Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ: ಒಳಮೀಸಲಾತಿ ಜಾರಿಗೆ ವಿಳಂಬ...

ಯಾದಗಿರಿ: ಒಳಮೀಸಲಾತಿ ಜಾರಿಗೆ ವಿಳಂಬ ಖಂಡಿಸಿ ಮಾದಿಗರ ಬೃಹತ್ ಪ್ರತಿಭಟನೆ

ಕಾಲಹರಣ ಮಾಡಿದರೇ ತಕ್ಕ ಪಾಠ: ನಾದ್ ಇಟಗಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ1 Aug 2025 6:01 PM IST
share
ಯಾದಗಿರಿ: ಒಳಮೀಸಲಾತಿ ಜಾರಿಗೆ ವಿಳಂಬ ಖಂಡಿಸಿ ಮಾದಿಗರ ಬೃಹತ್ ಪ್ರತಿಭಟನೆ

ಯಾದಗಿರಿ: ಒಳಮೀಸಲಾತಿ ಜಾರಿಗೊಳಿಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಮತ್ತು ಕೂಡಲೇ ಜಾರಿಗೊಳಿಸುವಂತೆಯೇ ಆಗ್ರಹಿಸಿ ಮಾದಿಗ ಸಮಾಜದ ಜಿಲ್ಲೆಯ ಸಾವಿರಾರು ಜನರು ಶುಕ್ರವಾರ ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಅಲೆಮಾರಿ,ಅರೆಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ದೇವೇಂದ್ರನಾಥ ನಾದ್ ಮತ್ತು ನಗರಸಭೆ ಸದಸ್ಯ ಹಣಮಂತ ಇಟಗಿ ನೇತೃತ್ವದಲ್ಲಿ ಬೆಳಗ್ಗೆ ತಹಸಿಲ್ ಕಚೇರಿ ಬಳಿ ಜಮಾಯಿಸಿದ ಮಾದಿಗ ಸಮಾಜದ ಸಾವಿರಾರು ಜನರು ಜೈ ಮಾದಿಗ, ಜೈ ಜೈ ಮಾದಿಗ ಎಂಬ ಘೋಷಣೆಗಳನ್ನು ಕೂಗಿ ಒಳಮೀಸಲಾತಿಗಾಗಿ ಆಗ್ರಹಿಸಿದರು. ಅಲ್ಲಿಂದ ಹೊರಟ ಪ್ರತಿಭಟನಾ ಪಾದಯಾತ್ರೆ ಶಾಸ್ತ್ರಿ ಚೌಕ ಮೂಲಕ ನೇತಾಜಿ ಸರ್ಕಲ್ ಬಳಿ ಬಂದು ಜಮಾಗೊಂಡಿತು.

ಈ ವೇಳೆ ಮಾತನಾಡಿದ ದೇವೇಂದ್ರನಾಥ ನಾದ್, ಹಣಮಂತ ಇಟಗಿ ಅವರು, ಕಳೆದ ಮೂವತ್ತು ವರ್ಷಗಳಿಂದ ನಡೆಸಿದ ವಿವಿಧ ಹಂತದ ಹೋರಾಟಗಳ ಫಲವಾಗಿ ಸುಪ್ರೀಂಕೋರ್ಟ್ ಕಳೆದ ಹಲವಾರು ತಿಂಗಳ ಹಿಂದೆಯೇ ಒಳಮೀಸಲಾತಿ ಜಾರಿ ಮಾಡುವಂತೆಯೇ ಆದೇಶ ನೀಡಿದೆ. ಆದರೇ ಸಿಎಂ ಸಿದ್ದರಾಮಯ್ಯ ಅವರು ಕೆಲವರ ಒತ್ತಡಕ್ಕೆ ಮಣಿದು ಇಲ್ಲದೊಂದು ನೆಪ ಹೇಳಿ ಮುಂದಕ್ಕೆ ಹಾಕುವ ಮೂಲಕ ಮಾದಿಗ ಸಮಾಜಕ್ಕೆ ಘೋರ ಅನ್ಯಾಯ ಮಾಡುತ್ತಿದ್ದಾರೆಂದು ಆರೋಪಿಸಿದರು.

ದೇಶದ ಬೇರೆ, ಬೇರೆ ರಾಜ್ಯಗಳಲ್ಲಿ ಈಗಾಗಲೇ ಒಳಮೀಸಲಾತಿ ಜಾರಿ ಮಾಡಲಾಗಿದೆ. ಅಲ್ಲಿ ಇರದ ತೊಂದರೆ ನಮ್ಮ ರಾಜ್ಯದಲ್ಲಿ ಅಂತಾದ್ದೇನು ತೊಂದರೆ ಇದೆ ಎಂದು ಅವರು ಪ್ರಶ್ನಿಸಿದರು.

ಸಂವಿಧಾನಬದ್ದ ಹಕ್ಕು ಪಡೆಯಲು ಮೂರು ದಶಕಗಳ ಕಾಲ ಹೋರಾಟವೇ ಆಗಿದೆ. ಎಷ್ಟೋ ಜನರು ಇದಕ್ಕಾಗಿಯೇ ಜೀವನ‌ ಮುಡುಪಿಟ್ಟು ಇಹಲೋಕ ತ್ಯಜಿಸಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಅವರಿಗೆ ಅರ್ಥ ಆಗಬೇಕು. ದೂರದಲ್ಲಿ ಕುಳಿತಿರುವ ಯಾರೋದೋ ಮಾತು ಕೇಳಿ ಕಾಲಹರಣ ಮಾಡುವ ಮೂಲಕ ಈ ದೊಡ್ಡ ಸಮಾಜಕ್ಕೆ ಮಾಡುತ್ತಿರುವ ಅನ್ಯಾಯಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ದೇವೇಂದ್ರನಾಥ ಮತ್ತು ಹಣಮಂತ ಅವರು ಎಚ್ಚರಿಸಿದರು.

ಕಾರಣ, ಇನ್ನೂ ನಮ್ಮ ಸಹನೆಕಟ್ಟೆ ಒಡೆಯುವ ಮುಂಚೆಯೇ ಕೂಡಲೇ ಒಳಮೀಸಲಾತಿ ಜಾರಿ ಮಾಡಿ ನಮ್ಮ ಹಕ್ಕು ನಮಗೆ ಕೊಡಬೇಕೆಂದು ಒತ್ತಾಯಿಸಿದರು.

ದೇವಿಂದ್ರನಾಥ ನಾದ, ಚೆನ್ನಯ್ಯ ಮಾಳಿಕೇರಿ ಹಣಮಂತ ಇಟಗಿ, ಮಲ್ಲಣ್ಣ ದಾಸನ್ನಕೇರಿ, ಭೀಮಾಶಂಕರ್ ಬಿಲ್ಲವ. ವಾಸುದೇವ ಕಟ್ಟಿಮನಿ, ಬಸವರಾಜ್ ಹಗರಟಗಿ, ದಾನಪ್ಪ ಕಟ್ಟಿಮನಿ, ತಾಯಪ್ಪ ಬಡ್ಡೇಪಲ್ಲಿ, ಸಿದ್ದಣ್ಣ ಮೇಲಿನಮನಿ, ಮಲ್ಲಿಕಾರ್ಜುನ ಜಲ್ಲಪ್ಪನೋರ್, ನಿಂಗಪ್ಪ ವಡ್ಡನಲ್ಲಿ, ಆಂಜೆನೇಯ ಬಬಲಾದ, ಭೀಮಾಶಂಪ್ಪ ಗುಡಸೇ,, ಬಸವರಾಜ್ ಮೇತ್ರಿ, ಭೀಮರಾಯ ಬಂದಲ್ಲಿ, ಯಲ್ಲಪ್ಪ ಮಾಳಕೇರಿ, ಮಂಜುನಾಥ್ ದಾಸನ ಕೇರಿ ಸೇರಿದಂತೆಯೇ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಜಿಲ್ಲೆಯ ಸುರಪುರ, ಶಹಾಪುರ, ಯಾದಗಿರಿ, ವಡಗೇರಾ, ಕೊಡೆಕಲ್, ಕೆಂಭಾವಿ, ಗುರುಮಠಕಲ್, ಹುಣಸಗಿ ತಾಲೂಕುಗಳಿಂದ ಅಪಾರ ಸಂಖ್ಯೆಯಲ್ಲಿ ಸಮಾಜದ ಜ‌ನರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಸ್ಥಳಕ್ಕೆ ಆಗಮಿಸಿದ ಡಿಸಿ ಹರ್ಷಲ್ ಭೋಯರ್ ಅವರಿಗೆ ಮುಖಂಡರು ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಡಿಸಿ ಕೂಡಲೇ ಸರ್ಕಾರಕ್ಕೆ ಕಳುಹಿಸುವುದಾಗಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X