Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ: ಭಾರತ ಸೇವಾದಳದಿಂದ...

ಯಾದಗಿರಿ: ಭಾರತ ಸೇವಾದಳದಿಂದ ಉಪನ್ಯಾಸಕರಿಗೆ ರಾಷ್ಟ್ರಧ್ವಜ ಮಾಹಿತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ12 Aug 2025 10:38 PM IST
share
ಯಾದಗಿರಿ: ಭಾರತ ಸೇವಾದಳದಿಂದ ಉಪನ್ಯಾಸಕರಿಗೆ ರಾಷ್ಟ್ರಧ್ವಜ ಮಾಹಿತಿ ಕಾರ್ಯಾಗಾರ

ಪಿಯುಸಿ ಪಲಿತಾಂಶ ಸುದಾರಣೆಗೆ ಶ್ರಮಿಸಿ-ಪವಾರ್

ಯಾದಗಿರಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆ ಹಿಂದುಳಿದಿದೆ. ಮುಂದಿನ ಸಾಲಿನಲ್ಲಿ ಹೆಚ್ಚಿನ ಸ್ಥಾನಕ್ಕೆ ಏರಲು ಹಾಗೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪ್ರತಿಯೊಬ್ಬ ಉಪನ್ಯಾಸಕರೂ ಶ್ರಮಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಂಡಿತ್ ಪವಾರ ಹೇಳಿದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ, ಭಾರತ ಸೇವಾದಳ ಜಿಲ್ಲಾ ಸಮಿತಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ (ಯಾದಗಿರಿ) ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜು ಉಪನ್ಯಾಸಕರಿಗೆ ಜಿಲ್ಲಾ ಮಟ್ಟದ ಭಾರತ ಸೇವಾದಳ ಮತ್ತು ರಾಷ್ಟ್ರಧ್ವಜ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಫಲಿತಾಂಶ ಸುಧಾರಣೆಗೆ ಉಪನ್ಯಾಸಕರ ಪ್ರಯತ್ನ ಬದ್ಧತೆಯಿಂದ ಕೂಡಿರಬೇಕು, ಕೆಲವರು ಕರ್ತವ್ಯದಲ್ಲಿ ತೋರುವ ನಿರ್ಲಕ್ಷವೇ ಫಲಿತಾಂಶ ಕುಸಿತಕ್ಕೆ ಕಾರಣ. ಉಪನ್ಯಾಸಕರು ಬದ್ಧತೆಯಿಂದ ಕಾರ್ಯ ನಿರ್ವಹಿಸಿದಲ್ಲಿ ಯಾದಗಿರಿ ಟಾಪ್ ಜಿಲ್ಲೆಗಳಿಗೆ ಸೆಡ್ಡು ಹೊಡೆಯುವ ಸಾಧನೆ ಮಾಡಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದುವರೆದು, ಪ್ರತಿ ನಾಗರಿಕನು ರಾಷ್ಟ್ರಧ್ವಜದ ಗೌರವವನ್ನು ಕಾಪಾಡಬೇಕು. ರಾಷ್ಟ್ರದ ಐದು ಚಿನ್ಹೆಗಳ ಅರ್ಥವನ್ನು ತಿಳಿದುಕೊಳ್ಳುವುದು ನಮ್ಮ ಕರ್ತವ್ಯ. ಶಿಸ್ತು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ನಾವು ನಿಜವಾದ ಸೇವಾದಳದ ಆದರ್ಶಗಳನ್ನು ಪಾಲಿಸಬಹುದು ಎಂದು ಹೇಳಿದರು. ಇದೇ ವೇಳೆ ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಐಎಸ್‍ಐ ಮಾರ್ಕ್ ಹೊಂದಿರುವ ರಾಷ್ಟ್ರಧ್ವಜವನ್ನು ಬಳಸುವಂತೆ ಕರೆ ನೀಡಿದರು.

ಕಾರ್ಯಕ್ರಮವನ್ನು ಭಾರತ ಸೇವಾದಳ ರಾಜ್ಯ ಉಪಾಧ್ಯಕ್ಷರಾದ ಚೆನ್ನಾರೆಡ್ಡಿಗೌಡ ಬಿಳ್ಹಾರ್ ಹಾಗು ಅಧ್ಯಕ್ಷತೆ ವಹಿಸಿದ್ದ ಸಿದ್ರಾಮರೆಡ್ಡಿ ಕೌಳೂರು ರವರು ರಾಷ್ಟ್ರಧ್ವಜ ಅರಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಳಿಕ ಭಾರತ ಸೇವಾದಳದ ಯಾದಗಿರಿ ಜಿಲ್ಲಾ ಸಂಘಟಿಕರಾದ ಸೈಯದ್ ಕಮರುದ್ದೀನ್ ಅವರು ಉಪನ್ಯಾಸಕರಿಗೆ ರಾಷ್ಟ್ರಧ್ವಜ ಕಟ್ಟುವ ಪ್ರಾಯೋಗಿಕ ತರಬೇತಿ ನೀಡಿ, ಧ್ವಜದ ಬಣ್ಣಗಳ ಅರ್ಥ, ಧ್ವಜಾರೋಹಣದ ನಿಯಮಗಳು ಹಾಗೂ ಸೇವಾದಳದ ಚಟುವಟಿಕೆಗಳ ಬಗ್ಗೆ ತಿಳಿಸಿದರು.

ಭಾರತ ಸೇವಾ ದಳದ ವಿಭಾಗ ಸಂಘಟಿಕರಾದ ವಿದ್ಯಾಸಾಗರ ಚಿಣಮಗೇರಿ ಪ್ರಾಸ್ತಾವಿಸಿದರು.ಜಿಲ್ಲಾ ಸಂಘಟಿಕರಾದ ಸೈಯದ್ ಕಮರುದ್ದೀನ್ ನಿರೂಪಿಸಿದರು. ಕಲಬುರಗಿ ಭಾರತ ಸೇವಾದಳ ದ ಜಿಲ್ಲಾ ಸಂಘಟಿಕರಾದ ಚಂದ್ರಶೇಖರ ಜಮಾದರ ವಂದಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ ವೈದ್ಯ, ಸರಕಾರಿ ಪದವಿ ಪೂರ್ವ ಕಾಲೇಜು ಬಾಲಕೀಯರ ಪ್ರಾಂಶುಪಾಲರಾದ ಬಿಸಲಪ್ಪ ಕಟ್ಟಿಮನಿ, ಲಕ್ಷ್ಮಣ ರೆಡ್ಡಿ, ವಿರೂಪಾಕ್ಷಯ್ಯ ದಂಡಿಗಿಮಠ, ಸೇರಿದಂತೆ ವಿವಿಧ ಕಾಲೇಜಿನ ಉಪನ್ಯಾಸಕರು ಹಾಗೂ ಬಾಲಕೀಯರು ಸೇರಿದಂತೆ ಇನ್ನಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X