Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ...

ಯಾದಗಿರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಾಲ್ಮೀಕಿ ನಾಯಕ ಸಮಾಜದಿಂದ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ13 Aug 2025 9:40 PM IST
share
ಯಾದಗಿರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಾಲ್ಮೀಕಿ ನಾಯಕ ಸಮಾಜದಿಂದ ಬೃಹತ್ ಪ್ರತಿಭಟನೆ

ಯಾದಗಿರಿ: ನಕಲಿ ಜಾತಿ ಪ್ರಮಾಣಪತ್ರ ಮತ್ತು ಸಿಂದುತ್ವಗಳನ್ನು ರದ್ದು ಪಡಿಸುವುದು ಸೇರಿದಂತೆಯೇ ವಿವಿಧ ಪ್ರಮುಖ ಹತ್ತು ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘದಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.

ಅತಿ ಹೆಚ್ಚಿನ ಜನಸಂಖ್ಯೆ ಹೊಂದಿರುವ ಜಿಲ್ಲೆಯ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಈ ಎಲ್ಲ ಬೇಡಿಕೆಗಳಿಗೆ ಒತ್ತಾಯಿಸಲು ನೂರಾರು ಊರುಗಳಿಂದ ಬಂದಿದ್ದ ಸಾವಿರಾರು ವಾಲ್ಮೀಕಿ ಸಮುದಾಯ ಜನರು ಇಲ್ಲಿನ ತಹಸಿಲ್ ಕಚೇರಿ ಬಳಿ ಜಮಾಗೊಂಡರು.

ಕೈ,ಕೊರಳಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರ ಧ್ವಜ ಹಾಗೂ ಕರವಸ್ತ್ರ ಹಿಡಿದ ಅಪಾರ ಜನರು ಬೇಡಿಕೆಗಳಿಗೆ ಆಗ್ರಹಿಸಿ ಘೋಷಣೆ ಕೂಗಿ ಶಾಸ್ತ್ರಿ ಚೌಕ್ ಮೂಲಕ ಹಾದು ನೇತಾಜಿ ಸುಭಾಸಚಂದ್ರ ಬೋಸ್ ಸರ್ಕಲ್ ಗೆ ಆಗಮಿಸಿ ತಮಗಾದ ಅನ್ಯಾಯದ ವಿರುದ್ದ ಸರ್ಕಾರದ ವಿರುದ್ಧ ಪ್ರತಿಭಟಿಸಿ ಹಕ್ಕುಗಳಿಗಾಗಿ ಒತ್ತಾಯಿಸಿದರು.

ದಾವಣಗೇರಿ ಜಿಲ್ಲೆಯ ರಾಜನಳ್ಳಿಯ ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮಿಗಳ ಸಾನಿಧ್ಯದಲ್ಲಿ ಸಮಾಜದ ಉತ್ತರ ಕರ್ನಾಟಕ ಭಾಗದ ಅಧ್ಯಕ್ಷ ಮಾರೆಪ್ಪ ನಾಯಕ್ ಮಗ್ದಂಪುರ, ಜಿಲ್ಲಾಧ್ಯಕ್ಷ ಕೃಷ್ಣಪ್ಪಗೌಡ ಆಲ್ದಾಳ್, ವಾಲ್ಮೀಕಿ ಸ್ವಾಭಿಮಾನಿ ಸಂಘದ ರಾಜ್ಯಾಧ್ಯಕ್ಷ ಚಳುವಳಿ ರಾಜಣ್ಣ, ನಗರಸಭೆ ಸದಸ್ಯ ಹಣಮಂತ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಲಿಂಗಪ್ಪ ನಾಯಕ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೇರಿದ್ದ ಸಾವಿರಾರು ಮಂದಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ನಡೆಸಿದರು.

ಈ ವೇಳೆ ಮಾತನಾಡಿದ ಸಾನಿಧ್ಯ ವಹಿಸಿದ್ದ ಗುರುಗಳು ಮತ್ತು ನೇತೃತ್ವ ವಹಿಸಿದ್ದ ಮುಖಂಡರು ಮಾತನಾಡಿ, ಹಿಂದುಳಿದ ಪ್ರವರ್ಗ 1ರಲ್ಲಿ ಬರುವ ಅಂಬಿಗಾ, ಬೆಸ್ತಾ, ಕಬ್ಬಲಿಗಾ, ಮತ್ತು ಕೋಲಿ ಜನಾಂಗದ ವೃತ್ತಿ ಸೂಚಕ ತಳವಾರರನ್ನು ಹಿಂದುಳಿದ ಪ್ರವರ್ಗ 1ರ ಕ್ರಮ ಸಂಖ್ಯೆ 6 ರ ಬೆಸ್ತಾರ 38 ನೇ ಪದವಾಗಿ ಸೇರಿಸಬೇಕು, ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ, ಸಿಂದುತ್ವಗಳು ಪಡೆದುಕೊಳ್ಳುತ್ತಿರುವುದನ್ನು ತಡೆಯಬೇಕು ಮತ್ತು ಉಚ್ಛ ನ್ಯಾಯಾಲಯದ ಆದೇಶದಂತೆಯೇ ನಕಲಿ ಜಾತಿ ಪ್ರಮಾಣ ಪತ್ರ ನೀಡುತ್ತಿರುವ ತಹಸಿಲ್ದಾರ, ಸಿಬ್ಬಂದಿಗಳ ಹಾಗೂ ಪಡೆದುಕೊಳ್ಳುತ್ತಿರುವವರ ಮೇಲೂ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಅವರು ಒತ್ತಾಯಿಸಿದರು.

ಈ ಸಮಾಜದ ಕಾಲೇಜು,ಉನ್ನತ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ ವಿದ್ಯಾರ್ಥಿವೇತನ,ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು. ಈ ಇಲಾಖೆಗೆ ಕೂಡಲೇ ಸಚಿವರನ್ನು ನೇಮಿಸಬೇಕು, ಬುಡಕಟ್ಟು ವಿವಿ ಸ್ಥಾಪಿಸಿ ಸಂಶೋಧನಾ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಏಕಾಏಕಿ ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನು ತೆಗೆಯುವ ಮೂಲಕ ಸಮಸ್ತ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದ್ದು, ಕೂಡಲೇ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಮತ್ತು ಕಲಬುರಗಿ,ಯಾದಗಿರಿ ಮತ್ತು ಬೀದರ ಜಿಲ್ಲೆಗಳಲ್ಲಿ ಟಿಎಸ್ ಪಿ ಅನುದಾನವನ್ನು ಪರಿಶಿಷ್ಟ ಪಂಗಡದ ಕಾಲನಿಗಳಿಗೆ ಬಳಸದೇ ಬೇರೆ ಕಡೆ ಬಳಕೆ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವಿವಿಧ ತಾಲೂಕುಗಳ ಅಧ್ಯಕ್ಷ ಮತ್ತು ಪದಾಧಿಕಾರಿಗಳಾದ ಸಾಹೇಬಗೌಡ ಗೌಡಗೇರಾ, ಶ್ರವಣಕುಮಾರ ನಾಯಕ, ಮರೆಪ್ಪ ಪ್ಯಾಟಿ, ಭೀಮಣ್ಣಗೌಡ ಯಮನೂರು, ಬಸಣ್ಣಗೌಡ ಕಡದ್ರಾಳ, ಕಾಶಪ್ಪ ನಾಯಕ, ತಿಮ್ಮಣ್ಣ ನಾಯಕ್ ಸೇರಿದಂತೆಯೇ ಸಾವಿರಾರು‌ ಜನರು ಭಾಗವಹಿಸಿದ್ದರು. ಡಿಸಿ ಹರ್ಷಲ್ ಭೋಯರ್ ಅವರಿಗೆ ಮನವಿ ಸಲ್ಲಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X