Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ರಸಗೊಬ್ಬರ ಕೊರತೆ: ರಾಜ್ಯ...

ಯಾದಗಿರಿ | ರಸಗೊಬ್ಬರ ಕೊರತೆ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 Aug 2025 9:25 PM IST
share
ಯಾದಗಿರಿ | ರಸಗೊಬ್ಬರ ಕೊರತೆ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ಯಾದಗಿರಿ: ಸಮರ್ಪಕ ರಸಗೊಬ್ಬರ ಪೂರೈಕೆ ಮಾಡದ ರಾಜ್ಯ ಸರ್ಕಾರದ ನಡೆ ಖಂಡಿಸಿ ಯಾದಗಿರಿಯಲ್ಲಿ ಜೆಡಿಎಸ್ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಇದೇ ವೇಳೆ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ, ರಾಜ್ಯದಲ್ಲಿ ಕಳೆದ 2 ವರ್ಷಗಳಿಂದ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರ ಸಮಸ್ಯೆಗೆ ಮತ್ತು ಮಳೆ ಹಾನಿ ಹಾಗೂ ನೆರೆ ಹಾವಳಿಯಿಂದ ಹಾಗೂ ಮಳೆ ಕೊರತೆಯಿಂದ ಭಾದಿತವಾದ ರೈತರ ಮತ್ತು ನೊಂದ ಸಂತ್ರಸ್ಥರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ 2 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಲಂಚಗುಳಿತನ, ದುರಾಡಳಿತ ಮತ್ತು ವೈಫಲ್ಯತೆಯಿಂದ ರಾಜ್ಯದ ಜನತೆ ಆಕ್ರೋಶದಿಂದ ಬೇಸತ್ತಿದ್ದಾರೆ. ರಾಜ್ಯದಲ್ಲಿ ಪೂರ್ವ ಮುಂಗಾರು ಮತ್ತು ಮುಂಗಾರುನಲ್ಲಿ ಉತ್ತಮ ಮಳೆಯಾಗಿದ್ದು, ರಾಜ್ಯದ ರೈತರು ತಮ್ಮ ಬಹುತೇಕ ಕೃಷಿ ವಿಸ್ತೀರ್ಣದಲ್ಲಿ ಕೃಷಿ ಚಟುವಟಿಕೆ ಪ್ರಾರಂಭಿಸಿ ಬಿತ್ತನೆಯಲ್ಲಿ ತೊಡಗಿದ್ದಾರೆ ಹಾಗೂ ರಾಜ್ಯದಲ್ಲಿ ಬಹುತೇಕ ಜಲಾಶಯಗಳು ಹಾಗೂ ಕೆರೆ ಕಟ್ಟೆಗಳು ಭರ್ತಿಗೊಂಡಿದ್ದು, ನೀರಾವರಿ ಅಚ್ಚುಕಟ್ಟಿನಲ್ಲಿ ರೈತರು ಸಾಗುವಳಿ ಪ್ರಾರಂಭಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ರೈತರಿಗೆ ಅಗತ್ಯವಿರುವ ರಸ ಗೊಬ್ಬರವನ್ನು ಪೂರೈಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಳೆ ಮತ್ತು ನೆರೆ ಹಾವಳಿಯಿಂದ ಫಸಲು ನಷ್ಟಕ್ಕೆ ಮತ್ತು ಮಳೆ ಅಭಾವದಿಂದ ಹಾಳಾದ ಬೆಳೆ ನಷ್ಟಕ್ಕೆ ಸಂಬಂಧಿಸಿದ ಫಸಲು ವಿಮಾ ಕಂಪನಿಗಳಿಂದ ರೈತರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈ ಎಲ್ಲಾ ವೈಫಲ್ಯಗಳಿಂದ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಲು ನೈತಿಕವಾಗಿ ಅಧಿಕಾರ ಕಳೆದುಕೊಂಡಿದೆ. ಗೌರವಾನ್ವಿತ ರಾಜ್ಯಪಾಲರು, ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನವಿತ್ತು ಎಚ್ಚರಿಕೆ ನೀಡಿ, ರೈತರ ಸಮಸ್ಯೆ ಹಾಗೂ ನೆರೆ ಹಾವಳಿಯಿಂದ ನೊಂದ ಸಂತ್ರಸ್ತರಿಗೆ ಹಾಗೂ ಮಳೆ ಅಭಾವದಿಂದ ಫಸಲನ್ನು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು.

ಒಂದು ವೇಳೆ ರಾಜ್ಯ ಸರ್ಕಾರ ಸಂವಿಧಾನ ರೀತಿ ಕಾರ್ಯನಿರ್ವಹಿಸದಿದ್ದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಚನ್ನಪ್ಪಗೌಡ ಮೊಸಂಬಿ, ನವಾಜರೆಡ್ಡಿ ಚಪೇಟ್ಲಾ, ರಾಮಣ್ಣ ಕೋಟಗೇರಾ, ಬಸವರಾಜಪ್ಪಗೌಡ ಗೊಂದಡಗಿ, ಬಸವರಾಜ ಕಣೇಕಲ್, ಈಶಪ್ಪ ರಾಖಾ, ರಾಜೇಶ ಉಡುಪಿ ಸೈದಾಪೂರ, ದೇವಿಂದ್ರಪ್ಪ ಸುರಪೂರ, ಶಿವು ಮೊಟಗಿ ಶಹಾಪೂರ, ಶಿವಣ್ಣ ಸುರಪೂರ, ವಿಶ್ವನಾಥ ಶಿರವಾಳ, ಬಂದಪ್ಪ ಅರಳಿ, ನರಸಪ್ಪ ಕವಡೆ, ಶರಣು ಆವಂಟಿ, ಪ್ರಕಾಶ ನೀರಟ್ಟಿ, ಬಸ್ಸಣ್ಣ ದೇವರಹಳ್ಳಿ, ರವಿ ಪಾಟೀಲ್ ಗುರುಮಿಠಕಲ್, ಮಲ್ಲಣ್ಣಗೌಡ ಕೌಳೂರು, ಬಸ್ಸುಗೌಡ ಚಾಮನಹಳ್ಳಿ, ಬಸರಡ್ಡಿ ಹೆಗ್ಗಣಗೇರಾ ಚಂದ್ರಾಯಗೌಡ ಹತ್ತಿಕುಣಿ, ಶರಣಗೌಡ ಚಾಮನಹಳ್ಳಿ, ರವಿ ಪಾಟೀಲ್ ಹತ್ತಿಕುಣಿ, ಮಲ್ಲಿಕಾರ್ಜುನ ಅರುಣಿ, ಈಶ್ವರ ನಾಯಕ,ಜಯೇಂದ್ರ ಚವ್ಹಾಣ, ಪರಮರೆಡ್ಡಿ ಕಂದಕೂರ, ದೊಡ್ಡಣ್ಣಗೌಡ ಅರಕೇರಾ (ಬಿ), ಮಾರ್ಥಂಡ ಮಾನೇಗಾರ, ನಿಂಗಾರೆಡ್ಡಿ ಯಡ್ಡಳ್ಳಿ, ತಾಯಪ್ಪ ಬದ್ದೇಪಲ್ಲಿ, ಅನಂತಪ್ಪ ಮುಕಡಿ, ಶರಣು ಗಾಡಿ ಮೋಟ್ನಳ್ಳಿ, ಲಕ್ಷ್ಮಣನಾಯಕ ಕುಡ್ಲೂರ, ಅಲ್ಲಾವುದ್ದೀನ್ ನೀಲಹಳ್ಳಿ ಸೇರಿದಂತೆ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X