ಹುಣಸಗಿ | ಪತ್ರಕರ್ತ ಶಾಂತಿನಾಥ ಒನಕುದರಿ ಹೃದಯಾಘಾತದಿಂದ ನಿಧನ

ಹುಣಸಗಿ: ತಾಲೂಕಿನ ನಾರಾಯಣಪುರ ಗ್ರಾಮದ ಪತ್ರಕರ್ತ ಶಾಂತಿನಾಥ ಪ್ರಕಾಶ ಒನಕುದರಿ (39) ಅವರು ಬುಧವಾರ ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ, ಸಹೋದರ ಹಾಗೂ ಸಹೋದರಿಯರನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಶಾಂತಿನಾಥ ಅವರಿಗೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಲಾಗಿತ್ತು. ಅಲ್ಲದೆ, 2026ರ ಆಗಸ್ಟ್‌ನಲ್ಲಿ ತಾಲೂಕು ಆಡಳಿತದ ವತಿಯಿಂದಲೂ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿತ್ತು.
ಅವರ ಅಕಾಲಿಕ ನಿಧನಕ್ಕೆ ಪತ್ರಕರ್ತರು, ಗಣ್ಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Next Story




