Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ವಡಗೇರಾ ಗ್ರಾಮ...

ಯಾದಗಿರಿ | ವಡಗೇರಾ ಗ್ರಾಮ ಪಂಚಾಯಿತಿಯನ್ನು ಮೇಲ್ದರ್ಜೇಗೇರಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 Nov 2025 6:16 PM IST
share
ಯಾದಗಿರಿ | ವಡಗೇರಾ ಗ್ರಾಮ ಪಂಚಾಯಿತಿಯನ್ನು ಮೇಲ್ದರ್ಜೇಗೇರಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ವಡಗೇರಾ: ವಡಗೇರಾ ಗ್ರಾಮ ಪಂಚಾಯತಿಯನ್ನು ಕೂಡಲೇ ಪಟ್ಟಣ ಪಂಚಾಯತಿಯನ್ನಾಗಿ ಮೇಲ್ದರ್ಜೇಗೇರಿಸುವಂತೆ ಆಗ್ರಹಿಸಿ ಕರವೇ ತಾಲೂಕು ಘಟಕದ ವತಿಯಿಂದ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಕರವೇ ಜಿಲ್ಲಾ ಉಪಾಧ್ಯಕ್ಷ ಚೌಡಯ್ಯ ಬಾವೂರು, ವಡಗೇರಾ ತಾಲೂಕು ಘೋಷಣೆಯಾಗಿ ಸುಮಾರು 10 ವರ್ಷಗಳೇ ಕಳೆದಿದೆ. ಆದರೂ ತಾಲೂಕು ಕೇಂದ್ರದಲ್ಲಿ ಇನ್ನೂ ಗ್ರಾಪಂ ಕಾರ್ಯನಿರ್ವಹಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ತಾಲೂಕಾದ ಮೇಲೆ ಬಹಳ ಅಭಿವೃದ್ಧಿಯಾಗುತ್ತದೆ ಎಂದು ಪಟ್ಟಣ ಹಾಗೂ ಗ್ರಾಮೀಣ ಜನರಅಭಿಪ್ರಾಯವಾಗಿತ್ತು. ಆದರೆ ಇಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಆಗದಿರುವುದು ಇಲ್ಲಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಕಾರ್ಯವೈಖರಿಯನ್ನು ಎತ್ತಿ ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರವೇ ತಾಲೂಕಾಧ್ಯಕ್ಷ ಅಬ್ದುಲ್ ಚಿಗಾನೂರ ಮಾತನಾಡಿ, ಹಳೇ ಹೋಬಳಿ ಕೇಂದ್ರವಿದ್ದಾಗ ವಡಗೇರಾ ಹೇಗಿತ್ತೋ ತಾಲೂಕಾಗಿ 10 ವರ್ಷವಾದರೂ ಹಾಗೆಯೇ ಇದೆ. ಹೊಸ ತಾಲೂಕಾದ ಮೇಲೆ ಇಲ್ಲಿನ ಅಭಿವೃದ್ಧಿಗೆ ಕ್ಷೇತ್ರದ ಶಾಸಕರು ಹಾಗೂ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕಿತ್ತು. ಆದರೆ ಇಲ್ಲಿನ ಪರಿಸ್ಥಿತಿ ನೋಡಿದರೆ ಇದ್ಯಾವುದನ್ನು ಮಾಡಲು ಶಾಸಕರಿಗಾಗಲಿ ಅಧಿಕಾರಿಗಳಿಗಾಗಲಿ ಇಚ್ಛಾಶಕ್ತಿ ಇಲ್ಲವೆಂಬುವುದು ಸ್ಪಷ್ಟವಾಗಿ ಘೋಚರಿಸುತ್ತದೆ. ಕೂಡಲೇ ಶಾಸಕರು, ಅಧಿಕಾರಿಗಳು ಎಚ್ಚೆತ್ತುಕೊಂಡು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮತ್ತಷ್ಟು ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಇದೇ ಸಮಯದಲ್ಲಿ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ವಡಗೇರಾ ಗ್ರೇಡ್ 2 ತಹಶೀಲ್ದಾರ ಪ್ರಕಾಶ್ ಹೊಸಮನಿರವರ ಮೂಲಕ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಣಮಂತ್ ತೇಕರಾಳ, ಶಿವರಾಜ ನಾಡಗೌಡ, ಬಸಯ್ಯಸ್ವಾಮಿ ಊಳ್ಳೆಸುಗೂರು, ಸಿದ್ದು ಪೂಜಾರಿ, ಸತೀಶ್ ಜಡಿ, ಬಸವರಾಜ ಕೊದ್ದಡ್ಡಿ, ದೇವು ಬುಸೇನಿ, ಶ್ರೀನಿವಾಸ್ ಮಡಿವಾಳ, ಪೀರಸಾಬ್ ಮರಡಿ, ಮಹಮ್ಮದ್ ಕತಾಲಿ, ಮಲ್ಲು ಜಡಿ, ಪಿಡಪ್ಪ ನಾಯಕ್, ಸಾಬರೆಡ್ಡಿ ಹೊರಟೂರ, ದೇವು ವಿಶ್ವಕರ್ಮ, ಬಸ್ಸು ಬುಸೇನಿ, ಶರಣು ತುಮಕೂರು, ಸಿದ್ದು ಸುಣಗಾರ, ಶಿವು ಶಿವಪುರ, ಸುರೇಶ್ ವಿಶ್ವಕರ್ಮ, ಮಾಳಪ್ಪ ಹೈಯ್ಯಾಳ, ಜುಬಲಪ್ಪ ಕಟ್ಟಿಮನಿ, ರಫಿಕ್ ಊಳ್ಳೆಸೂಗುರ್, ಭೀಮರಾಯ ಕ್ಯಾತ್ನಾಳ, ಮಲ್ಲು ಪಾಟೀಲ್ ಟೋಕಾಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Karave protestVadageraGram Panchayat
share
ವಾರ್ತಾಭಾರತಿ
ವಾರ್ತಾಭಾರತಿ
Next Story
X