Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಕರ್ನಾಟಕದ ನೆಲ, ಜಲ, ನಾಡು, ನುಡಿಯ...

ಕರ್ನಾಟಕದ ನೆಲ, ಜಲ, ನಾಡು, ನುಡಿಯ ರಕ್ಷಣೆಗೆ ಶ್ರಮಿಸೋಣ : ಸಚಿವ ಶರಣಬಸಪ್ಪಗೌಡ ದರ್ಶನಾಪೂರ

ವಾರ್ತಾಭಾರತಿವಾರ್ತಾಭಾರತಿ1 Nov 2024 7:23 PM IST
share
Photo of  Sharanbasappa Gowda

ಯಾದಗಿರಿ : ಕರ್ನಾಟಕದ ನೆಲ, ಜಲ, ನಾಡು, ನುಡಿಯ ರಕ್ಷಣೆಗೆ ನಾವೆಲ್ಲರೂ ಬದ್ದರಾಗೋಣ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಹೇಳಿದ್ದಾರೆ.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ವಿವಿಧ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಹಲವರ ತ್ಯಾಗ ಬಲಿದಾನದ ಫಲವಾಗಿ ದೊರೆತ ಈ ನೆಲ, ಜಲ, ನಾಡು ,ನುಡಿಯ ರಕ್ಷಣೆ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಬದ್ದರಾಗೋಣ ಎಂದು ಹೇಳಿದರು.

ಕಲ್ಯಾಣ ಕರ್ನಾಟಕದಲ್ಲಿ ಹಾಗೂ ವಿಶೇಷವಾಗಿ ಯಾದಗಿರಿ ಜಿಲ್ಲೆಗೆ ಸರಕಾರ ನೀರಾವರಿ, ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ ಕಲ್ಪಿಸಿ ನೆರವಾಗಿದೆ. ನೂತನ ವೈದ್ಯಕೀಯ ಕಾಲೇಜ್, ಆಡಳಿತ ಕಚೇರಿ, ಶಾಲೆ ಕಾಲೇಜುಗಳನ್ನು ಸ್ಥಾಪಿಸಿದೆ. ನೂತನ ನರ್ಸಿಂಗ್ ಕಾಲೇಜಿಗೂ ಸಹ ಮಂಜೂರಾತಿ ನೀಡಿದೆ ಎಂದು ಹೇಳಿದರು.

ರಾಜ್ಯ ಸರಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಬಡ ಜನರಿಗೆ ಆರ್ಥಿಕ ಬಲ ತುಂಬಿದೆ. ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಿದೆ. ಕರ್ನಾಟಕದ ಏಕೀಕರಣ ಹೋರಾಟ, ಬುದ್ಧ ಬಸವಾದಿ ಶರಣರು, ಮಹಾತ್ಮ ಗಾಂಧೀಜಿ, ಡಾ .ಬಾಬಾಸಾಹೇಬ್ ಅಂಬೇಡ್ಕರ್‌, ಜವಾಹರಲಾಲ್ ನೆಹರು, ಸೇರಿದಂತೆ ಕರ್ನಾಟಕದ ಭವ್ಯ ಇತಿಹಾಸ ಸ್ಮರಿಸಿದ ಅವರು ಈ ನಾಡಿನ ಕನ್ನಡ ಭಾಷೆಯ ಅಭ್ಯುದಯಕ್ಕೆ ಹಾಗೂ ಇತರ ಭಾಷೆಗಳಿಗೂ ಗೌರವ ನೀಡಿ, ಜಾತಿ, ಮತ, ಪಂಥ ಬದಿಗೊತ್ತಿ ನಾಡಿನ ಸೇವೆ ಮಾಡೋಣ ಹಾಗೂ ಕೀರ್ತಿ ಬೆಳಗಿಸೋಣ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಾಧನೆಗೈದವರಿಗೆ ಸನ್ಮಾನಿಸಲಾಯಿತು. ವಿವಿಧ ಇಲಾಖೆ ಗಳ ಅಭಿವೃದ್ಧಿ ಕಾರ್ಯಕ್ರಮಗಳ ಸ್ತಬ್ಧ ಚಿತ್ರ ,ಮಕ್ಕಳ ಸಾಂಸ್ಕೃತಿಕ, ಕವಾಯತು ಕಾರ್ಯಕ್ರಮಗಳು ಗಮನ ಸೆಳೆದವು.

ಈ ಸಂದರ್ಭದಲ್ಲಿ ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ವಿನಾಯಕ ಪಾಟೀಲ್, ನಗರಸಭೆ ಅಧ್ಯಕ್ಷ ಲಲಿತಾ ಅನಪೂರ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ , ಅಪರ ಜಿಲ್ಲಾಧಿಕಾರಿ ಶ್ರೀ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತರು ಡಾ.ಹಂಪಣ್ಣ ಸಜ್ಜನ್, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಅನುಪಮ್ ಅಗ್ರವಾಲ್ ಧರಣೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರದೇವಿ ಮಠಪತಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X