ, ವೆಂಕಣ್ಣ ಯಾದವ್, ಹಣಮಂತ ಗಡಂಗ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ರೈತರು ಹಾಗೂ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Dr.Sharanaprakash Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X