Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರು ಕೈಬಿಡಬಾರದು : ನಟ ಪ್ರಕಾಶ್ ರೈ

‘ಎಸ್‌ಐಆರ್ ಪರಿಶೋಧನೆ ಮತ್ತು ಪ್ರತಿರೋಧ ಪ್ರವಾಸ’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ23 Sept 2026 8:06 PM IST
share
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರು ಕೈಬಿಡಬಾರದು : ನಟ ಪ್ರಕಾಶ್ ರೈ

ಶಹಾಪುರ: ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಯಾವುದೇ ಕಾರಣಕ್ಕೂ ಕೈಬಿಡಬಾರದು. ಮತದಾನದ ಹಕ್ಕಿನ ರಕ್ಷಣೆಗೆ ಎಲ್ಲರೂ ಜಾಗೃತರಾಗಬೇಕು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ಹೇಳಿದರು.

ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ‘ಎಸ್‌ಐಆರ್ ಪರಿಶೋಧನೆ ಮತ್ತು ಪ್ರತಿರೋಧ ಪ್ರವಾಸ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ನಿರೀಕ್ಷೆಗೂ ಮೀರಿದ ಪರಿಣಾಮಗಳನ್ನು ಉಂಟುಮಾಡಿದೆ ಎಂದು ಆರೋಪಿಸಿದರು.

ಇದು ಒಬ್ಬ ವ್ಯಕ್ತಿಯ ಮತದನಾದ ಸಮಸ್ಯೆಯಲ್ಲ, ರಾಜ್ಯದ ಮತದಾರರ ಹಕ್ಕಿಗೆ ಸಂಬಂಧಿಸಿದ ಮಹತ್ವದ ವಿಷಯವಾಗಿದೆ. ಅರ್ಹ ಮತದಾರರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಉಳಿಯುವಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹೇಳಿದರು.

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವ ಪ್ರಕ್ರಿಯೆ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಅರ್ಹ ಮತದಾರರು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳಬೇಕು. ಮತದಾನದ ಹಕ್ಕಿನ ರಕ್ಷಣೆಯ ನಿಟ್ಟಿನಲ್ಲಿ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ದೇಶದಲ್ಲಿ ಪ್ರತಿಯೊಬ್ಬರಿಗೂ ಸಮಾನ ಮತದಾನದ ಹಕ್ಕು ಇದೆ. ಸಂವಿಧಾನ ಎಲ್ಲ ನಾಗರಿಕರನ್ನು ಸಮಾನವಾಗಿ ಕಾಣುತ್ತದೆ. ಆದ್ದರಿಂದ ಮತದಾನದ ಹಕ್ಕಿನ ರಕ್ಷಣೆಗೆ ಸಮಾಜದ ಎಲ್ಲ ವರ್ಗದ ಜನರು ಜಾಗೃತರಾಗಬೇಕು ಎಂದು ಕರೆ ನೀಡಿದರು.

ಎಸ್‌ಐಆರ್ ಪ್ರಕ್ರಿಯೆಯಿಂದ ಬಡವರು, ದಲಿತರು, ಅಲೆಮಾರಿ ಸಮುದಾಯಗಳು, ಸಣ್ಣ ಸಮುದಾಯಗಳು ಹಾಗೂ ಮಧ್ಯಮ ವರ್ಗದ ಜನರು ಸಮಸ್ಯೆ ಎದುರಿಸುವ ಸಾಧ್ಯತೆ ಇದೆ ಎಂದು ಆರೋಪಿಸಿದ ಅವರು, ಸಂತ್ರಸ್ತರಿಂದ ಅಗತ್ಯ ದಾಖಲೆಗಳನ್ನು ಪಡೆದು ಸಮಸ್ಯೆಗಳನ್ನು ದಾಖಲಿಸುವ ಕಾರ್ಯ ನಡೆಯಬೇಕು ಎಂದು ಹೇಳಿದರು.

ಎಸ್‌ಐಆರ್ ಪ್ರಕ್ರಿಯೆಯ ಪರಿಣಾಮಗಳನ್ನು ಪರಿಶೀಲಿಸುವ ಉದ್ದೇಶದಿಂದ ರಾಜ್ಯದ ಆಯ್ದ 100 ಮತಗಟ್ಟೆಗಳಲ್ಲಿ ‘ನಾಗರಿಕ ಮತಕಾವಲು ಸಮಿತಿ’ಗಳ ಮೂಲಕ ಮತ ಪರಿಶೋಧನಾ ಕಾರ್ಯ ನಡೆಸಲಾಗುತ್ತಿದೆ ಎಂದು ಹೋರಾಟಗಾರರು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಲ್.ಅಶೋಕ್, ಎಸ್‌ಐಆರ್ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಪ್ರವಾಸ ಹಮ್ಮಿಕೊಳ್ಳಲಾಗಿದೆ. ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಶರಣ–ಸಂತರ ಸಮಾನತೆಯ ಆಶಯಗಳನ್ನು ಉಳಿಸುವ ನಿಟ್ಟಿನಲ್ಲಿ ಪ್ರಜಾಸತ್ತಾತ್ಮಕ ರೀತಿಯಲ್ಲಿ ಜನರು ಜಾಗೃತರಾಗಬೇಕು ಎಂದು ಕರೆ ನೀಡಿದರು.

ಲಿಂಗತ್ವ ಅಲ್ಪಸಂಖ್ಯಾತರ ಪರವಾಗಿ ಮಾತನಾಡಿದ ಮಾಯಾ ಎಸ್.ಆರ್.ನಾಯಕ್, ವಿವಿಧ ಸಾಮಾಜಿಕ ಹಿನ್ನೆಲೆಯ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಜನರು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯಲ್ಲಿ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಎಸ್‌ಐಆರ್ ಕುರಿತು ಸೆಪ್ಟೆಂಬರ್ 30ರಂದು ದಾಖಲೆಗಳೊಂದಿಗೆ ಸುದ್ದಿಗೋಷ್ಠಿ ನಡೆಸಿ ವಿವಿಧ ಅಂಶಗಳನ್ನು ಸಾರ್ವಜನಿಕರ ಮುಂದಿಡಲಾಗುವುದು ಎಂದು ಹೋರಾಟಗಾರರು ತಿಳಿಸಿದರು.

ಈ ಸಂದರ್ಭದಲ್ಲಿ ವಕೀಲ ಚೆನ್ನಬಸವ, ಮಲ್ಲಿಕಾರ್ಜುನ ಪೂಜಾರಿ, ಚೆನ್ನಪ್ಪ ಆನೆಗುಂದಿ, ಗಿರಿಯಪ್ಪಗೌಡ ಬಾಣತಿಹಾಳ, ಮರೇಪ್ಪ ಪ್ಯಾಟಿ, ಮಲ್ಲಿಕಾರ್ಜುನ ಸತ್ಯಂಪೇಟೆ, ಶ್ರೀಶೈಲ ಹೊಸ್ಮನಿ, ನಾಗಣ್ಣ ಬಡೀಗೇರ್, ಶಿವಪುತ್ರ ಜವಳಿ, ಸೈಯದ್ ಖಾಲಿದ್, ಶಿವಕುಮಾರ ತಳವಾರ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಸಾಮಾಜಿಕ ಹೋರಾಟಗಾರರು, ವಿದ್ಯಾರ್ಥಿಗಳು ಹಾಗೂ ನಾಗರಿಕರು ಉಪಸ್ಥಿತರಿದ್ದರು.

Tags

Prakash RaiSIRVoters
share
ವಾರ್ತಾಭಾರತಿ
ವಾರ್ತಾಭಾರತಿ
Next Story
X