Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿಗೆ ಒಂದು ವರ್ಷದೊಳಗೆ ಪ್ರತ್ಯೇಕ...

ಯಾದಗಿರಿಗೆ ಒಂದು ವರ್ಷದೊಳಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆ ನಿರೀಕ್ಷೆ: ಸುರೇಶ ಸಜ್ಜನ್

ವಾರ್ತಾಭಾರತಿವಾರ್ತಾಭಾರತಿ15 Oct 2026 4:39 PM IST
share
ಯಾದಗಿರಿಗೆ ಒಂದು ವರ್ಷದೊಳಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆ ನಿರೀಕ್ಷೆ: ಸುರೇಶ ಸಜ್ಜನ್

ಹುಣಸಗಿ: ಯಾದಗಿರಿ ಜಿಲ್ಲೆಗೆ ಪ್ರತ್ಯೇಕ ಜಿಲ್ಲಾ ಕೇಂದ್ರ ಸಹಕಾರ (ಡಿಸಿಸಿ) ಬ್ಯಾಂಕ್ ಸ್ಥಾಪಿಸುವ ಉದ್ದೇಶದಿಂದ ಈಗಾಗಲೇ ಪ್ರಸ್ತಾವನೆ ಹಾಗೂ ವರದಿ ಸಲ್ಲಿಸಲಾಗಿದೆ. ಮುಂದಿನ ಒಂದು ವರ್ಷದೊಳಗೆ ಬ್ಯಾಂಕ್ ಸ್ಥಾಪನೆಯಾಗುವ ನಿರೀಕ್ಷೆಯಿದೆ ಎಂದು ಕಲಬುರಗಿ–ಯಾದಗಿರಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸುರೇಶ ಸಜ್ಜನ್ ಭರವಸೆ ನೀಡಿದರು.

ಪಟ್ಟಣದ ಮಕರಂದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಹಾಗೂ ಯಾದಗಿರಿ ಸಹಕಾರ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹುಣಸಗಿ ತಾಲೂಕಿನ ಪತ್ತಿನ ಮತ್ತು ಇತರೆ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರ ಆಶಯದಂತೆ ಪ್ರತಿ ಜಿಲ್ಲೆಗೆ ಒಂದು ಡಿಸಿಸಿ ಬ್ಯಾಂಕ್ ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ. ಈ ಕುರಿತು ಈಗಾಗಲೇ ಸಂಪುಟದಲ್ಲಿಯೂ ಅನುಮೋದನೆ ದೊರೆತಿದೆ. ಯಾದಗಿರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪಿಸಲು ಅಗತ್ಯ ಪ್ರಸ್ತಾವನೆ ಹಾಗೂ ವರದಿಯನ್ನು ಸಲ್ಲಿಸಲಾಗಿದೆ. ಬ್ಯಾಂಕ್ ಸ್ಥಾಪನೆಯಿಂದ ಜಿಲ್ಲೆಯ ಸಹಕಾರ ಕ್ಷೇತ್ರಕ್ಕೆ ಮತ್ತಷ್ಟು ಬಲ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಹಕಾರ ಸಂಘಗಳು ಹೆಚ್ಚಿನ ಸಂಖ್ಯೆಯಲ್ಲಿ ಅಸ್ತಿತ್ವಕ್ಕೆ ಬರಬೇಕು. ಸಂಘಗಳ ಪದಾಧಿಕಾರಿಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುವ ಮೂಲಕ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಹಕಾರ ಒಕ್ಕೂಟದ ಜಿಲ್ಲಾಧ್ಯಕ್ಷ ಹಾಗೂ ಸಹಕಾರ ಮಹಾಮಂಡಳದ ರಾಜ್ಯ ನಿರ್ದೇಶಕ ವಿಶ್ವನಾಥ ರಡ್ಡಿ ದರ್ಶನಾಪುರ ಮಾತನಾಡಿ, ಸಹಕಾರ ಕ್ಷೇತ್ರದ ಮೂಲಕ ಜನರ ಆರ್ಥಿಕ ಮತ್ತು ಸಾಮಾಜಿಕ ಅಭ್ಯುದಯ ಸಾಧ್ಯವಿದೆ. ಸಹಕಾರ ತತ್ವಗಳನ್ನು ಅಳವಡಿಸಿಕೊಂಡು ಸಂಘಗಳ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು. ಸಹಕಾರ ಸಂಘಗಳ ಸಮರ್ಪಕ ನಿರ್ವಹಣೆ ಹಾಗೂ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಇಂತಹ ತರಬೇತಿ ಕಾರ್ಯಾಗಾರಗಳು ಸಹಕಾರಿಯಾಗಲಿವೆ ಎಂದರು.

ಜಿಲ್ಲಾ ಸಹಕಾರ ಒಕ್ಕೂಟದ ನಿವೃತ್ತ ವೃತ್ತಿಪರ ನಿರ್ದೇಶಕ ಪ್ರಕಾಶ ಅಂಗಡಿ ಕನ್ನಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಾಗಾರದ ಉದ್ದೇಶ ಹಾಗೂ ಸಹಕಾರ ಸಂಘಗಳ ಸಮರ್ಪಕ ನಿರ್ವಹಣೆಯಲ್ಲಿ ತರಬೇತಿಯ ಮಹತ್ವವನ್ನು ವಿವರಿಸಿದರು.

ಹುಣಸಗಿ ಪಟ್ಟಣ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಸವರಾಜ ಮೇಲಿನಮನಿ ಅವರು ಸಹಕಾರ ಪಿತಾಮಹರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಶಹಾಪುರದ ವಕೀಲ ಆರ್.ಪಿ. ಹಿರೇಮಠ ಅವರು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕುರಿತು ಉಪನ್ಯಾಸ ನೀಡಿದರು. ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 22, 23 ಮತ್ತು 24ರ ಅಡಿಯಲ್ಲಿ ತೆರಿಗೆ ನೋಂದಣಿಗೆ ಸಂಬಂಧಿಸಿದ ನಿಯಮಗಳು, ನೋಂದಣಿ ಪಡೆಯಬೇಕಾದ ವ್ಯಕ್ತಿಗಳು, ನೋಂದಣಿಯಿಂದ ವಿನಾಯಿತಿ ಹೊಂದಿರುವವರು ಹಾಗೂ ಕಡ್ಡಾಯ ನೋಂದಣಿ ಅಗತ್ಯವಿರುವ ವರ್ಗಗಳ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಎಂ. ನಾರಾಯಣ, ಶರಣಬಸವ ಪಾಟೀಲ್, ಶಾಂತಗೌಡ ಮುದನೂರು, ರಾಚಪ್ಪ ಪಟ್ಟಣಶೆಟ್ಟಿ, ನಂದಿನಿ ಅಂಗಡಿ, ಹೊನ್ನಪ್ಪ ದೇಸಾಯಿ ಹಾಗೂ ಷಣ್ಮುಖಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುಜಾತ ಹಿರೇಮಠ ಸ್ವಾಗತಿಸಿದರು. ಮಹಾಂತೇಶ ಮುರಾಳ ಪ್ರಾರ್ಥಿಸಿದರು. ಅನ್ನಪೂರ್ಣ ಹೇಮವಾಡಿಗಿ ನಿರೂಪಿಸಿ ವಂದಿಸಿದರು.

Tags

Yadgir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X