ಹುಣಸಗಿ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಹುಣಸಗಿ: ತೀವ್ರ ಬರಗಾಲ ಹಾಗೂ ಸಾಲಬಾಧೆಯಿಂದ ಮನನೊಂದು ರೈತನೊಬ್ಬ ಬೆಳೆಗಳಿಗೆ ಬಳಸುವ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ವರದಿಯಾಗಿದೆ.
ಯಡಹಳ್ಳಿ ಗ್ರಾಮದ ದೇವಿಂದ್ರಪ್ಪ ತಂದೆ ಕೃಷ್ಣಪ್ಪ ಟೇಲರ್ (46) ಆತ್ಮಹತ್ಯೆ ಮಾಡಿಕೊಂಡಿರುವ ರೈತ ಎಂದು ತಿಳಿದುಬಂದಿದೆ.
ದೇವಿಂದ್ರಪ್ಪ ಅವರು ಸುರಪುರದ ಕರ್ನಾಟಕ ಬ್ಯಾಂಕ್‌ನಲ್ಲಿ 10 ಲಕ್ಷ ರೂ. ಸಾಲ ಹಾಗೂ ಖಾಸಗಿ ವ್ಯಕ್ತಿಗಳಿಂದ ಸುಮಾರು 10 ಲಕ್ಷ ರೂ. ಕೈಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಸಮಯಕ್ಕೆ ಸರಿಯಾಗಿ ಮಳೆ ಬಾರದೆ ತೀವ್ರ ಬರ ಆವರಿಸಿದ್ದರಿಂದ ಬಿತ್ತಿದ್ದ ಬೆಳೆ ಕೈ ಸೇರದೆ ನಷ್ಟ ಉಂಟಾಗಿತ್ತು. ಇದರಿಂದ ಸಾಲದ ಹೊರೆ ಹೆಚ್ಚಾಗಿ, ದಿಕ್ಕು ತೋಚದೆ ಮನನೊಂದು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story




