Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಉತ್ತರ ಕರ್ನಾಟಕ ಅಭಿವೃದ್ಧಿಗೆ ಜು.14ರಂದು...

ಉತ್ತರ ಕರ್ನಾಟಕ ಅಭಿವೃದ್ಧಿಗೆ ಜು.14ರಂದು ಕವಿತಾಳದಲ್ಲಿ ಬೃಹತ್ ಸಂಕಲ್ಪ ಸಮಾಗಮ: ಚಂದ್ರಶೇಖರ ಗೌಡ ಮಾಗನೂರ

ವಾರ್ತಾಭಾರತಿವಾರ್ತಾಭಾರತಿ25 Jun 2026 9:51 PM IST
share
ಉತ್ತರ ಕರ್ನಾಟಕ ಅಭಿವೃದ್ಧಿಗೆ ಜು.14ರಂದು ಕವಿತಾಳದಲ್ಲಿ ಬೃಹತ್ ಸಂಕಲ್ಪ ಸಮಾಗಮ: ಚಂದ್ರಶೇಖರ ಗೌಡ ಮಾಗನೂರ

ಯಾದಗಿರಿ: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ಸಮಗ್ರ ನೀರಾವರಿ ಯೋಜನೆ, ತಿಂಥಿಣಿ ಬ್ರಿಜ್ ಜಲಾಶಯ, ನವಲಿ ಜಲಾಶಯ ನಿರ್ಮಾಣ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಏಮ್ಸ್ ಮಂಜೂರಾತಿಗೆ ಆಗ್ರಹಿಸಿ ಜುಲೈ 14ರಂದು ರಾಯಚೂರು ಜಿಲ್ಲೆಯ ಕವಿತಾಳದಲ್ಲಿ ಬೃಹತ್ ಸಂಕಲ್ಪ ಸಮಾಗಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಾಜಿ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ಗೌಡ ಮಾಗನೂರ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸರ್ವಜನಾಂಗದ ನಾಯಕ ಹಾಗೂ ಮಾಜಿ ಸಚಿವ ಕೆ. ಶಿವನಗೌಡ ನಾಯಕ ಅವರ 49ನೇ ಜನ್ಮದಿನದ ಅಂಗವಾಗಿ ಕೆ.ಎಸ್.ಎನ್. ಸಾಮಾಜಿಕ ಸೇವಾ ಸಮಿತಿ ವತಿಯಿಂದ ಸಂಜೆ 4 ಗಂಟೆಗೆ ಈ ಸಮಾಗಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಇದು ಕೇವಲ ಜನ್ಮದಿನ ಆಚರಣೆಯಾಗದೆ, ಉತ್ತರ ಕರ್ನಾಟಕದ ಜನರ ದಶಕಗಳ ಅಭಿವೃದ್ಧಿ ಕನಸುಗಳಿಗೆ ಧ್ವನಿಯಾಗಲಿರುವ ಮಹತ್ವದ ಕಾರ್ಯಕ್ರಮವಾಗಿದೆ ಎಂದು ಅವರು ತಿಳಿಸಿದರು.

ಸಮಗ್ರ ನೀರಾವರಿ ಯೋಜನೆ ಜಾರಿ, ನವಲಿ ಜಲಾಶಯ ನಿರ್ಮಾಣ, ತಿಂಥಿಣಿ ಬ್ರಿಜ್ ಬಳಿ ಜಲಾಶಯ ನಿರ್ಮಾಣ, ಕಲ್ಯಾಣ ಕರ್ನಾಟಕಕ್ಕೆ ಏಮ್ಸ್ ಮಂಜೂರಾತಿ ಹಾಗೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಸೇರಿದಂತೆ ಹಲವು ಮಹತ್ವದ ಬೇಡಿಕೆಗಳ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನಿರ್ಣಯದ ಮೂಲಕ ಹಕ್ಕೊತ್ತಾಯ ಸಲ್ಲಿಸಲಾಗುವುದು ಎಂದು ಹೇಳಿದರು.

ಚಿಕ್ಕಮಗಳೂರಿನ ಶ್ರೀ ಗೌರಿಗದ್ದೆ ಆಶ್ರಮದ ಅವಧೂತ ಶ್ರೀ ವಿನಯ ಗುರೂಜಿ ಜ್ಯೋತಿ ಬೆಳಗಿಸಿ ಆಶೀರ್ವಚನ ನೀಡಲಿದ್ದು, ತುರುವಿಹಾಳದ ಶ್ರೀ ಅಮೋಘಸಿದ್ದೇಶ್ವರ ಮಠದ ಶ್ರೀ ಮಾದಯ್ಯ ಗುರೂಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಮಠಾಧೀಶರು, ರೈತ ಮುಖಂಡರು, ಜನಪ್ರತಿನಿಧಿಗಳು, ಸಾಮಾಜಿಕ ಕಾರ್ಯಕರ್ತರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ತಿಂಥಿಣಿ ಬ್ರಿಜ್ ಬಳಿ ಜಲಾಶಯ ನಿರ್ಮಾಣವಾದರೆ ಯಾದಗಿರಿ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳ ಲಕ್ಷಾಂತರ ಎಕರೆ ಕೃಷಿಭೂಮಿಗೆ ಶಾಶ್ವತ ನೀರಾವರಿ ಸೌಲಭ್ಯ ದೊರೆಯಲಿದೆ. ನವಲಿ ಜಲಾಶಯ ಯೋಜನೆ ಜಾರಿಯಾದರೆ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. ಕಲ್ಯಾಣ ಕರ್ನಾಟಕಕ್ಕೆ ಏಮ್ಸ್ ಮಂಜೂರಾದರೆ ಈ ಭಾಗದ ಜನರಿಗೆ ಅತ್ಯಾಧುನಿಕ ಆರೋಗ್ಯ ಸೇವೆಗಳು ಲಭ್ಯವಾಗಲಿವೆ ಎಂದು ವಿವರಿಸಿದರು.

ಕಾರ್ಯಕ್ರಮವನ್ನು ಸಂಪೂರ್ಣವಾಗಿ ಪಕ್ಷಾತೀತವಾಗಿ ಆಯೋಜಿಸಲಾಗಿದ್ದು, ವಿವಿಧ ರೈತ ಸಂಘಟನೆಗಳ ಮುಖಂಡರು, ಮಹಿಳೆಯರು, ಯುವಕರು, ಸಾಮಾಜಿಕ ಕಾರ್ಯಕರ್ತರು, ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಭಾಗವಹಿಸಲಿದ್ದಾರೆ. ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಕೀಯ ಭೇದಭಾವವಿಲ್ಲದೆ ಉತ್ತರ ಕರ್ನಾಟಕದ ನ್ಯಾಯಸಮ್ಮತ ಬೇಡಿಕೆಗಳನ್ನು ಸರ್ಕಾರಗಳ ಮುಂದೆ ಮಂಡಿಸುವುದೇ ಸಮಾಗಮದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಲಲಿತಾ ಅನಪುರ, ಅಂಬಯ್ಯ ಶಾಬಾದಿ, ಶಿವಶರಣಪ್ಪ ಸಾಹುಕಾರ ಹಯ್ಯಾಳ, ಬಿ.ಎನ್. ವಿಶ್ವನಾಥ ನಾಯಕ,ಡಾ. ಕೃಷ್ಣಮೂರ್ತಿ ಕುಲಕರ್ಣಿ, ಹೆಚ್.ಕೆ. ಕುರಕುಂದಾ ಪಟೇಲ್, ವಿಜಯಕುಮಾರ ಮಗದಂಪುರ, ಚನ್ನುಕುಮಾರ್ ವಾಲಿ, ಸೈದಪ್ಪ ಕುಯಿಲೂರು, ಮಲ್ಲುಗೌಡ ಐಕೂರ್, ಅಜಯ್ ಮಾಸನ್, ಮೋನಪ್ಪ ಮರಮಕಲ್, ಗೋವಿಂದ ಹಕ್, ಮಲ್ಲಿಕಾರ್ಜುನ ನಾಯಕ್, ಮನೋಹರ ರಾಥೋಡ್, ಶಂಕರಣ್ಣ ಸಾಹುಕಾರ ಕಾಜಗಾರ, ದೇವೇಂದ್ರ ನಾಯಕ, ಬಂಡೇಶ್ ಹಯ್ಯಾಳ, ಜಯಸಿಂಹ ಚಟ್ನಳ್ಳಿ, ಪರಶುರಾಮ ದೋರನಹಳ್ಳಿ, ಶರಣಗೌಡ ದೋರನಹಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

North Karnataka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X