Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಹುಣಸಗಿ | ಪತ್ರಕರ್ತರ ಮೇಲಿನ ಹಲ್ಲೆ,...

ಹುಣಸಗಿ | ಪತ್ರಕರ್ತರ ಮೇಲಿನ ಹಲ್ಲೆ, ಕಿರುಕುಳ ಖಂಡಿಸಿ ಮನವಿ

ವಾರ್ತಾಭಾರತಿವಾರ್ತಾಭಾರತಿ7 Oct 2026 7:59 PM IST
share
ಹುಣಸಗಿ | ಪತ್ರಕರ್ತರ ಮೇಲಿನ ಹಲ್ಲೆ, ಕಿರುಕುಳ ಖಂಡಿಸಿ ಮನವಿ

ಹುಣಸಗಿ: ದೆಹಲಿಯ ಜಂತರ್‌ ಮಂತರ್‌ನಲ್ಲಿ ಕರ್ತವ್ಯ ನಿರತ ಪತ್ರಕರ್ತರ ಮೇಲೆ ನಡೆದಿರುವ ಹಲ್ಲೆ ಹಾಗೂ ಪತ್ರಕರ್ತೆಯೊಬ್ಬರಿಗೆ ಪೊಲೀಸ್ ಅಧಿಕಾರಿಯಿಂದ ಲೈಂಗಿಕ ಕಿರುಕುಳ ನೀಡಿರುವ ಆರೋಪವನ್ನು ಖಂಡಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹುಣಸಗಿ ತಾಲೂಕು ಘಟಕದ ವತಿಯಿಂದ ಬುಧವಾರ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯ ವರದಿ ಮಾಡಲು ತೆರಳಿದ್ದ ಪತ್ರಕರ್ತರೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿರುವುದು ಹಾಗೂ ಅವರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿರುವುದಕ್ಕೆ ಸಂಘದ ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಸಂಘದ ತಾಲೂಕು ಅಧ್ಯಕ್ಷ ಬಾಲಪ್ಪ ಕುಪ್ಪಿ ಮಾತನಾಡಿ, ಪತ್ರಕರ್ತರು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಜನರ ಮುಂದಿಡುವ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಕರ್ತವ್ಯ ನಿರತ ಪತ್ರಕರ್ತರ ಮೇಲೆ ಹಲ್ಲೆ, ಬೆದರಿಕೆ ಅಥವಾ ದೌರ್ಜನ್ಯ ನಡೆಸುವುದು ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟುಮಾಡುತ್ತದೆ ಎಂದರು.

ದೆಹಲಿ ಘಟನೆಯ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕಾನೂನು ಹಾಗೂ ಇಲಾಖಾ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದೇಶದ ಯಾವುದೇ ಭಾಗದಲ್ಲಿ ಪತ್ರಕರ್ತರು ಭಯ ಅಥವಾ ಒತ್ತಡವಿಲ್ಲದೆ ವೃತ್ತಿಪರ ಕರ್ತವ್ಯ ನಿರ್ವಹಿಸುವ ವಾತಾವರಣ ನಿರ್ಮಿಸಬೇಕು. ಪತ್ರಕರ್ತರ ಮೇಲೆ ಹಲ್ಲೆ ಅಥವಾ ಕರ್ತವ್ಯಕ್ಕೆ ಅಡ್ಡಿಪಡಿಸುವ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಕಾರ್ಯದರ್ಶಿ ವೆಂಕಟಗಿರಿ ದೇಶಪಾಂಡೆ ಮಾತನಾಡಿ, ಪತ್ರಕರ್ತೆಯೊಬ್ಬರು ಲೈಂಗಿಕ ಕಿರುಕುಳದ ಕುರಿತು ದೂರು ನೀಡಲು ತೆರಳಿದ ಸಂದರ್ಭದಲ್ಲಿ ಅವರಿಗೆ ನ್ಯಾಯಯುತವಾಗಿ ಸ್ಪಂದಿಸಬೇಕು. ಸಂತ್ರಸ್ತೆಯ ಹಕ್ಕುಗಳನ್ನು ರಕ್ಷಿಸಿ, ಆರೋಪದ ಕುರಿತು ಕಾನೂನುಬದ್ಧವಾಗಿ ತನಿಖೆ ನಡೆಸಬೇಕು. ಜತೆಗೆ ಕರ್ತವ್ಯ ನಿರತ ಪತ್ರಕರ್ತರ ಸುರಕ್ಷತೆಗೆ ಅಗತ್ಯ ಮಾರ್ಗಸೂಚಿಗಳನ್ನು ಜಾರಿಗೆ ತರಬೇಕು ಎಂದರು.

ಹುಣಸಗಿ ತಾಲೂಕಿನ ಪತ್ರಕರ್ತರೊಬ್ಬರಿಗೆ ಮೊಬೈಲ್ ಕರೆ ಮೂಲಕ ಬೆದರಿಕೆ ಹಾಕಿರುವ ಆರೋಪದ ಬಗ್ಗೆಯೂ ಸೂಕ್ತ ವಿಚಾರಣೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ನಂತರ ಕೇಂದ್ರ ಗೃಹ ಸಚಿವರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಕಂದಾಯ ನಿರೀಕ್ಷಕ ಶ್ರೀಶೈಲ್ ಖಾಂದರೆ ಅವರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಪ್ರೀತಿ ರಾಠಿ, ಉಪಾಧ್ಯಕ್ಷ ಬಾಪುಗೌಡ ಮೇಟಿ, ಕಾರ್ಯದರ್ಶಿ ಸಿದ್ದನಗೌಡ ಬಿರಾದಾರ, ಕೋಶಾಧ್ಯಕ್ಷ ಮಲ್ಲಿಕಾರ್ಜುನ ಗುತ್ತೇದಾರ, ಪತ್ರಕರ್ತರಾದ ಬಸವರಾಜ್ ಮರೋಳ ಹಾಗೂ ತಾಯಪ್ಪ ರಾಮಸಮುದ್ರ ಇದ್ದರು.

Tags

journalistsHunasagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X