Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಮನೆ ಕಳ್ಳತನ ಪ್ರಕರಣ ಭೇದಿಸಿದ ಹುಣಸಗಿ...

ಮನೆ ಕಳ್ಳತನ ಪ್ರಕರಣ ಭೇದಿಸಿದ ಹುಣಸಗಿ ಪೊಲೀಸರು; 73 ಗ್ರಾಂ ಚಿನ್ನ, 2 ಲಕ್ಷ ರೂ. ನಗದು ವಶ

ವಾರ್ತಾಭಾರತಿವಾರ್ತಾಭಾರತಿ19 July 2026 5:31 PM IST
share
ಮನೆ ಕಳ್ಳತನ ಪ್ರಕರಣ ಭೇದಿಸಿದ ಹುಣಸಗಿ ಪೊಲೀಸರು; 73 ಗ್ರಾಂ ಚಿನ್ನ, 2 ಲಕ್ಷ ರೂ. ನಗದು ವಶ

ಹುಣಸಗಿ: ಮನೆ ಕಳ್ಳತನ ಪ್ರಕರಣವನ್ನು ಭೇದಿಸಿರುವ ಹುಣಸಗಿ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನಿಂದ 73 ಗ್ರಾಂ ಚಿನ್ನಾಭರಣ ಹಾಗೂ 2 ಲಕ್ಷ ರೂ. ನಗದು ಹಣವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ತಾಲೂಕಿನ ಸಿದ್ದಾಪುರ (ಬಿ) ಗ್ರಾಮದ ಯಲ್ಲಪ್ಪ ಬಸಪ್ಪ ಹುಲಕೇರಿ ಅವರು ಏಪ್ರಿಲ್ 18ರಂದು ಹುಣಸಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಏಪ್ರಿಲ್ 17ರ ರಾತ್ರಿ 9.30ರಿಂದ ಏಪ್ರಿಲ್ 18ರ ಬೆಳಗ್ಗೆ 6 ಗಂಟೆಯೊಳಗಿನ ಅವಧಿಯಲ್ಲಿ ಅಪರಿಚಿತರು ಜಮೀನಿನಲ್ಲಿದ್ದ ಅವರ ಮನೆಗೆ ನುಗ್ಗಿ, ಕಬ್ಬಿಣದ ಪೆಟ್ಟಿಗೆಯನ್ನು ಹೊರಗೆ ತೆಗೆದುಕೊಂಡು ಹೋಗಿ, ಅದರಲ್ಲಿದ್ದ 73 ಗ್ರಾಂ ಚಿನ್ನಾಭರಣ ಹಾಗೂ 4 ಲಕ್ಷ ರೂ. ನಗದು ಕಳವು ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದರು. ಈ ಸಂಬಂಧ ಹುಣಸಗಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 65/2026ರಡಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)-2023ರ ಕಲಂ 331(4) ಹಾಗೂ 305ರಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸುರಪುರ ಉಪವಿಭಾಗದ ಡಿವೈಎಸ್‌ಪಿ ಅವರ ಮಾರ್ಗದರ್ಶನದಲ್ಲಿ ಹುಣಸಗಿ ಸಿಪಿಐ ರವಿಕುಮಾರ ಎಸ್.ಎನ್., ಪಿಎಸ್‌ಐ ರಾಹುಲ್ ಪವಾಡೆ, ಕ್ರೈಂ ಪಿಎಸ್‌ಐ ಬಾಗಣ್ಣ ಹಾಗೂ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.

ತನಿಖೆಯ ವೇಳೆ ಪ್ರಕರಣದ ಆರೋಪಿ ದೇವಪ್ಪ ಯಮನಪ್ಪ ಹುಲ್ಲಿಕೇರಿ (ಸಿದ್ದಾಪುರ-ಬಿ) ಎಂಬಾತನನ್ನು ಜುಲೈ 10ರಂದು ಬಂಧಿಸಿ ವಿಚಾರಣೆಗೆ ಒಳಪಡಿಸಲಾಯಿತು. ವಿಚಾರಣೆ ವೇಳೆ ಆರೋಪಿಯಿಂದ 73 ಗ್ರಾಂ ಚಿನ್ನಾಭರಣ ಹಾಗೂ ₹2 ಲಕ್ಷ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸ್ ತಂಡವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸುರಪುರ ಡಿವೈಎಸ್‌ಪಿ ಅಭಿನಂದಿಸಿ, ಬಹುಮಾನ ಘೋಷಿಸಿದ್ದಾರೆ.

Tags

policeHunasagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X