ಹೈದರಾಬಾದ್‌ನ ಬಿಜೆಪಿ ಶಾಸಕ ಟಿ.ರಾಜಾಸಿಂಗ್‌ಗೆ ಯಾದಗಿರಿ ಜಿಲ್ಲಾ ಪ್ರವೇಶ ನಿರ್ಬಂಧ

ಯಾದಗಿರಿ: ಛತ್ರಪತಿ ಶಿವಾಜಿ ಮಹಾರಾಜ ಸೇನಾ ಹಾಗೂ ವೀರ ಸಾವರ್ಕರ ಸೇನಾ ಸಂಘಟನೆ ವತಿಯಿಂದ ಮೇ 21ರಂದು ನಗರದಲ್ಲಿ ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವದ ಬಹಿರಂಗ ಸಭೆಗೆ ಆಗಮಿಸಲಿದ್ದ ಹೈದರಾಬಾದ್‌ನ ಗೋಶಾಮಹಲ್ ಕ್ಷೇತ್ರದ ಬಿಜೆಪಿ ಶಾಸಕ ಟಿ. ರಾಜಾಸಿಂಗ್ ಅವರಿಗೆ ಯಾದಗಿರಿ ಜಿಲ್ಲಾ ಪ್ರವೇಶವನ್ನು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಒಂದು ತಿಂಗಳ ಕಾಲ ನಿರ್ಬಂಧಿಸಿದೆ.
ಟಿ. ರಾಜಾಸಿಂಗ್ ಅವರ ಭೇಟಿಯಿಂದ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಮೇ 21ರಂದು ನಡೆಯಲಿದ್ದ ಕಾರ್ಯಕ್ರಮಕ್ಕಾಗಿ ವಿವಿಧ ಸಂಘಟನೆಗಳು ಸಿದ್ಧತೆ ನಡೆಸಿದ್ದರೂ, ಜಿಲ್ಲೆಯ ಶಾಂತಿ ಹಾಗೂ ಸಾರ್ವಜನಿಕ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಿರ್ಬಂಧ ಹೇರಲಾಗಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
Next Story




