Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಗುರುಮಠಕಲ್ | ಎಲ್ಲೇರಿ ಸರಕಾರಿ...

ಗುರುಮಠಕಲ್ | ಎಲ್ಲೇರಿ ಸರಕಾರಿ ಶಾಲೆಯಲ್ಲಿ ಮೂಲಸೌಕರ್ಯ ಕೊರತೆ, ಬಿಸಿಯೂಟದ ಅವ್ಯವಸ್ಥೆ ಆರೋಪ

ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ16 Nov 2026 7:55 PM IST
share
ಗುರುಮಠಕಲ್ | ಎಲ್ಲೇರಿ ಸರಕಾರಿ ಶಾಲೆಯಲ್ಲಿ ಮೂಲಸೌಕರ್ಯ ಕೊರತೆ, ಬಿಸಿಯೂಟದ ಅವ್ಯವಸ್ಥೆ ಆರೋಪ

ಗುರುಮಠಕಲ್: ತಾಲೂಕಿನ ಎಲ್ಲೇರಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೂಲಸೌಕರ್ಯಗಳ ಕೊರತೆ, ಮಧ್ಯಾಹ್ನದ ಬಿಸಿಯೂಟದ ಅವ್ಯವಸ್ಥೆ ಹಾಗೂ ಶಿಕ್ಷಕರ ನಿರ್ವಹಣೆಯಲ್ಲಿನ ಲೋಪಗಳಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿರುವ ಜಯ ಕರ್ನಾಟಕ ಸಂಘಟನೆ, ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಒತ್ತಾಯಿಸಿದೆ.

ತಾಲೂಕು ಅಧ್ಯಕ್ಷ ನಾಗೇಶ್ ಗದ್ದಿಗಿ ನೇತೃತ್ವದಲ್ಲಿ ಉಪತಹಶೀಲ್ದಾರ್ ಮೂಲಕ ಯಾದಗಿರಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ (ಡಿಡಿಪಿಐ) ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ನಾಗೇಶ್ ಗದ್ದಿಗಿ, ಶಾಲೆಯಲ್ಲಿ ವಿದ್ಯಾರ್ಥಿಗಳು ಊಟದ ತಟ್ಟೆ ತೊಳೆಯಲು ನೀರಿನ ವ್ಯವಸ್ಥೆಯಿಲ್ಲ. ಹೆಣ್ಣುಮಕ್ಕಳ ಶೌಚಾಲಯ ಹಾಗೂ ಅಡುಗೆ ಕೋಣೆ ಅಸ್ತವ್ಯಸ್ತಗೊಂಡಿವೆ. ತರಗತಿ ಕೊಠಡಿಗಳಲ್ಲಿ ಫ್ಯಾನ್‌ಗಳಿಲ್ಲದೆ ಮಕ್ಕಳು ತೊಂದರೆ ಅನುಭವಿಸುವಂತಾಗಿದೆ. ಕುಡಿಯುವ ನೀರಿನ ಕೊರತೆಯಿಂದಾಗಿ ವಿಶೇಷವಾಗಿ 10ನೇ ತರಗತಿಯ ವಿದ್ಯಾರ್ಥಿಗಳ ಅಮೂಲ್ಯ ಕಲಿಕಾ ಸಮಯ ವ್ಯರ್ಥವಾಗುತ್ತಿದೆ ಎಂದು ದೂರಿದರು.

ಸರ್ಕಾರದ ಯೋಜನೆಯಡಿ ಮಕ್ಕಳಿಗೆ ವಿತರಿಸಬೇಕಾದ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ಸಮರ್ಪಕವಾಗಿ ನೀಡುತ್ತಿಲ್ಲ. ಈ ಕುರಿತು ಡಿಡಿಪಿಐ ಅವರಿಗೆ ಮೌಖಿಕವಾಗಿ ದೂರು ನೀಡಿದರೂ ಯಾವುದೇ ಸುಧಾರಣೆಯಾಗಿಲ್ಲ. ಬಿಸಿಯೂಟದ ಗುಣಮಟ್ಟ ಕಳಪೆಯಾಗಿದ್ದು, ಊಟದಲ್ಲಿ ಹುಳುಗಳು ಕಂಡುಬಂದಿವೆ ಎಂಬ ದೂರುಗಳಿವೆ. ಬೆಳಗಿನ ರಾಗಿ ಗಂಜಿ ವಿತರಣೆಯಲ್ಲಿಯೂ ಲೋಪಗಳಾಗುತ್ತಿವೆ ಎಂದು ಆರೋಪಿಸಿದರು.

ಇದಲ್ಲದೆ, ಹಿಂದಿ ಹಾಗೂ ಕೃತಕ ಬುದ್ಧಿಮತ್ತೆ (ಎಐ) ವಿಷಯಗಳನ್ನು ಬೋಧಿಸಲು ಅಗತ್ಯ ಶೈಕ್ಷಣಿಕ ಅರ್ಹತೆ ಹೊಂದಿರದ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ ಎಂಬ ಆರೋಪದ ಕುರಿತು ಸಮಗ್ರ ತನಿಖೆ ನಡೆಸಬೇಕು. ಶಿಕ್ಷಕರಿಗೂ ಕೈತೊಳೆಯಲು ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

2026ರ ಜುಲೈ 27ರಂದು ಚಂಡ್ರಕಿ ಶಾಲೆಯಿಂದ ಎಲ್ಲೇರಿ ಶಾಲೆಗೆ ನಿಯೋಜನೆಗೊಂಡ ಪ್ರಭಾರಿ ಮುಖ್ಯಗುರು ಮೊಘಲಪ್ಪ ಅವರ ಬದಲಿಗೆ ಸಮಾಜ ವಿಜ್ಞಾನ ಶಿಕ್ಷಕ ಹುಸೇನಪ್ಪ ಸಕ್ರಿ ಅವರಿಗೆ ಮುಖ್ಯಗುರುಗಳ ಜವಾಬ್ದಾರಿ ಹಸ್ತಾಂತರಿಸುವಂತೆ ಡಿಡಿಪಿಐ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ. ಆದರೆ, ಆದೇಶದಂತೆ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸದೆ ವಿಳಂಬ ಮಾಡಲಾಗುತ್ತಿದೆ. ಇಲಾಖೆಯ ಆದೇಶವನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಸಂಬಂಧಪಟ್ಟ ಅಧಿಕಾರಿಗಳು ಶಾಲೆಗೆ ಖುದ್ದಾಗಿ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಬೇಕು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು, ಸ್ವಚ್ಛ ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಯುವ ಮುಖಂಡ ಕಾಶಿನಾಥ್ ಗೌಡ ಉಪಸ್ಥಿತರಿದ್ದರು.

Tags

government schoolGurumatkal
share
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X