Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಕೋಮು ದ್ವೇಷ ಬಿತ್ತುವವರೇ ನಿಜವಾದ...

ಕೋಮು ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು; ಆರೆಸ್ಸೆಸ್‌ಗೂ ನೋಂದಣಿ ಮಾಡಿಸಲಿದ್ದೇನೆ: ಸಚಿವ ಪ್ರಿಯಾಂಕ್ ಖರ್ಗೆ

ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳನ್ನು ಪಾಲಿಸಿ ಪ್ರಬುದ್ಧ ಸಮಾಜ ನಿರ್ಮಿಸಿ; ಯುವಜನರಿಗೆ ಕರೆ

ವಾರ್ತಾಭಾರತಿವಾರ್ತಾಭಾರತಿ13 Nov 2026 10:25 PM IST
share
ಕೋಮು ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು; ಆರೆಸ್ಸೆಸ್‌ಗೂ ನೋಂದಣಿ ಮಾಡಿಸಲಿದ್ದೇನೆ: ಸಚಿವ ಪ್ರಿಯಾಂಕ್ ಖರ್ಗೆ

ಯಾದಗಿರಿ: ಸಮಾಜದಲ್ಲಿ ಧರ್ಮ ಮತ್ತು ಜಾತಿಗಳ ನಡುವೆ ದ್ವೇಷದ ವಿಷಬೀಜ ಬಿತ್ತುವವರೇ ನಿಜವಾದ ದೇಶದ್ರೋಹಿಗಳು. ಸಂವಿಧಾನವೇ ಸ್ವತಂತ್ರ ಭಾರತದ ಶ್ರೇಷ್ಠ ಶಕ್ತಿ. ಇದರಲ್ಲಿ ಯಾರಿಗೂ ಜಗ್ಗುವುದಿಲ್ಲ, ಬಗ್ಗುವುದೂ ಇಲ್ಲ. ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ನನ್ನ ಹೋರಾಟ ನಿರಂತರವಾಗಿರಲಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಯಾದಗಿರಿ ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ 2023-24ನೇ ಸಾಲಿನ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಅಂದಾಜು 31 ಲಕ್ಷ ವೆಚ್ಚದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.

1949ರಲ್ಲಿ ಮನುವಾದಿ ಸಂಘಟನೆಗಳು ನಮಗೆ ಸಂವಿಧಾನ ಬೇಡ, ಮನುಸ್ಮೃತಿ ಬೇಕು ಎಂದು 150 ಬಾರಿ ಪ್ರತಿಭಟನೆ ನಡೆಸಿದ್ದವು. ಆರೆಸ್ಸೆಸ್‌ನ ಮುಖವಾಣಿ 'ಆರ್ಗನೈಸರ್' ಪತ್ರಿಕೆಯಲ್ಲಿ ರಾಷ್ಟ್ರಧ್ವಜ ಮತ್ತು ಸಂವಿಧಾನವನ್ನು ಒಪ್ಪುವುದಿಲ್ಲ ಎಂಬ ನಿಲುವು ವ್ಯಕ್ತಪಡಿಸಲಾಗಿತ್ತು. "ಆರೆಸ್ಸೆಸ್ ಇನ್ನೂ ನೋಂದಾಯಿತ ಸಂಘಟನೆಯಾಗಿಲ್ಲ. ದಲಿತ ಸಂಘಟನೆಗಳಾದ ಡಿ.ಎಸ್‌.ಎಸ್‌.ಗಳಿಗೆ ನೋಂದಣಿ ಇರುವಾಗ ಆರೆಸ್ಸೆಸ್‌ಗೂ ಮುಂದಿನ ದಿನಗಳಲ್ಲಿ ನೋಂದಣಿ ಮಾಡಿಸಲಿದ್ದೇನೆ" ಎಂದು ಹೇಳಿದರು.

ಆರೆಸ್ಸೆಸ್‌ನವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರೇ? ಕ್ವಿಟ್ ಇಂಡಿಯಾ ಚಳವಳಿ ಅಥವಾ ದುಂಡುಮೇಜಿನ ಸಭೆಯಲ್ಲಿ ಪಾಲ್ಗೊಂಡಿದ್ದರೇ? ಮಹಾತ್ಮ ಗಾಂಧೀಜಿಯನ್ನು ಹತ್ಯೆ ಮಾಡಿದ ವ್ಯಕ್ತಿಯ ಪುತ್ಥಳಿಗೆ ಪೂಜೆ ಸಲ್ಲಿಸಿ, ಆತನನ್ನು ದೇಶಪ್ರೇಮಿ ಎಂದು ಕರೆಯುತ್ತಾರೆ. ಹಾಗಾದರೆ ಗಾಂಧೀಜಿ ದೇಶದ್ರೋಹಿಯೇ ಎಂದು ಪ್ರಶ್ನಿಸಿದರು.

ಸ್ವತಂತ್ರ ಭಾರತದಲ್ಲಿ ಸಂವಿಧಾನವೇ ಅತ್ಯುನ್ನತವಾಗಿದೆ. ಸಮಾಜದಲ್ಲಿ ವಿಷಬೀಜ ಬಿತ್ತಿ, ಧರ್ಮ ಮತ್ತು ಜಾತಿಗಳ ನಡುವೆ ಸಂಘರ್ಷ ಸೃಷ್ಟಿಸುವವರೇ ನಿಜವಾದ ದೇಶದ್ರೋಹಿಗಳು ಎಂಬ ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯವನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಇಂದು ದೇಶದಲ್ಲಿ ಯಾರು ಸಮಾಜದಲ್ಲಿ ದ್ವೇಷ ಬಿತ್ತುತ್ತಿದ್ದಾರೆ ಎಂಬುದನ್ನು ಜನರು ಮನಗಾಣಬೇಕು ಎಂದರು.

ಭಗವಾನ್ ಗೌತಮ ಬುದ್ಧರ ಕಾಲದಿಂದ 2,500 ವರ್ಷಗಳು, ಬಸವಣ್ಣನವರ ಕಾಲದಿಂದ ಸುಮಾರು 900 ವರ್ಷಗಳು ಹಾಗೂ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಕಳೆದಿವೆ. ಆದರೂ ಸಮಾಜದಲ್ಲಿ ಸಮಾನತೆ ಮತ್ತು ಸಾಮಾಜಿಕ ಬದಲಾವಣೆಯ ಕುರಿತು ಮಾತನಾಡುವ ಪರಿಸ್ಥಿತಿ ಮುಂದುವರಿದಿದೆ. ಸಮಾನತೆ ಮತ್ತು ಸ್ವಾಭಿಮಾನದ ಸಮಾಜ ನಿರ್ಮಾಣವಾಗಬೇಕಾದರೆ ಮಹನೀಯರ ಪ್ರತಿಮೆಗಳನ್ನು ಸ್ಥಾಪಿಸುವುದಷ್ಟೇ ಸಾಲದು; ಅವರ ತತ್ವ, ಆದರ್ಶ ಮತ್ತು ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ನಾನು ಹಾರ, ಶಾಲು, ತುರಾಯಿ ಸ್ವೀಕರಿಸುವುದಿಲ್ಲ. ಅದರ ಬದಲಿಗೆ ಪುಸ್ತಕಗಳನ್ನು ಉಡುಗೊರೆಯಾಗಿ ನೀಡುವಂತೆ ಮನವಿ ಮಾಡುತ್ತೇನೆ. ಅವುಗಳನ್ನು ಸಂಗ್ರಹಿಸಿ ಅರಿವು ಕೇಂದ್ರಗಳಿಗೆ ನೀಡಲಾಗುತ್ತದೆ. ವ್ಯಕ್ತಿಪೂಜೆ ಬಿಟ್ಟು ಪುಸ್ತಕ ಓದುವ, ವೈಜ್ಞಾನಿಕ ಮತ್ತು ಸಾಮಾಜಿಕ ಚಿಂತನೆ ಬೆಳೆಸುವ ಸಂಸ್ಕೃತಿ ಬೆಳೆಸಬೇಕು ಎಂದು ಹೇಳಿದರು.

ಜೆಸಿಬಿ ಮೂಲಕ ಹಾರ ಹಾಕುವುದು, ಎಲ್ಲೆಡೆ ದೊಡ್ಡ ದೊಡ್ಡ ಪೋಸ್ಟರ್‌ಗಳನ್ನು ಹಾಕುವುದು ಮುಖ್ಯವಲ್ಲ. ಮಹನೀಯರ ವಿಚಾರಗಳನ್ನು ಅರಿತುಕೊಂಡು ಅವರ ಆದರ್ಶಗಳನ್ನು ಪಾಲಿಸುವುದು ಮುಖ್ಯ. ಶಿಕ್ಷಣ ಪಡೆದವರು ಪ್ರಶ್ನಿಸಬೇಕು, ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು. ಬಿಜೆಪಿಯವರಿಗೆ ನನ್ನ ಸೂಟು, ಬೂಟು ಸಮಸ್ಯೆಯಲ್ಲ; ಅವರಿಗೆ ನನ್ನ ಘರ್ಜನೆಯೇ ದೊಡ್ಡ ಸಮಸ್ಯೆಯಾಗಿದೆ ಎಂದು ವ್ಯಂಗ್ಯವಾಡಿದರು.

ವಿಶ್ವದ ನಾಲ್ಕನೇ ಅತಿದೊಡ್ಡ ಮಾಹಿತಿ ತಂತ್ರಜ್ಞಾನ ಕೇಂದ್ರವನ್ನು ದಲಿತ ವ್ಯಕ್ತಿಯೊಬ್ಬರು ಮುನ್ನಡೆಸುತ್ತಿದ್ದಾರೆ ಎಂಬುದನ್ನು ಕೆಲವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ದಲಿತರು ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರಬಾರದೇ? ಜನಪ್ರತಿನಿಧಿಗಳಾಗಬಾರದೇ? ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಸತ್ತಿನ ನೂತನ ಕಟ್ಟಡದ ಉದ್ಘಾಟನೆಗೆ ಆಹ್ವಾನಿಸದಿರುವುದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಸ್ವಚ್ಛಗೊಳಿಸುವಂತಹ ಘಟನೆಗಳು ಯಾವ ಮನಸ್ಥಿತಿಯನ್ನು ತೋರಿಸುತ್ತವೆ ಎಂದು ಪ್ರಶ್ನಿಸಿದರು.

ಡಾ.ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಕೊಡುಗೆ ಅಪಾರ. ಸ್ವತಂತ್ರ ಭಾರತದ ಸಚಿವ ಸಂಪುಟದಲ್ಲಿ ಅರ್ಥಶಾಸ್ತ್ರ ಮತ್ತು ತತ್ವಶಾಸ್ತ್ರದ ಆಳವಾದ ಜ್ಞಾನ ಹೊಂದಿದ್ದ ಏಕೈಕ ವ್ಯಕ್ತಿ ಅಂಬೇಡ್ಕರ್ ಒಬ್ಬರಾಗಿದ್ದರು. ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆಗೆ ಅವರ 'ದಿ ಪ್ರಾಬ್ಲಂ ಆಫ್ ದಿ ರೂಪೀ' ಕೃತಿ ಸೇರಿದಂತೆ ಅವರ ಆರ್ಥಿಕ ಚಿಂತನೆಗಳು ಮಹತ್ವದ ಕೊಡುಗೆ ನೀಡಿವೆ. ಕಾರ್ಮಿಕ ಕಾನೂನುಗಳು, ಕನಿಷ್ಠ ವೇತನ, ಭವಿಷ್ಯ ನಿಧಿ ಸೇರಿದಂತೆ ಅನೇಕ ಕಾರ್ಮಿಕ ಹಿತದ ಕಾಯ್ದೆಗಳ ರೂಪಿಸುವಿಕೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಮಹಿಳೆಯರಿಗೆ ಆಸ್ತಿ ಹಕ್ಕು ಹಾಗೂ ಸಮಾನ ಅವಕಾಶಗಳ ವಿಚಾರದಲ್ಲಿಯೂ ಅವರ ಕೊಡುಗೆ ಸ್ಮರಣೀಯವಾಗಿದೆ ಎಂದರು.

ಬಿಜೆಪಿ ನಾಯಕ ಸುನೀಲ್ ಕುಮಾರ್ ಅವರು 'ಕಾನ್ವೆಂಟ್ ದಲಿತ' ಎಂಬ ರೀತಿಯಲ್ಲಿ ಟೀಕೆ ಮಾಡುತ್ತಾರೆ. ಮತ್ತೊಬ್ಬರು ತಮ್ಮ ತಂದೆ ಒಂದು ಲೋಟ ಹಾಲು ಹೆಚ್ಚಾಗಿ ನೀಡಿದ್ದಾರೆ ಎಂದು ಹೇಳುತ್ತಾರೆ. ನಮ್ಮ ತಂದೆ ನಮಗೆ ಹೆಚ್ಚು ಹಾಲು ನೀಡಿದ್ದರೆ ಇವರಿಗೇಕೆ ಇಷ್ಟೊಂದು ಅಸಮಾಧಾನ ಎಂದು ಪ್ರಶ್ನಿಸಿದರು.

ಕೇಂದ್ರ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಅವರ ಹೆಸರನ್ನು ಉಲ್ಲೇಖಿಸಿದ ರೀತಿಯೂ ಅವಮಾನಕರವಾಗಿತ್ತು. ಇಂತಹ ಮನುವಾದಿ ಮನಸ್ಥಿತಿಗಳು ದೇಶವನ್ನು ಆಳಲು ಮುಂದಾಗಿರುವಾಗ ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ಧ್ವನಿ ಎತ್ತುವುದು ಅಗತ್ಯ. ನಾನು ಯಾರಿಗೂ ಹೆದರುವುದಿಲ್ಲ. ಜನರ ಆಶೀರ್ವಾದ ಇರುವವರೆಗೆ ಇಂತಹ ಎಷ್ಟೇ ಸವಾಲುಗಳು ಎದುರಾದರೂ ಒಂದು ಹೆಜ್ಜೆಯೂ ಹಿಂದೆ ಇಡುವುದಿಲ್ಲ ಎಂದು ಹೇಳಿದರು.

ದೇಶದಲ್ಲಿ ವಿವಿಧ ಜಾತಿ, ಧರ್ಮ, ಭಾಷೆ ಮತ್ತು ಸಂಸ್ಕೃತಿಗಳ ಜನರಿದ್ದಾರೆ. ಇಂತಹ ವೈವಿಧ್ಯತೆಯ ನಡುವೆ ಪರಸ್ಪರ ಗೌರವ ಮತ್ತು ಸಮಾನತೆ ಮುಖ್ಯ. ವ್ಯಕ್ತಿಪೂಜೆ ಬಿಟ್ಟು ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ತತ್ವಗಳನ್ನು ತಿಳಿದುಕೊಂಡು ಪಾಲಿಸಬೇಕು. ಅವರ ಪ್ರತಿಮೆಗಳು ಕೇವಲ ಅಲಂಕಾರವಾಗದೆ, ಅವರ ವಿಚಾರಧಾರೆಗಳನ್ನು ಅನುಸರಿಸಲು ಪ್ರೇರಣೆಯಾಗಬೇಕು. ಯುವಕರು ಪ್ರಬುದ್ಧ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

ಯಾದಗಿರಿ ಜಿಲ್ಲೆಯಲ್ಲಿ ಯಾವೆಲ್ಲ ಕಡೆ ಪೊಲೀಸ್ ಠಾಣೆಗಳ ಅಗತ್ಯವಿದೆ ಎಂಬುದನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಯಾದಗಿರಿ ಕ್ಷೇತ್ರದ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಪ್ರಾಸ್ತಾವಿಕವಾಗಿ ಮಾತನಾಡಿ, ಡಾ.ಅಂಬೇಡ್ಕರ್ ಅವರ ಪುತ್ಥಳಿ ಸಿದ್ಧಗೊಂಡು ಎರಡು ವರ್ಷಗಳಾಗಿವೆ. ಸಚಿವ ಪ್ರಿಯಾಂಕ್ ಖರ್ಗೆ ಅವರಿಂದಲೇ ಅನಾವರಣಗೊಳ್ಳಬೇಕು ಎಂಬ ಆಶಯದಿಂದ ಕಾಯಲಾಗಿತ್ತು. ಇದೀಗ ಅವರಿಂದಲೇ ಪುತ್ಥಳಿ ಅನಾವರಣಗೊಂಡಿರುವುದು ಸಂತಸ ತಂದಿದೆ ಎಂದು ಹೇಳಿದರು.

ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಮಾತನಾಡಿ, ಶಿಕ್ಷಣ ಪಡೆಯಿರಿ, ಸಂಘಟಿತರಾಗಿ, ಹೋರಾಟ ಮಾಡಿ ಎಂಬ ಅಂಬೇಡ್ಕರ್ ಅವರ ಸಂದೇಶದಂತೆ ನಾವೆಲ್ಲರೂ ಮುನ್ನಡೆಯಬೇಕು. ಸಚಿವ ಪ್ರಿಯಾಂಕ್ ಖರ್ಗೆ ಅವರಂತೆ ಅಭಿವೃದ್ಧಿಪರ ನಾಯಕರೆನಿಸಿಕೊಳ್ಳಲು ಜನಪ್ರತಿನಿಧಿಗಳು ಶ್ರಮಿಸಬೇಕು ಎಂದರು.

ಉರಿಲಿಂಗಪೆದ್ದಿ ಕೊಡ್ಲಾ ಮಠದ ಪೀಠಾಧಿಪತಿ ಡಾ.ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಅಂಬೇಡ್ಕರ್ ಅವರ ಮೂರ್ತಿ ಅನಾವರಣಕ್ಕೆ; ಬಾಯಲ್ಲಿ ಭೀಮವಾದ ಹೇಳುತ್ತಾ ಮನೆಯಲ್ಲಿ ಮನುಸ್ಮೃತಿ ಇಟ್ಟುಕೊಳ್ಳುವವರನ್ನು ಬದಿಗಿಟ್ಟು, ಸಂವಿಧಾನದ ಪರವಾಗಿ ದಿಟ್ಟವಾಗಿ ಮಾತನಾಡುವ ಪ್ರಿಯಾಂಕ್ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ. ಅವರು ನೇರ ಮತ್ತು ನಿಷ್ಠುರ ಮಾತುಗಾರರಾಗಿದ್ದು, ಸಂವಿಧಾನವನ್ನು ಹತ್ತಿಕ್ಕುವ ಪ್ರಯತ್ನಗಳನ್ನು ಖಂಡಿಸುವ ಧೈರ್ಯ ಹೊಂದಿದ್ದಾರೆ ಎಂದು ಹೇಳಿದರು.

ಪುತ್ಥಳಿ, ಪುಸ್ತಕ, ಮೆರವಣಿಗೆ ಮತ್ತು ಬರವಣಿಗೆಗಳಿಗಿಂತ ಅಂಬೇಡ್ಕರ್ ಅವರ ವಿಚಾರಧಾರೆ ಮುಖ್ಯ. ಪ್ರಿಯಾಂಕ್ ಖರ್ಗೆ ಅವರು ಹಾರ, ಶಾಲು, ತುರಾಯಿ ಸ್ವೀಕರಿಸದೆ ಪುಸ್ತಕಗಳಿಗೆ ಆದ್ಯತೆ ನೀಡುತ್ತಿರುವುದು ನಿಜವಾದ ಅಂಬೇಡ್ಕರ್‌ವಾದದ ಸಂಕೇತವಾಗಿದೆ. ಅಂಬೇಡ್ಕರ್ ಅವರು ಪ್ರತಿಮೆಗಳಲ್ಲಿ ಮಾತ್ರವಲ್ಲ, ಅವರ ವಿಚಾರಗಳನ್ನು ಸಾರುವ ಲೇಖನಿಗಳಲ್ಲಿ ಮತ್ತು ಗ್ರಂಥಾಲಯಗಳಲ್ಲಿ ಜೀವಂತವಾಗಿದ್ದಾರೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾಜಿಕ ನ್ಯಾಯಕ್ಕಾಗಿ ನಿರಂತರ ಹೋರಾಡುತ್ತಿದ್ದಾರೆ. ಯುವಕರ ಕೈಗೆ ಪೆನ್ನು ಕೊಟ್ಟು ಶಿಕ್ಷಣದ ಮೂಲಕ ಸಬಲಗೊಳಿಸುವುದು ಮುಖ್ಯ. ಜಿಲ್ಲಾಧಿಕಾರಿ ಕಚೇರಿ ಎದುರು ಕೇವಲ ಘೋಷಣೆ ಕೂಗುವುದರಿಂದ ಅಂಬೇಡ್ಕರ್‌ವಾದದ ಆಶಯ ಈಡೇರುವುದಿಲ್ಲ; ಒಗ್ಗಟ್ಟಿನಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ನಮ್ಮ ಮತ ನಮ್ಮ ಹಕ್ಕು ಎಂಬುದನ್ನು ಅರಿತುಕೊಳ್ಳಬೇಕು. ಮತವನ್ನು ಮಾರಿಕೊಳ್ಳುವುದು ಸ್ವಂತ ಮಗಳನ್ನು ಮಾರಿಕೊಂಡಂತೆ ಎಂದು ಅವರು ಎಚ್ಚರಿಸಿದರು.

ಪ್ರಿಯಾಂಕ್ ಖರ್ಗೆ ಅವರು ಕೋಟು, ಬೂಟು ಧರಿಸಿದರೆ ಕುಮಾರಸ್ವಾಮಿಯವರಿಗೆ ಏಕೆ ಕಷ್ಟ? ಅಸ್ಪೃಶ್ಯರು ಸೂಟು, ಬೂಟು ಧರಿಸಿ ಗೌರವಯುತವಾಗಿ ಬದುಕುವುದನ್ನು ಕೆಲವರು ಸಹಿಸಿಕೊಳ್ಳುತ್ತಿಲ್ಲ ಎಂದು ಟೀಕಿಸಿದರು.

ಹೋರಾಟಗಾರ ಮಾವಳ್ಳಿ ಶಂಕರ ಮಾತನಾಡಿ, ಗೌರಿ ಲಂಕೇಶ್, ಎಂ.ಎಂ. ಕಲಬುರ್ಗಿ, ಗೋವಿಂದ ಪನ್ಸಾರೆ ಸೇರಿದಂತೆ ವಿಚಾರವಾದಿಗಳ ಹತ್ಯೆಗಳ ಹಿಂದೆ ಯಾರು ಇದ್ದಾರೆ ಎಂಬುದನ್ನು ಸಮಾಜ ಅರ್ಥಮಾಡಿಕೊಳ್ಳಬೇಕು. ಇಂದಿನ ಯುವಕರು ಹೊಸ ಭಾರತ ನಿರ್ಮಾಣಕ್ಕೆ ಮುಂದಾಗಬೇಕು. ಅಂಬೇಡ್ಕರ್ ಅವರು ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವಕ್ಕೆ ಜ್ಞಾನವನ್ನು ನೀಡಿದ ಮಹಾನ್ ಚಿಂತಕರಾಗಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ, ಶಾಸಕ ರಾಜಾ ವೇಣುಗೋಪಾಲ ನಾಯಕ, ಕಾಡಾ (ಭೀಮರಾಯನಗುಡಿ) ಅಧ್ಯಕ್ಷ ಬಾಬು ಹೊನ್ನಾ ನಾಯಕ, ಹೋರಾಟಗಾರರಾದ ಡಿ.ಜಿ. ಸಾಗರ, ಜಿಲ್ಲಾಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ್, ಸಹಾಯಕ ಆಯುಕ್ತ ಶ್ರೀಧರ ಗೋಟೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಯಾದಗಿರಿ ನಗರಸಭೆ ಅಧ್ಯಕ್ಷ ಬಾಬುರಾವ್ ಕಾಡ್ಲೂರ, ಡಾ. ಮಲ್ಲಪ್ಪ ಹತ್ತಿಕುಣಿ, ಮರೆಪ್ಪ ಕಣಜಿ, ಶರಣಪ್ಪ, ಶಿವರಾಯ ನಾಟೇಕಾರ್, ಭೀಮರಾಯ, ಶರಣಪ್ಪ ಮರುಳಸಿದ್ದಪ್ಪ,ಮರೆಪ್ಪ ಚಟ್ಟೇರಕರ್, ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

SurpurCaraccident
share
ವಾರ್ತಾಭಾರತಿ
ವಾರ್ತಾಭಾರತಿ
Next Story
X