Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಹುಣಸಗಿ | ದ್ವಿಭಾಷಾ ಶಿಕ್ಷಣ ನೀತಿ...

ಹುಣಸಗಿ | ದ್ವಿಭಾಷಾ ಶಿಕ್ಷಣ ನೀತಿ ಮರುಪರಿಶೀಲನೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ11 Aug 2026 7:52 PM IST
share
ಹುಣಸಗಿ | ದ್ವಿಭಾಷಾ ಶಿಕ್ಷಣ ನೀತಿ ಮರುಪರಿಶೀಲನೆಗೆ ಆಗ್ರಹ

ಹುಣಸಗಿ: ಸರ್ಕಾರಿ ಶಾಲೆಗಳಲ್ಲಿ ಐದನೇ ತರಗತಿವರೆಗೆ ಜಾರಿಗೆ ತಂದಿರುವ ದ್ವಿಭಾಷಾ ಶಿಕ್ಷಣ ನೀತಿಯ ಸಾಧಕ-ಬಾಧಕಗಳನ್ನು ಸಮಗ್ರವಾಗಿ ಪರಿಶೀಲಿಸಿ, ಕನ್ನಡ ಭಾಷೆ ಹಾಗೂ ಕನ್ನಡ ಮಾಧ್ಯಮದ ಹಿತಾಸಕ್ತಿಯನ್ನು ಕಾಪಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ವತಿಯಿಂದ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಭಾಸಾಪ ಹುಣಸಗಿ ತಾಲೂಕು ಅಧ್ಯಕ್ಷರು, ಜೂನ್ 19ರಂದು ನಡೆದ ಸಭೆಯಲ್ಲಿ ರಾಜ್ಯ ಸರ್ಕಾರದ ನೂತನ ಶಿಕ್ಷಣ ನೀತಿಯ ಪರಿಣಾಮಗಳ ಕುರಿತು ಚರ್ಚಿಸಲಾಯಿತು. 2026-27ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ಐದನೇ ತರಗತಿವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳಲ್ಲಿ ಬೋಧಿಸುವ ದ್ವಿಭಾಷಾ ಶಿಕ್ಷಣ ಯೋಜನೆ ಜಾರಿಗೆ ತಂದಿರುವುದು ಸೂಕ್ತವಲ್ಲ ಎಂದು ಹೇಳಿದರು.

ಯೋಜನೆಯ ಅನುಷ್ಠಾನಕ್ಕೂ ಮುನ್ನ ಕನ್ನಡ ಮಾಧ್ಯಮದಲ್ಲಿ ಬೋಧಿಸುತ್ತಿದ್ದ ಶಿಕ್ಷಕರಿಗೆ ಆಂಗ್ಲ ಮಾಧ್ಯಮದಲ್ಲಿ ಪಾಠ ಮಾಡಲು ಐದು ದಿನಗಳ ತರಬೇತಿ ನೀಡಲಾಗಿದೆ. ಕನ್ನಡ ಹಾಗೂ ಆಂಗ್ಲ ಭಾಷೆಗಳಲ್ಲಿ ಪಠ್ಯಪುಸ್ತಕಗಳನ್ನು ಮುದ್ರಿಸಿ ಬೋಧನೆ ನಡೆಸಲಾಗುತ್ತಿದೆ. ಆದರೆ ದ್ವಿಭಾಷಾ ಶಿಕ್ಷಣ ಎಂದು ಹೇಳಿಕೊಂಡಿದ್ದರೂ ಕೆಲವು ಅಧ್ಯಾಯಗಳು, ಹಾಡುಗಳು ಸೇರಿದಂತೆ ಪಠ್ಯದ ಪ್ರಮುಖ ಭಾಗಗಳನ್ನು ಕೇವಲ ಆಂಗ್ಲ ಭಾಷೆಯಲ್ಲಿ ನೀಡಲಾಗಿದೆ. ಇದರಿಂದ ಪ್ರಾಥಮಿಕ ಹಂತದಲ್ಲೇ ಮಕ್ಕಳಲ್ಲಿ ಕನ್ನಡಕ್ಕಿಂತ ಆಂಗ್ಲ ಭಾಷೆಗೆ ಹೆಚ್ಚಿನ ಆದ್ಯತೆ ನೀಡುವ ವಾತಾವರಣ ನಿರ್ಮಾಣವಾಗುವ ಆತಂಕವಿದೆ ಎಂದು ಹೇಳಿದರು.

ಪರೀಕ್ಷೆಯಲ್ಲಿ ಸರಿಯಾದ ಉತ್ತರವನ್ನು ಆಂಗ್ಲ ಭಾಷೆಯಲ್ಲಿ ಬರೆದ ವಿದ್ಯಾರ್ಥಿಗಳಿಗೆ ‘ಎ+’ ಹಾಗೂ ಅದೇ ಉತ್ತರವನ್ನು ಕನ್ನಡದಲ್ಲಿ ಬರೆದ ವಿದ್ಯಾರ್ಥಿಗಳಿಗೆ ‘ಬಿ+’ ಶ್ರೇಯಾಂಕ ನೀಡುವಂತೆ ಸುತ್ತೋಲೆಯಲ್ಲಿ ಸೂಚಿಸಿರುವುದು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಇದು ವಿದ್ಯಾರ್ಥಿಗಳು ಕನ್ನಡದ ಬದಲಾಗಿ ಆಂಗ್ಲ ಭಾಷೆಯಲ್ಲೇ ಕಲಿಯಲು ಮತ್ತು ಉತ್ತರ ಬರೆಯಲು ಪರೋಕ್ಷ ಒತ್ತಡ ಹೇರುವಂತಾಗಿದೆ ಎಂದು ಅವರು ಆರೋಪಿಸಿದರು.

ಸಾಮಾಜಿಕ ಕಾರ್ಯಕರ್ತ ಬಸವರಾಜ್ ಮೇಲಿನಮನಿ ಮಾತನಾಡಿ, ಶಾಲಾ ಶಿಕ್ಷಣ ಇಲಾಖೆ 15 ಸಾವಿರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 2026ರ ಕರಡು ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ ಕನ್ನಡ ಶಿಕ್ಷಕರ ನೇಮಕಾತಿಗೆ ಅವಕಾಶ ನೀಡದಿರುವುದರ ಬಗ್ಗೆಯೂ ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ ಎಂದರು.

ವಿಜ್ಞಾನ, ಗಣಿತ ಸೇರಿದಂತೆ ವಿವಿಧ ವಿಷಯಗಳ ಶಿಕ್ಷಕರ ನೇಮಕಾತಿಗೆ ಆಂಗ್ಲ ಭಾಷಾ ಪ್ರೌಢಿಮೆಯನ್ನು ಕಡ್ಡಾಯಗೊಳಿಸಿರುವುದು ಕನ್ನಡ ಮಾಧ್ಯಮದ ಶಿಕ್ಷಣ ವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ಕನ್ನಡ ಭಾಷೆ ಹಾಗೂ ಕನ್ನಡ ಮಾಧ್ಯಮದ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಭಾಸಾಪ ಕಾರ್ಯದರ್ಶಿ ನಿಂಗಣ್ಣ ಎಣ್ಣಿವಡಿಗೇರ, ನಿತಿನ್ ತಿವಾರಿ, ಮಹೇಶ ಸ್ಥಾವರಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

EducationHunasagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X