Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಮೊಳಕೆಯೊಡೆಯದ ಬಿತ್ತಿದ ಶೇಂಗಾ...

ಯಾದಗಿರಿ | ಮೊಳಕೆಯೊಡೆಯದ ಬಿತ್ತಿದ ಶೇಂಗಾ ಬೀಜ, ಕಂಗಾಲಾದ ರೈತರು; ಕರವೇ ನೇತೃತ್ವದಲ್ಲಿ ಎಪಿಎಂಸಿ ಮುಂದೆ ಧರಣಿ

ವಾರ್ತಾಭಾರತಿವಾರ್ತಾಭಾರತಿ2 Oct 2026 8:14 PM IST
share
ಯಾದಗಿರಿ | ಮೊಳಕೆಯೊಡೆಯದ ಬಿತ್ತಿದ ಶೇಂಗಾ ಬೀಜ, ಕಂಗಾಲಾದ ರೈತರು; ಕರವೇ ನೇತೃತ್ವದಲ್ಲಿ ಎಪಿಎಂಸಿ ಮುಂದೆ ಧರಣಿ

ಯಾದಗಿರಿ: ಬಿತ್ತಿದ ಶೇಂಗಾ ಬೀಜ ಮೊಳಕೆಯೊಡೆಯದೇ ಇರುವುದನ್ನು ಖಂಡಿಸಿ ತಾಲ್ಲೂಕಿನ ಹತ್ತಿಕುಣಿ ಭಾಗದ ರೈತರು ನಗರದ ಎಪಿಎಂಸಿ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು.

ಬಿತ್ತಿದ ಬೀಜ ಬೆಳೆಯದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ರೈತರ ಸಮಸ್ಯೆ ಆಲಿಸಿ ತಕ್ಷಣ ಸ್ಥಳಕ್ಕೆ ಭೇಟಿ ಕೊಟ್ಟ ಭೀಮುನಾಯಕ ವಾಸ್ತವ ಪರಿಸ್ಥಿತಿ ಅವಲೋಕಿಸಿದ ನಂತರ ನೇರವಾಗಿ ಎಪಿಎಂಸಿ ಕಚೇರಿಗೆ ರೈತರೊಂದಿಗೆ ಆಗಮಿಸಿ ದೀಢೀರ್ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೊದಲೇ ಬರದ ಪರಿಸ್ಥಿತಿಯಿಂದ ಕಂಗೆಟ್ಟಿರುವ ರೈತರು ಇದ್ದ ಪಂಪ್ ಸೆಟ್ ಬಳಸಿಕೊಂಡು ಶೇಂಗಾ ಬೆಳೆಯಾದರೂ ಬಿತ್ತಿಕೊಳ್ಳಲೆಂದು ಎಪಿಎಂಸಿ ಆವರಣದಲ್ಲಿ ಬೀಜ ಖರೀದಿಸಿದ್ದಾರೆ. ಬರ ಪರಿಸ್ಥಿತಿ ಇದ್ದುದರಿಂದ ಕೃಷಿ ಇಲಾಖೆಯಿಂದ ಸಬ್ಸಿಡಿ ದರದಲ್ಲಿ ಶೇಂಗಾ ಬೀಜ ಪೂರೈಕೆ ಮಾಡದೇ ಇದ್ದುದರಿಂದ ರೈತರು ಎಪಿಎಂಸಿ ಆವರಣದಲ್ಲಿ ಪೂರೈಕೆ ಮಾಡಿದ ವೈಜ್ಞಾನಿಕವಾಗಿ ಉಪಚಾರ ಮಾಡದ ಬೀಜಗಳನ್ನು ದುಬಾರಿ ದರಕ್ಕೆ ಅಂದರೆ ಕ್ವಿಂಟಾಲ್ ಗೆ 15,000ರೂ. ನಂತೆ ಖರೀದಿಸಿ ಬಿತ್ತನೆ ಮಾಡಿ ಈಗ ಮೊಳಕೆ ಒಡೆಯದೇ ಕಂಗಾಲಾಗಿದ್ದಾರೆ. ಇದಕ್ಕೆ ಪರೋಕ್ಷವಾಗಿ ಸರ್ಕಾರವೂ ಕಾರಣವಾಗಿದ್ದು, ಜೊತೆಗೆ ಅಕ್ರಮವಾಗಿ ಕಳಪೆ ಗುಣಮಟ್ಟದ ನಕಲಿ ಬೀಜ ಮಾರಾಟ ಮಾಡಿದ ಅಂಗಡಿ ಕಾರರು ನೇರ ಹೊಣೆಗಾರರಾಗಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಕಳಪೆ ಬೀಜ ಮಾರಾಟ ಮಾಡಿದ ಅಂಗಡಿಯವರಾದ ಎಸ್.ಎಂ.ಪರಡಿ, ಹರ್ಷ ಟ್ರೇಡಿಂಗ್ ಕಂಪೆನಿ, ಉಮರ ಟ್ರೇಡಿಂಗ್ ಕಂ., ರಾಮಸಮುದ್ರ ಟ್ರೇಡಿಂಗ್ ಕಂ., ನಿರ್ಮಲಾ ಟ್ರೇರ‍್ಸ್, ಚಕ್ರಕಟ್ಟಾ ಬಳಿಯ ಚಟ್ನಳ್ಳಿ ಟ್ರೇಡಿಂಗ್ ಕಂ. ಸೇರಿದಂತೆ ಇನ್ನಿತರ ಅಂಗಡಿಯವರು ಕಳಪೆ ಬೀಜ ಪೂರೈಸಿ ರೈತರಿಗೆ ವಂಚಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದು ನಾಯಕ ಹತ್ತಿಕುಣಿ, ನಿಂಗಪ್ಪ ಗುಡಗುಡಿ, ಭೀಮರಾಯ ರಾಮಸಮುದ್ರ, ಸಿದ್ದಪ್ಪ ಕೊಯಿಲೂರ, ಅಶೋಕ ನಾಯಕ, ಮಲ್ಲಿಕಾರ್ಜುನ ಕನ್ನಡಿ, ಯಲ್ಲಾಲಿಂಗ ಚಾಮನಳ್ಳಿ, ಬಸವರಾಜ ಕವಲ್ದಾರ, ಅಶೋಕ ಮಸ್ಕನಳ್ಳಿ, ಸಾಬು ವರ್ಕನಳ್ಳಿ, ಸಂತ್ರಸ್ತ ರೈತರಾದ ತಾಯಪ್ಪ ದುಗನೂರು, ಮಲ್ಲಿಕಾರ್ಜುನ ಸೋಮಣ್ಣೋರ್, ಹಣಮಂತ ದ್ಯಾರನೋರ, ಸಾಬಣ್ಣ ಗಡ್ಡಿಮನಿ, ದೇವಪ್ಪ ಕವಲ್ದಾರ, ಸಾಬಣ್ಣ ಸಕ್ರೆಪ್ಪನೋರ್, ಬಸವರಾಜ ದೇವರಳ್ಳಿ, ಚಂದಪ್ಪ ತಮ್ಮಣ್ಣೋರ್, ಚಂದ್ರಶೇಖರ ಕ್ಯಾಂಪ್, ಶಿವಾನಂದ, ಮುರುಗೇಂದ್ರ ಸೇರಿ ಅನೇಕ ರೈತರಿದ್ದರು.

Tags

farmersAPMCKarave
share
ವಾರ್ತಾಭಾರತಿ
ವಾರ್ತಾಭಾರತಿ
Next Story
X