Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಐಸಿಸಿ ಸಭೆಯಲ್ಲಿ ಎಲ್ಲ ಪಕ್ಷದ ಶಾಸಕರು...

ಐಸಿಸಿ ಸಭೆಯಲ್ಲಿ ಎಲ್ಲ ಪಕ್ಷದ ಶಾಸಕರು ನೀರಿನ ಸಮಸ್ಯೆ ಕುರಿತು ಧ್ವನಿ ಎತ್ತಿದ್ದಾರೆ: ಸಚಿವ ಡಾ. ಶರಣಪ್ರಕಾಶ ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ1 Nov 2026 7:03 PM IST
share
ಐಸಿಸಿ ಸಭೆಯಲ್ಲಿ ಎಲ್ಲ ಪಕ್ಷದ ಶಾಸಕರು ನೀರಿನ ಸಮಸ್ಯೆ ಕುರಿತು ಧ್ವನಿ ಎತ್ತಿದ್ದಾರೆ: ಸಚಿವ ಡಾ. ಶರಣಪ್ರಕಾಶ ಪಾಟೀಲ್‌

ಯಾದಗಿರಿ ಐಸಿಸಿ ಸಭೆಯಲ್ಲಿ ಎಲ್ಲ ಪಕ್ಷಗಳ ಶಾಸಕರು ಭಾಗವಹಿಸಿ ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ಜಿಲ್ಲೆಯ ಶಾಸಕರು ಸಭೆಯಲ್ಲಿ ಸರಿಯಾಗಿ ಮಾತನಾಡುತ್ತಿಲ್ಲ, ನೀರಾವರಿ ಕುರಿತು ಅವರಿಗೆ ಮಾಹಿತಿ ಇಲ್ಲ ಎಂಬ ಆರೋಪಗಳು ಸರಿಯಲ್ಲ. ನಾನು ಸ್ವತಃ ಸಭೆಯಲ್ಲಿ ಭಾಗವಹಿಸಿದ್ದು, ಎಲ್ಲ ಪಕ್ಷಗಳ ಶಾಸಕರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ಸ್ಪಷ್ಟಪಡಿಸಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐಸಿಸಿ ಸಭೆಯಲ್ಲಿ ನಮ್ಮ ಶಾಸಕರು ಬಹಳ ಪರಿಣಾಮಕಾರಿಯಾಗಿ ಮಾತನಾಡಿದ್ದಾರೆ. ಶಾಸಕರಾದ ಶರಣಬಸಪ್ಪ ದರ್ಶನಾಪುರ ಹಾಗೂ ರಾಜಾ ವೇಣುಗೋಪಾಲ ನಾಯಕ ಸೇರಿದಂತೆ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ನೀರಿನ ಲಭ್ಯತೆ ಆಧರಿಸಿ ನಿರ್ಧಾರ ಕೈಗೊಳ್ಳಬೇಕಾಗಿದೆ. ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ನೀರಿನ ಪರಿಸ್ಥಿತಿಯನ್ನು ಪರಿಶೀಲಿಸಬೇಕೆಂದು ತಿಳಿಸಿದರು.

ಮಾರ್ಚ್‌ನಿಂದ ಜೂನ್‌ವರೆಗೆ ಮಳೆ ಬಾರದಿದ್ದರೆ ಜನರಿಗೆ ನೀರು ಎಲ್ಲಿಂದ ಒದಗಿಸಬೇಕು ಎಂಬುದನ್ನು ಸರ್ಕಾರ ಗಮನಿಸಬೇಕಾಗಿದೆ. ನಾವು ಆಡಳಿತ ನಡೆಸುತ್ತಿರುವುದರಿಂದ ಜನರ ಹಿತಾಸಕ್ತಿ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಮಾಜಿ ಸಚಿವ ರಾಜೂಗೌಡ ಅವರು ಪ್ರತಿಭಟನೆ, ಬಂದ್ ಮಾಡುವ ಕುರಿತು ಕಮೆಂಟ್ ಮಾಡುವುದಿಲ್ಲ, ಅವರು ಮಾಡುವುದು ರಾಜಕೀಯವಾಗಿರಲಿದೆ ಎಂದರು.

ಮತದಾರರ ಹಕ್ಕು ಮತ್ತು ಪ್ರಜಾಪ್ರಭುತ್ವದ ರಕ್ಷಣೆ ಅಗತ್ಯ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ ವಿಚಾರ ಕುರಿತು ಮಾತನಾಡಿದ ಸಚಿವರು, ಮತದಾನದ ಹಕ್ಕು ಪ್ರಜಾಪ್ರಭುತ್ವದ ಮೂಲಭೂತ ಅಂಶವಾಗಿದೆ. ಮತದಾರರ ಹಕ್ಕುಗಳನ್ನು ರಕ್ಷಿಸುವುದು ಅತ್ಯಂತ ಮುಖ್ಯವಾಗಿದೆ. ಮತದಾರರ ಪಟ್ಟಿಯನ್ನು ತಮಗೆ ಅನುಕೂಲವಾಗುವ ರೀತಿಯಲ್ಲಿ ರೂಪಿಸಲು ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗ ಪ್ರಯತ್ನಿಸುತ್ತಿವೆ ಎಂಬ ಆರೋಪವನ್ನು ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಮಾಡಿದರು.

ಮತದಾರರ ಪಟ್ಟಿಯಿಂದ ತೆಗೆದುಹಾಕಲಾದವರನ್ನು ಮತ್ತೆ ಸೇರಿಸುವ ವಿಚಾರದಲ್ಲಿ ವೈಜ್ಞಾನಿಕ ವಿಧಾನ ಅನುಸರಿಸಬೇಕು. ಮತದಾರರ ಹಕ್ಕುಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಹಾಲಿನ ದರ ಹೆಚ್ಚಳ ರೈತರ ಹಿತಕ್ಕಾಗಿ: ಸಚಿವ ಡಾ.ಶರಣಪ್ರಕಾಶ ಪಾಟೀಲ್‌

ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಹಾಲು ಉತ್ಪಾದಕರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ. ಮೇವು ಬೆಲೆ ಹೆಚ್ಚಳದಿಂದ ಹಸುಗಳನ್ನು ಸಾಕುವುದು ಕಷ್ಟವಾಗುತ್ತಿದೆ. ಹಾಲು ಉತ್ಪಾದಕರ ಬಹುದಿನಗಳ ಬೇಡಿಕೆಯನ್ನು ಗಮನಿಸಿ ಹಾಲಿನ ದರ ಹೆಚ್ಚಳ ಮಾಡಲಾಗಿದೆ ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ತಿಳಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಲಿನ ದರದಲ್ಲಿ ಎಂಟು ರೂಪಾಯಿ ಹೆಚ್ಚಳ ಮಾಡಿರುವುದು ಸತ್ಯ. ಅದರಲ್ಲಿ ಏಳು ರೂಪಾಯಿ ರೈತರಿಗೆ ದೊರೆಯುತ್ತದೆ. ಸರ್ಕಾರಕ್ಕೆ ಇದರಿಂದ ಯಾವುದೇ ಲಾಭವಿಲ್ಲ. ರೈತರು ಹಾಲು ಉತ್ಪಾದನೆ ಮುಂದುವರಿಸಬೇಕು ಮತ್ತು ನಮ್ಮ ಗೋಮಾತೆಯನ್ನು ರಕ್ಷಿಸಬೇಕು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ರಾಜ್ಯದಲ್ಲಿ ಹಾಲಿನ ಉತ್ಪಾದನೆ ಕಡಿಮೆಯಾದರೆ ರೈತರು ಹಾಗೂ ಜಾನುವಾರುಗಳ ಪರಿಸ್ಥಿತಿ ಮತ್ತಷ್ಟು ಕಷ್ಟವಾಗುತ್ತದೆ. ಬರ ಪರಿಸ್ಥಿತಿಯಲ್ಲಿ ಹಸುಗಳನ್ನು ಸಾಕುವ ರೈತರಿಗೆ ನೆರವು ನೀಡುವುದು ಅಗತ್ಯವಾಗಿದೆ ಎಂದು ಹೇಳಿದರು.

ಬಸ್ ದರ ಹೆಚ್ಚಳ ಕುರಿತು ಮಾತನಾಡಿದ ಸಚಿವರು, ಮುಖ್ಯಮಂತ್ರಿ ಅವರು ಸಂಬಂಧಪಟ್ಟ ಇಲಾಖೆಯ ಸಚಿವರು ಈ ಕುರಿತು ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದರು. ಡೀಸೆಲ್ ವೆಚ್ಚ ಹಾಗೂ ಸಾರಿಗೆ ಇಲಾಖೆಯ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಲಾಗುತ್ತದೆ.

ಬಸ್ ದರ ಹೆಚ್ಚಳದ ಸಾಧಕ-ಬಾಧಕಗಳನ್ನು ಗಮನಿಸಿ ಸಂಬಂಧಪಟ್ಟ ಇಲಾಖೆಯವರು ನಿರ್ಧಾರ ಕೈಗೊಳ್ಳುತ್ತಾರೆ. ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಅದರ ಪರಿಣಾಮಗಳನ್ನು ಪರಿಶೀಲಿಸಬೇಕಾಗಿದೆ ಎಂದು ಹೇಳಿದರು.

ನೀರಿನ ಬಳಕೆಗೆ ದಾಖಲೆ ಇರಬೇಕು

ಐಸಿಸಿ ಸಭೆಯಲ್ಲಿ ನೀರಿನ ಹಂಚಿಕೆ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ನೀರಿನ ಲಭ್ಯತೆ, ನೀರಿನ ಬಳಕೆ ಮತ್ತು ಕಾಲುವೆಗಳಿಗೆ ನೀರು ಹರಿಸಿರುವ ಕುರಿತು ದಾಖಲೆ ಇರಬೇಕು. ನೀರನ್ನು ಎಷ್ಟು ಪ್ರಮಾಣದಲ್ಲಿ ಬಿಡುಗಡೆ ಮಾಡಲಾಗಿದೆ ಎಂಬುದರ ಕುರಿತು ಲೆಕ್ಕ ಇರಬೇಕಾಗಿದೆ ಎಂದು ಸಚಿವರು ಹೇಳಿದರು.

ನೀರಿನ ಹಂಚಿಕೆ ಕುರಿತು ಯಾವುದೇ ನಿರ್ಧಾರ ಏಕಪಕ್ಷೀಯವಾಗಿ ಕೈಗೊಳ್ಳಲು ಸಾಧ್ಯವಿಲ್ಲ. ಸಭೆಯಲ್ಲಿ ಕೈಗೊಂಡ ನಿರ್ಧಾರ ಮತ್ತು ನೀರಿನ ಲಭ್ಯತೆ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ.

ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಘೋಷಣೆಯಾಗಿದ್ದು, ಬೆಳೆ ಕಟಾವು ಪ್ರಯೋಗಗಳ ನಂತರ ರೈತರಿಗೆ ದೊರೆಯಬೇಕಾದ ಪರಿಹಾರ ಮತ್ತು ಸೌಲಭ್ಯಗಳ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಲಕ್ಷ್ಮೀನಗರ, ಬಸವೇಶ್ವರನಗರದಲ್ಲಿ ನೀರಿನ ಸಮಸ್ಯೆಗೆ ಪರಿಹಾರ

ಲಕ್ಷ್ಮೀನಗರ ಮತ್ತು ಬಸವೇಶ್ವರನಗರ ಪ್ರದೇಶಗಳಲ್ಲಿ ನೀರಿನ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿರುವ ಕುರಿತು ಮಾತನಾಡಿದ ಸಚಿವರು, ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.

ನದಿಯಿಂದ ನೀರನ್ನು ಲಿಫ್ಟ್ ಮಾಡಿ ಕೆರೆಗೆ ತುಂಬಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸುವ ಸಾಧ್ಯತೆ ಇದೆ. ಈ ಕುರಿತು ಪರಿಶೀಲನೆ ನಡೆಸಿ, ಅಗತ್ಯವಾದ ಪೈಪ್‌ಲೈನ್ ವ್ಯವಸ್ಥೆ ಮತ್ತು ನೀರಿನ ಪೂರೈಕೆ ಕುರಿತು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.

ಪೊಲೀಸ್ ತನಿಖೆಯಲ್ಲಿ ಸಚಿವರ ಹಸ್ತಕ್ಷೇಪವಿಲ್ಲ

ರಾಜ್ಯದಲ್ಲಿ ನಡೆಯುತ್ತಿರುವ ಪೊಲೀಸ್ ತನಿಖೆ ಕುರಿತು ಮಾತನಾಡಿದ ಸಚಿವರು, ತನಿಖೆಯ ವಿಚಾರದಲ್ಲಿ ಸಚಿವರಾಗಿ ನಾನು ಯಾವುದೇ ನಿರ್ದೇಶನ ನೀಡಲು ಸಾಧ್ಯವಿಲ್ಲ. ತನಿಖೆ ನಡೆಸುವ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಬೇಕು ಎಂದು ಹೇಳಿದರು.

ತನಿಖೆಯ ವಿಚಾರದಲ್ಲಿ ನಾನು ಯಾವುದೇ ಕಾಮೆಂಟ್ ಮಾಡಲು ಬಯಸುವುದಿಲ್ಲ. ತನಿಖಾಧಿಕಾರಿಗಳು ಸರಿಯಾದ ನಿರ್ಧಾರ ಕೈಗೊಳ್ಳುತ್ತಾರೆ. ತನಿಖೆಯಲ್ಲಿ ಯಾರೇ ತಪ್ಪಿತಸ್ಥರಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ತನಿಖೆ ಪೂರ್ಣಗೊಂಡು ವರದಿ ಸಲ್ಲಿಕೆಯಾದ ನಂತರವೇ ಪ್ರಕರಣದಲ್ಲಿ ಯಾರ ಪಾತ್ರವಿದೆ, ಯಾರು ಸೂತ್ರಧಾರಿಗಳು ಎಂಬುದರ ಕುರಿತು ಮಾತನಾಡಲು ಸಾಧ್ಯ. ತನಿಖೆ ಪೂರ್ಣಗೊಳ್ಳುವ ಮುನ್ನ ಯಾವುದೇ ನಿರ್ಧಾರಕ್ಕೆ ಬರುವುದು ಸರಿಯಲ್ಲ ಎಂದು ಹೇಳಿದರು.

ರಾಜಕೀಯ ಆರೋಪಗಳಿಗೆ ಪ್ರತಿಕ್ರಿಯೆ

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಆರೋಪಗಳ ಕುರಿತು ಮಾತನಾಡಿದ ಸಚಿವರು, ರಾಜಕೀಯ ಉದ್ದೇಶದಿಂದ ಕೆಲವರು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜಕೀಯ ನಾಯಕರು ಸಾರ್ವಜನಿಕ ಜೀವನದಲ್ಲಿ ಮಾತನಾಡುವಾಗ ಜವಾಬ್ದಾರಿಯಿಂದ ಮಾತನಾಡಬೇಕು. ಜನರಿಗೆ ಎಲ್ಲ ವಿಚಾರಗಳೂ ತಿಳಿದಿವೆ. ಪ್ರತಿಯೊಬ್ಬ ನಾಯಕನ ರಾಜಕೀಯ ಹಿನ್ನೆಲೆ, ಸ್ವಭಾವ ಮತ್ತು ಕಾರ್ಯವೈಖರಿಯನ್ನು ಜನರು ಗಮನಿಸುತ್ತಿದ್ದಾರೆ ಎಂದು ಹೇಳಿದರು.



Tags

MLAwaterDr. Sharanprakash Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X