Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಹುಣಸಗಿ | ದೇವರಗಡ್ಡಿಯಲ್ಲಿ ಬಸ್ ಓಡಾಟ...

ಹುಣಸಗಿ | ದೇವರಗಡ್ಡಿಯಲ್ಲಿ ಬಸ್ ಓಡಾಟ ಆರಂಭ : ಗ್ರಾಮಸ್ಥರಲ್ಲಿ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ26 Dec 2025 7:10 PM IST
share
ಹುಣಸಗಿ | ದೇವರಗಡ್ಡಿಯಲ್ಲಿ ಬಸ್ ಓಡಾಟ ಆರಂಭ : ಗ್ರಾಮಸ್ಥರಲ್ಲಿ ಸಂಭ್ರಮ

ಹುಣಸಗಿ: ಹುಣಸಗಿ ತಾಲೂಕಿನ ಕಟ್ಟೆಕಡೆ ಗ್ರಾಮ ಹಾಗೂ ಸುಕ್ಷೇತ್ರ ದೇವರಗಡ್ಡಿ ಹಲವು ವರ್ಷಗಳಿಂದ ಸಾರಿಗೆ ಸಂಪರ್ಕದಿಂದ ವಂಚಿತವಾಗಿದ್ದು, ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಇದೀಗ ಡಿ.26ರಿಂದ ನಾರಾಯಣಪೂರ–ದೇವರಗಡ್ಡಿ ಮಾರ್ಗದಲ್ಲಿ ಬಸ್ ಓಡಾಟ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ಪೂಜೆ ಸಲ್ಲಿಸುವ ಮೂಲಕ ಸಂತಸ ವ್ಯಕ್ತಪಡಿಸಿದರು.

ನಾರಾಯಣಪೂರ ಗ್ರಾಮಕ್ಕೆ ಬಸ್‌ ಸಂಚರಿಸಲು ಹಲವು ವರ್ಷಗಳಿಂದ ಸಾರ್ವಜನಿಕರು, ಕೂಲಿ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಟಂ-ಟಂ ಅಥವಾ ಖಾಸಗಿ ವಾಹನಗಳ ಮೇಲೆ ಅವಲಂಬಿತರಾಗಿದ್ದರು. ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಸಂಚಾರ ಸಮಸ್ಯೆ ಗ್ರಾಮಸ್ಥರ ದೈನಂದಿನ ಜೀವನಕ್ಕೆ ದೊಡ್ಡ ಅಡ್ಡಿಯಾಗಿತ್ತು. ಗ್ರಾಮಸ್ಥರ ಬಹುಕಾಲದ ಬೇಡಿಕೆ ಕೊನೆಗೂ ಹಲವು ಸಂಘಟನೆಗಳು ಹಾಗೂ ಮಾಧ್ಯಮ ಸ್ನೇಹಿತರ ಶ್ರಮದಿಂದ ಈಡೇರಿದ್ದು, ದೇವರಗಡ್ಡಿಗೆ ಬಸ್ ಓಡಾಟ ಆರಂಭವಾಗಿರುವುದು ಗ್ರಾಮಕ್ಕೆ ಹೊಸ ಉತ್ಸಾಹ ತಂದಿದೆ.

ಸಾರಿಗೆ ನಿಯಂತ್ರಕರ ಮಾಹಿತಿ ಪ್ರಕಾರ, ನಾರಾಯಣಪೂರದಿಂದ ಬೆಳಿಗ್ಗೆ 8.30ಕ್ಕೆ ಹೊರಡುವ ಬಸ್ ದೇವರಗಡ್ಡಿಗೆ 9 ಗಂಟೆಗೆ ತಲುಪಲಿದೆ. ಅದೇ ರೀತಿಯಾಗಿ ಸಂಜೆ 4.30ಕ್ಕೆ ನಾರಾಯಣಪೂರದಿಂದ ಹೊರಡುವ ಬಸ್ ದೇವರಗಡ್ಡಿಗೆ 5 ಗಂಟೆಗೆ ತಲುಪಲಿದೆ.

ದೇವರಗಡ್ಡಿಗೆ ಬಸ್ ಸಂಪರ್ಕ ಕಲ್ಪಿಸಲು ಶ್ರಮಿಸಿದ ಸಾರಿಗೆ ವಿಭಾಗೀಯ ಅಧಿಕಾರಿ ವಿ.ಆರ್.ರೆಡ್ಡಿ, ಸುರಪುರ ಘಟಕ ವ್ಯವಸ್ಥಾಪಕ ಭೀಮಸಿಂಗ್ ರಾಠೋಡ್, ಸಾರಿಗೆ ನಿಯಂತ್ರಕ ಐ.ಎ.ಕರಣಿ ಹಾಗೂ ಸಂಘಟಕರ ಸಹಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ನಾರಾಯಣಪೂರದ ಮಾಧ್ಯಮ ಸ್ನೇಹಿತೆ ಪ್ರೀತಿ ರಾಠಿ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಬಳಗದ ಸದಸ್ಯರು, ಚಾಲಕ ಹಾಗೂ ನಿರ್ವಾಹಕರನ್ನು ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಾರಿಗೆ ನಿಯಂತ್ರಕ ಐ.ಎ.ಕರಣಿ, ಸಿಬ್ಬಂದಿಗಳಾದ ವಿಜಯಕುಮಾರ, ಚಂದ್ರು, ಸ್ಥಳೀಯ ಶಾಲಾ ಮಕ್ಕಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X