Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿಯನ್ನು ಬರಪೀಡಿತ ಜಿಲ್ಲೆ ಘೋಷಿಸಲು...

ಯಾದಗಿರಿಯನ್ನು ಬರಪೀಡಿತ ಜಿಲ್ಲೆ ಘೋಷಿಸಲು ಜಯ ಕರ್ನಾಟಕ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ20 July 2026 7:27 PM IST
share
ಯಾದಗಿರಿಯನ್ನು ಬರಪೀಡಿತ ಜಿಲ್ಲೆ ಘೋಷಿಸಲು ಜಯ ಕರ್ನಾಟಕ ಆಗ್ರಹ
ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ, ಮೋಡ ಬಿತ್ತನೆ ಹಾಗೂ ರೈತರ ಸಾಲ ಮನ್ನಾಕ್ಕೆ ಒತ್ತಾಯ

ಯಾದಗಿರಿ: ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು, ಮುಂಗಾರು ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು, ತುರ್ತಾಗಿ ಮೋಡ ಬಿತ್ತನೆ ಕೈಗೊಳ್ಳಬೇಕು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳು ಮತ್ತು ಸಹಕಾರ ಸಂಘಗಳಲ್ಲಿನ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಜಿಲ್ಲೆಯಾದ್ಯಂತ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಹತ್ತಿ, ಶೇಂಗಾ, ಹೆಸರು, ಉದ್ದು, ತೊಗರಿ ಸೇರಿದಂತೆ ವಿವಿಧ ಬೆಳೆಗಳು ಒಣಗುತ್ತಿವೆ. ಆರಂಭದಲ್ಲಿ ಸುರಿದ ಅಲ್ಪ ಪ್ರಮಾಣದ ಮಳೆಯನ್ನು ನಂಬಿ ರೈತರು ಬಿತ್ತನೆ ಮಾಡಿದ್ದರೂ, ನಂತರ ಮಳೆ ಸಂಪೂರ್ಣ ಕೈಕೊಟ್ಟ ಪರಿಣಾಮ ಬೆಳೆಗಳು ನಾಶವಾಗಿ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಹನುಮಂತರಾಯ ದೊರೆ ವನದುರ್ಗ, ರೈತ ದೇಶದ ಬೆನ್ನೆಲುಬಾಗಿದ್ದು, ಅನ್ನದಾತನ ಸಂಕಷ್ಟವನ್ನು ಸರ್ಕಾರ ನಿರ್ಲಕ್ಷಿಸಬಾರದು. ವರದಿಗಳಿಗಾಗಿ ಕಾಯದೆ ತಕ್ಷಣ ಮಧ್ಯಂತರ ಪರಿಹಾರ ಘೋಷಿಸಿ ರೈತರ ನೆರವಿಗೆ ಧಾವಿಸಬೇಕು. ಹೆಚ್ಚಿನ ಬಡ್ಡಿಗೆ ಸಾಲ ಪಡೆದು ಕೃಷಿ ಮಾಡಿದ ರೈತರು ಸಾಲದ ಸುಳಿಯಲ್ಲಿ ಸಿಲುಕಿದ್ದು, ಸರ್ಕಾರ ಮಾನವೀಯ ನೆಲೆಯಲ್ಲಿ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ವಿಜಯಕುಮಾರ್ ಮಗ್ದಾಂಪುರ ಮಾತನಾಡಿ, ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಸಮರ್ಪಕ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು. ಇತ್ತೀಚೆಗೆ ಚಟ್ನಳ್ಳಿ ಗ್ರಾಮದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರೂ ಅವರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿಲ್ಲ. ರೈತರ ಸಂಕಷ್ಟವನ್ನು ಸರ್ಕಾರದ ಗಮನಕ್ಕೆ ತಂದು ಯಾದಗಿರಿಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಒತ್ತಡ ತರಬೇಕಾದ ಜವಾಬ್ದಾರಿ ಜನಪ್ರತಿನಿಧಿಗಳ ಮೇಲಿದೆ ಎಂದು ಹೇಳಿದರು.

ಮಳೆ ಕೊರತೆಯಿಂದ ಜಿಲ್ಲೆಯ ಜಲಾಶಯಗಳು, ಕೆರೆ-ಕಟ್ಟೆಗಳು ಬತ್ತುತ್ತಿದ್ದು, ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆಯೂ ಉಲ್ಬಣಿಸಿದೆ. ಸರ್ಕಾರ ತಕ್ಷಣ ಮೋಡ ಬಿತ್ತನೆ ಕೈಗೊಂಡು ಮಳೆ ಸುರಿಯಲು ಕ್ರಮ ವಹಿಸಬೇಕು. ಜೊತೆಗೆ ರೈತರಿಗೆ ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ ಘೋಷಿಸಿ, ರಾಷ್ಟ್ರೀಕೃತ ಬ್ಯಾಂಕ್‌ಗಳು ಹಾಗೂ ಸಹಕಾರ ಸಂಘಗಳಲ್ಲಿನ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸದಿದ್ದರೆ ಜಿಲ್ಲಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ಜಿಲ್ಲಾ ಅಧ್ಯಕ್ಷ ಬಿ.ಎನ್. ವಿಶ್ವನಾಥ ನಾಯಕ ಮಾತನಾಡಿದರು. ದೀಪಕ ಪೋದ್ದಾರ, ಮಲ್ಲಿಕಾರ್ಜುನ ದೇವದುರ್ಗ, ಅರುಣ, ಮಲ್ಲಿಕಾರ್ಜುನ, ದೇವು ರಾಮಸಮುದ್ರ ಸೇರಿದಂತೆಯೇ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X