ಕಸಾಪ ‘ಹಿಂದುಳಿದ ವರ್ಗಗಳ ಪ್ರತಿನಿಧಿ’ಯಾಗಿ ಡಾ.ಶಿವಶರಣ ಗೋಡ್ರಾಳ ನಾಮ ನಿರ್ದೇಶನ

ಬೆಂಗಳೂರು, ಆ.30: ಕನ್ನಡ ಸಾಹಿತ್ಯ ಪರಿಷತ್‍ನ ಕೇಂದ್ರ ಕಾರ್ಯಕಾರಿ ಸಮಿತಿಗೆ ಹಿಂದುಳಿದ ವರ್ಗಗಳ ಪ್ರತಿನಿಧಿಯಾಗಿ ಯಾದಗಿರಿಯ ಡಾ.ಶಿವಶರಣ ಗೋಡ್ರಾಳ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ ಎಂದು ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ತಿಳಿಸಿದ್ದಾರೆ.
ಶನಿವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ಡಾ.ಶಿವಶರಣ ಗೋಡ್ರಾಳ ಅವರು ಬಿ.ಇ.ಎಂ.ಎಸ್ ಪದವೀಧರರಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಅಪಾರ ಪ್ರೀತಿಯನ್ನು ಹೊಂದಿದ್ದಾರೆ. ಸಂಘ ಸಂಸ್ಥೆಗಳ ಜೊತೆಗೆ ಒಡನಾಟ ಹೊಂದಿದ್ದಾರೆ. ಕರ್ನಾಟಕದ ಎಲ್ಲಾ ಭಾಗದಲ್ಲಿ ಸಾಮಾಜಿಕ ಜಾಗೃತಿಯನ್ನು ಉಂಟು ಮಾಡುವಲ್ಲಿ ನಿರಂತರವಾಗಿ ಶ್ರಮಿಸುತ್ತಾ ಬಂದಿದ್ದಾರೆ. ಅವರ ಕನ್ನಡ ಪ್ರೇಮ ಮತ್ತು ನಾಡಿನ ಕುರಿತು ಅಭಿಮಾನ ಮತ್ತು ಸಂಘಟನೆಯ ಕೌಶಲ್ಯ ಕನ್ನಡ ಸಾಹಿತ್ಯ ಪರಿಷತ್‍ಗೆ ಇನ್ನಷ್ಟು ಕ್ರಿಯಾತ್ಮಕತೆಯನ್ನು ತರಲಿದೆ ಎಂದು ತಿಳಿಸಿದ್ದಾರೆ.
Next Story





