Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಹುಣಸಗಿ | ದಲಿತರ ಮೇಲಿನ ಹಲ್ಲೆ, ಕೊಲೆ...

ಹುಣಸಗಿ | ದಲಿತರ ಮೇಲಿನ ಹಲ್ಲೆ, ಕೊಲೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ12 Aug 2026 7:29 PM IST
share
ಹುಣಸಗಿ | ದಲಿತರ ಮೇಲಿನ ಹಲ್ಲೆ, ಕೊಲೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಹುಣಸಗಿ: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸಂಕೇಶ್ವರಹಾಳ ಗ್ರಾಮದಲ್ಲಿ ನಡೆದ ದಲಿತ ವ್ಯಕ್ತಿಯ ಕೊಲೆ ಹಾಗೂ ಸುರಪುರ ತಾಲೂಕಿನ ಶಖಾಪುರ ಎಸ್‌.ಎಚ್‌. ಗ್ರಾಮದಲ್ಲಿ ಶವ ಹೂಳಲು ನಿರಾಕರಿಸಿದ ಘಟನೆಗೆ ಸಂಬಂಧಿಸಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗಾಗಿ ಜಿಲ್ಲಾಧಿಕಾರಿಗಳು ಉನ್ನತ ಮಟ್ಟದ ತನಿಖಾ ತಂಡ ರಚಿಸಬೇಕು ಎಂದು ರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಳದ ಜಿಲ್ಲಾಧ್ಯಕ್ಷ ಕಾಶಿನಾಥ್ ಯಾದಗಿರಿ ಒತ್ತಾಯಿಸಿದರು.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಅವರು, ಜಿಲ್ಲೆ ಹಾಗೂ ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ದಲಿತರ ಮೇಲೆ ಹಲ್ಲೆ, ಕೊಲೆ ಸೇರಿದಂತೆ ದೌರ್ಜನ್ಯ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ಇದರಿಂದ ದಲಿತ ಸಮುದಾಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು.

ಹಲ್ಲೆಗೊಳಗಾದ ಸಂತ್ರಸ್ತರು ಹಾಗೂ ಅವರ ಕುಟುಂಬಗಳಿಗೆ ಸೂಕ್ತ ನ್ಯಾಯ, ರಕ್ಷಣೆ ಮತ್ತು ಪರಿಹಾರ ಒದಗಿಸಬೇಕು. ಇಂತಹ ಘಟನೆಗಳು ಕಾನೂನು ಆಳ್ವಿಕೆ, ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ ಎಂದರು.

ಜಾತಿ ಆಧಾರಿತ ಹಲ್ಲೆ, ಅವಮಾನ ಹಾಗೂ ಬೆದರಿಕೆಯಂತಹ ಘಟನೆಗಳು ನಡೆದ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ-1989ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಗ್ರಾಮೀಣ ಭಾಗಗಳಲ್ಲಿ ದಲಿತರ ಕುಂದುಕೊರತೆ ಸಭೆಗಳನ್ನು ನಿಯಮಿತವಾಗಿ ನಡೆಸಬೇಕು. ಸಂತ್ರಸ್ತರಿಗೆ ಕಾನೂನುಬದ್ಧವಾಗಿ ವಾಸಿಸಲು ಅಗತ್ಯ ಸೂರು ಹಾಗೂ ಇತರ ಸೌಲಭ್ಯಗಳನ್ನು ಒದಗಿಸಬೇಕು. ಇತ್ತೀಚೆಗೆ ನಡೆದ ಎರಡೂ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಬಂಧಿಸಿ, ಕಾನೂನು ಪ್ರಕಾರ ಶಿಕ್ಷೆಗೆ ಒಳಪಡಿಸಬೇಕು ಎಂದು ಅವರು ಒತ್ತಾಯಿಸಿದರು.

Tags

Hunasagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X