ಮಾನವ ಕಳ್ಳ ಸಾಗಾಣಿಕೆ ಸಾಮಾಜಿಕ ಪಿಡುಗು: ನ್ಯಾ. ಮರಿಯಪ್ಪ

ಯಾದಗಿರಿ: ಮಾನವ ಕಳ್ಳ ಸಾಗಾಣಿಕೆ ಸಮಾಜಿಕ ಪಿಡುಗಾಗಿದ್ದು, ಅತಿ ಹೆಚ್ಚು ಮಹಿಳೆಯರು ಮತ್ತು ಮಕ್ಕಳು ಇದಕ್ಕೆ ಒಳಗಾಗುತ್ತಿದ್ದಾರೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ಎಷ್ಟೋ ದೌರ್ಜನ್ಯಗಳು ನಡೆಯುತ್ತಿವೆ. ಮಕ್ಕಳಿಗೆ ಯಾವುದೇ ಒಂದು ಆಸೆ ತೋರಿಸಿ ಅವರನ್ನು ದುಷ್ಕೃತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮರಿಯಪ್ಪ ಅವರು ಹೇಳಿದರು.
ಯಾದಗಿರಿ ನಗರದ ಜಿಲ್ಲಾ ಸ್ತ್ರೀ ಶಕ್ತಿ ಭವನದಲ್ಲಿ ಜು.30 ರಂದು ಇತ್ತೀಚಿನ ಕರ್ನಾಟಕ ಸರಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಹಾಗೂ ಯಾದಗಿರಿ ಸಮಗ್ರ ಶಿಶು ಸಂರಕ್ಷಣಾ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಕೀಲರಾದ ಲತಾ ನಾಯಕ್ ಅವರು ಮಾತನಾಡಿ, ಮಾನವ ಕಳ್ಳ ಸಾಗಾಣಿಕೆಗೆ ಎಷ್ಟು ಮಂದಿ ಬಲಿ ಆಗುತ್ತಿದ್ದಾರೆ. ಎಲ್ಲಿ ಎಲ್ಲಿ ಮಾನವ ಕಳ್ಳ ಸಾಗಣಿಕೆ ಆಗುತ್ತಿದೆ. ಇದು ಎಲ್ಲಾ ವರ್ಗದವರು , ವಯಸ್ಸಾದವರು ಸಹ ಮಾನವ ಕಳ್ಳ ಸಾಗಾಣಿಕೆಗೆ ಒಳಗಾಗುತ್ತಿದ್ದಾರೆ. ವಲಸೆ ಹೋದ ಕುಟುಂಬಗಳು ತಮ್ಮ ಪೋಷಕರನ್ನು ಮಕ್ಕಳು ನೋಡಿಕೋಳ್ಳವ ನೆಪದಲ್ಲಿ, ಹಣ ಸಂಪಾದನೆ ಮಾಡಲು ತಮ್ಮ ತಂದೆ ತಾಯಿಗಳು ಖಾಸಗಿ ಮಕ್ಕಳ ಪಾಲನೆ ಕೇಂದ್ರಗಳಲ್ಲಿ ಕೆಲಸಕ್ಕೆ ಕಳುಹಿಸುತ್ತಿದ್ದಾರೆ, ಇದೂ ಮಾನವ ಕಳ್ಳ ಸಾಗಣಿಕೆ ಎಂದು ಹೇಳಬಹುದು. ಮಾನವ ಕಳ್ಳ ಸಾಗಾಣಿಕೆ ಇದು ಹೀಗೆ ನಡೆಯುತ್ತಿದೆ ಎಂದು ಹೇಳೊಕೆ ಆಗಲ್ಲ, ನಮ್ಮ ಸುತ್ತಲೂ ಏನು ನಡೆಯುತ್ತಿದೆ ಎನ್ನುವುದನ್ನು ನಾವು ಗಮನಿಸಬೇಕು ಎಂದು ಹೇಳಿದರು.
ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಜಿಲ್ಲಾ ಸಂಯೋಜಕರು ಆಶಾಬೇಗಂ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರು ತಿಪ್ಪಣ್ಣ ಸಿರಸಗಿ ಅವರು ಮಾತನಾಡಿದರು. ಮಾನವ ಕಳ್ಳ ಸಾಗಾಣಿಕೆಯು ಆಧುನಿಕ ಯುಗದಲ್ಲಿನ ಗುಲಾಮಗಿರಿಯ ಒಂದು ರೂಪವಾಗಿದ್ದು, ಲಕ್ಷಾಂತರ ಅಮಾಯಕ ಜನರು ಬಲಿಯಾಗುತ್ತಿದ್ದಾರೆ. ಇಂದು ಮಾನವ ಕಳ್ಳ ಸಾಗಾಣಿಕೆ ವಿರುದ್ದ ತಡೆ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರು ತಿಪ್ಪಣ್ಣ ಸಿರಸಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿಗಳು ಗುರುರಾಜ, ಯಾದಗಿರಿ ಶಿಶು ಅಭಿವೃದ್ದಿ ಯೋಜನೆಗಳು ದೀಪಿಕಾ, ಜಿಲ್ಲಾ ಮಿಷನ್ ಸಂಯೋಜಕರು ಯಲ್ಲಪ್ಪ.ಕೆ, ಯಾದಗಿರಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಶಿಶು ಅಭಿವೃದ್ದಿ ಯೋಜನೆ ಹಿರಿಯ ಮೇಲ್ವಿಚಾರಕಿಯರು ಉಷಾ ಬಳಗನೂರು, ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಿಬ್ಬಂದಿಗಳು, ಜಿಲ್ಲಾ ಮಾತೃ ವಂದನಾ ಯೋಜನೆ ಜಿಲ್ಲಾ ಸಂಯೋಜಕರು, ಮಹಿಳೆಯರು ಇನ್ನಿತರರು ಉಪಸ್ಥಿತರಿದ್ದರು.
ಉಷಾ ಬಳಗನೂರು ಕಾರ್ಯಕ್ರಮವನ್ನು ನಿರೂಪಿಸಿದರು. ಜೆಂಡರ್ ಸೇಷಲಿಸ್ಟ್ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ವಂದನಾರ್ಪಣೆ ನೆರವೇರಿಸಿದರು.







