Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಡಿ.11ರಂದು ಯಾದಗಿರಿಯಲ್ಲಿ ಕರವೇ ವತಿಯಿಂದ...

ಡಿ.11ರಂದು ಯಾದಗಿರಿಯಲ್ಲಿ ಕರವೇ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ15 Nov 2026 5:40 PM IST
share
ಡಿ.11ರಂದು ಯಾದಗಿರಿಯಲ್ಲಿ ಕರವೇ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಯಾದಗಿರಿ: ನಗರದ ಕರವೇ ಜಿಲ್ಲಾ ಕಾರ್ಯಾಲಯದಲ್ಲಿ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಆರು ತಾಲೂಕುಗಳ ಅಧ್ಯಕ್ಷರ ಸಭೆ ನಡೆಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಂದೆಡೆ ಬರಗಾಲ, ಮತ್ತೊಂದೆಡೆ ಬಡತನದಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜಿಲ್ಲೆಯ ಹೆಣ್ಣುಮಕ್ಕಳ ಅನುಕೂಲಕ್ಕಾಗಿ ಡಿ.11ರಂದು ಯಾದಗಿರಿ ನಗರದ ಪಂಪ ಕವಿ ಮಹಾಮಂಟಪದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಈ ರಕ್ತದಾನ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕರವೇ ಕಾರ್ಯಕರ್ತರು, ಯುವಕರು, ಪ್ರಜ್ಞಾವಂತ ನಾಗರಿಕರು, ಸಂಘ-ಸಂಸ್ಥೆಗಳ ಮುಖಂಡರು, ಸಾಮಾಜಿಕ ಹೋರಾಟಗಾರರು, ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ಸ್ವಯಂಪ್ರೇರಿತವಾಗಿ ಪಾಲ್ಗೊಂಡು ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಯಲ್ಲಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಕರವೇ ಸಂಘಟನೆಯ ಶಕ್ತಿಯನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸಿಕೊಂಡು ಬಡ ಮತ್ತು ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ಕರೆ ನೀಡಿದರು.

ಜಿಲ್ಲೆಯಾದ್ಯಂತ ಕರವೇ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಸಂಘಟನೆಯ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸದ ಕೆಲವು ಪದಾಧಿಕಾರಿಗಳನ್ನು ಬದಲಿಸಿ, ಸಂಘಟನೆಯ ಬೆಳವಣಿಗೆಗೆ ಶ್ರಮಿಸುವ ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು ಚರ್ಚಿಸಲಾಯಿತು ಎಂದು ತಿಳಿಸಿದರು.

ಕರವೇ ಎಂದರೆ ಕೇವಲ ಒಂದು ಸಂಘಟನೆಯಲ್ಲ; ಅದು ಕನ್ನಡ ನಾಡು, ನುಡಿ, ನೆಲ ಮತ್ತು ಜಲದ ರಕ್ಷಣೆಯ ಜೊತೆಗೆ ಸಾಮಾಜಿಕ ಸೇವೆ, ಶಿಸ್ತು, ಬದ್ಧತೆ ಹಾಗೂ ಹೋರಾಟದ ಸಂಕೇತವಾಗಿದೆ. ಪ್ರತಿಯೊಬ್ಬ ಕಾರ್ಯಕರ್ತರೂ ಸಂಘಟನೆಯ ಸಿದ್ಧಾಂತಗಳಿಗೆ ಬದ್ಧರಾಗಿ ನಿಷ್ಠೆಯಿಂದ ಕೆಲಸ ಮಾಡಬೇಕು. ವೈಯಕ್ತಿಕ ಹಿತಾಸಕ್ತಿಗಿಂತ ಸಂಘಟನೆಯ ಹಿತಾಸಕ್ತಿ ಮತ್ತು ಜನಸೇವೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಜನರ ಸಂಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಸಂಘಟನೆಯ ಲಕ್ಷಣ. ಸಂಘಟನೆಯ ಶಕ್ತಿಯನ್ನು ಜನರ ಸೇವೆಗೆ ಬಳಸಿಕೊಂಡಾಗ ಮಾತ್ರ ಹೋರಾಟಕ್ಕೆ ನಿಜವಾದ ಅರ್ಥ ಬರುತ್ತದೆ ಎಂಬ ಸಂದೇಶವನ್ನು ಸಭೆಯಲ್ಲಿ ನೀಡಲಾಯಿತು ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಕರವೇ ಮುಖಂಡರಾದ ಮಲ್ಲು ಮಾಳಿಕೇರಿ, ಸಿದ್ದುನಾಯಕ ಹತ್ತಿಕುಣಿ, ಅಂಬ್ರೇಶ ಹತ್ತಿಮನಿ, ಸಂತೋಷಕುಮಾರ ನಿರ್ಮಲಕರ್, ವಿಶ್ವರಾಜ್ ಹೊನಗೇರಾ, ಹಣಮಂತನಾಯಕ ಖಾನಳ್ಳಿ, ಪ್ರಕಾಶ ಪಾಟೀಲ ಜೈಗ್ರಾಮ್, ನಾಗು ತಾಂಡೂರಕರ್, ವೆಂಕಟೇಶನಾಯಕ ಬೈರಿಮಡ್ಡಿ, ಅಂಬ್ರೇಶ ಕಟ್ಟಿಮನಿ, ಬಸವರಾಜ ಚನ್ನೂರು, ಮೌನೇಶ ಮಾಧ್ವಾರ, ಹಣಮಂತ ತೇಕರಾಳ, ಸಿದ್ದಪ್ಪ ಕೂಯಿಲೂರ, ಅಶೋಕ ನಾಯಕ, ಶಿವರಾಜ ನಾಡಗೌಡ, ದಿಲೀಪಕುಮಾರ ಸೈದಾಪೂರ, ವೆಂಕಟರಾಮುಲು ಸೈದಾಪೂರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags

YadgirkaraveBlood Donation
share
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X