Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಹುಣಸಗಿ | ತಾಂಡಾಗಳ ಮೂಲಸೌಕರ್ಯ ಸಮಸ್ಯೆ...

ಹುಣಸಗಿ | ತಾಂಡಾಗಳ ಮೂಲಸೌಕರ್ಯ ಸಮಸ್ಯೆ ಪರಿಹರಿಸಲು ಬಂಜಾರಾ ಬ್ರಿಗೇಡ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ15 Oct 2026 5:35 PM IST
share
ಹುಣಸಗಿ | ತಾಂಡಾಗಳ ಮೂಲಸೌಕರ್ಯ ಸಮಸ್ಯೆ ಪರಿಹರಿಸಲು ಬಂಜಾರಾ ಬ್ರಿಗೇಡ್ ಆಗ್ರಹ

ಹುಣಸಗಿ: ತಾಲೂಕಿನ ವಿವಿಧ ತಾಂಡಾಗಳಲ್ಲಿ ವಾಸಿಸುವ ಬಂಜಾರಾ ಲಂಬಾಣಿ ಸಮುದಾಯದ ಜನರು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ, ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ಬಂಜಾರಾ ಬ್ರಿಗೇಡ್ (ರಿ.) ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಬಂಜಾರಾ ಬ್ರಿಗೇಡ್‌ನ ಯಾದಗಿರಿ ಜಿಲ್ಲಾ ಅಧ್ಯಕ್ಷ ರಮೇಶ ರಾಠೋಡ ಮಾತನಾಡಿ, ತಾಲೂಕಿನ ವಿವಿಧ ತಾಂಡಾಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಹಿಳೆಯರು ಹಾಗೂ ವಿದ್ಯಾರ್ಥಿಗಳಿಗೆ ಶೌಚಾಲಯಗಳ ಕೊರತೆ, ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ನಿರ್ಮಾಣ, ಶಿಕ್ಷಕರ ಕೊರತೆ, ಹದಗೆಟ್ಟ ರಸ್ತೆಗಳು, ಚರಂಡಿ ಅವ್ಯವಸ್ಥೆ, ವಿದ್ಯುತ್ ಹಾಗೂ ಬೀದಿ ದೀಪಗಳ ಸಮಸ್ಯೆಗಳು ಜನರನ್ನು ಕಾಡುತ್ತಿವೆ. ಈ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.

ತಾಂಡಾಗಳಲ್ಲಿರುವ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದರ ಜೊತೆಗೆ, ಅತಿಥಿ ಶಿಕ್ಷಕರ ಬದಲಿಗೆ ಖಾಯಂ ಸರ್ಕಾರಿ ಶಿಕ್ಷಕರನ್ನು ನೇಮಕ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ರಸ್ತೆ ಮತ್ತು ಚರಂಡಿ ವ್ಯವಸ್ಥೆಯನ್ನು ಸುಧಾರಿಸಿ, ಸಮರ್ಪಕ ವಿದ್ಯುತ್ ಹಾಗೂ ಬೀದಿ ದೀಪಗಳ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಸರ್ಕಾರದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸಿಗಬೇಕಾದ ಸೌಲಭ್ಯಗಳನ್ನು ಯಾವುದೇ ವಿಳಂಬವಿಲ್ಲದೆ ತಲುಪಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ತಾಂಡಾಗಳಿಗೆ ಖುದ್ದಾಗಿ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ತಾಂಡಾಗಳಲ್ಲಿನ ಮೂಲಭೂತ ಸಮಸ್ಯೆಗಳನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ತಾಲೂಕು ಆಡಳಿತಕ್ಕೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ನಾಗೇಶ್, ರಮೇಶ್, ಹೆರಲಾಲ್, ಗೋವಿಂದ್, ಗೋಪಿಲಾಲ್, ಶಾಂತಿಲಾಲ್, ಸೋಮು, ಪ್ರಕಾಶ್, ವೆಂಕಟೇಶ್, ಚಂದು ಶೇಕಪ್ಪ ಸೇರಿದಂತೆ ಕರ್ನಾಟಕ ಬಂಜಾರಾ ಬ್ರಿಗೇಡ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags

Hunasagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X