Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ: ಜಿಲ್ಲಾ ಮಟ್ಟದ ಪತ್ರಿಕಾ...

ಯಾದಗಿರಿ: ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ

ಪತ್ರಕರ್ತರು ಧ್ವನಿ ಇಲ್ಲದವರ ಪರ ನಿಲ್ಲಲಿ: ಲಲಿತಾ ಅನಪೂರ

ವಾರ್ತಾಭಾರತಿವಾರ್ತಾಭಾರತಿ26 July 2025 5:28 PM IST
share
ಯಾದಗಿರಿ: ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ

ಯಾದಗಿರಿ: ಪತ್ರಿಕೋದ್ಯಮ ಸಮಾಜದ 4ನೇ ಅಂಗವಾಗಿದೆ. ಸಮಾಜಮುಖಿ ಕಾರ್ಯಗಳಲ್ಲಿ ಪತ್ರರ್ತರ ಕೊಡುಗೆ ಅಪಾರವಾಗಿದೆ. ಧ್ವನಿಯಿಲ್ಲದವರ ಪರವಾಗಿ ಪತ್ರಕರ್ತರು ನಿಲ್ಲಬೇಕು ಎಂದು ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ ಹೇಳಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಜನರ ಸಮಸ್ಯೆಗಳ ಕುರಿತು ವರದಿ ಮಾಡುವ ಮೂಲಕ ಪತ್ರಕರ್ತರು ಸಮಾಜದ ಬೆನ್ನೆಲುಬಾಗಿದ್ದಾರೆ. ವಯುಕ್ತಿಕ ಜೀವನ ಬದಿಗಿಟ್ಟು ನಿತ್ಯ ಕೆಲಸ ಮಾಡುತ್ತಾರೆ. ಅವರ ಸೇವೆ ಅನನ್ಯವಾಗಿದೆ ಎಂದು ತಿಳಿಸಿದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಶರಣಪ್ಪ ಮಾನೇಗಾರ ಮಾತನಾಡಿ, ಸಮಾಜದ ತಪ್ಪುಗಳನ್ನು ಪತ್ರಿಕಾರಂಗ ತಿದ್ದುವ ಕೆಲಸ ಹಾಗೂ ಧ್ವನಿ ಇಲ್ಲದವರ ಪರವಾಗಿ ಪತ್ರಿಕಾರಂಗ ಕೆಲಸ ಮಾಡಬೇಕು. ಆದರೆ, ಪತ್ರಿಕೋದ್ಯಮ ಜಾತಿಯ ಆಧಾರದ ಮೇಲೆ ಧರ್ಮದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವುದು ಸರಿಯಲ್ಲ ಎಂದರು.

ತನಿಖಾ ಪತ್ರಿಕೋದ್ಯಮ ವ್ಯಾಪಕವಾಗಿಲ್ಲ. ನೈಜ ವರದಿಗಳನ್ನು ಬಿತ್ತರಿಸುವಂತಹ ಕೆಲಸ ಪತ್ರಕರ್ತರ ಮಾಡುವುದು ಇದೀಗ ತುಂಬ ಅಗತ್ಯವಿದೆ ಎಂದು ಹೇಳಿದರು.

ಡಿಡಿಯು ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಡಾ. ಭೀಮಣ್ಣ ಮೇಟಿ ಮಾತನಾಡಿ, ಪತ್ರಕರ್ತರು ಯಾವಾಗಲೂ ಸತ್ಯದ ಪರವಾಗಿ ಇರಬೇಕಿದೆ. ಇದರಿಂದಾಗಿ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಖ್ಯಾತ ಹಾಸ್ಯ ಕಲಾವಿದ ಬಸವರಾಜ ಮಾಮನಿ ಮಾತನಾಡಿ, ಪತ್ರಕರ್ತರು ಜನರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿವಂತಹ ವರದಿ ಮಾಡಿದಾಗ ನನಗೆ ಆ ಬಗ್ಗೆ ಹೆಮ್ಮೆ ಎನಿಸುತ್ತದೆ ಎಂದು ಹೇಳಿದರು.

ಸಂಘದ ಅಧ್ಯಕ್ಷತೆ ವಹಿಸಿದ್ದ ಮಲ್ಲಪ್ಪ ಸಂಕೀನ್ ಮಾತನಾಡಿ, ಶೀಘ್ರದಲ್ಲಿಯೇ ಜಿಲ್ಲಾ ಕೇಂದ್ರದ 36 ಜನ ಪತ್ರಕರ್ತರಿಗೆ ನಗರಸಭೆ ವತಿಯಿಂದ ನಿವೇಶನ ಮಂಜೂರಾಗಿ ಆಗಲಿವೆ. ಬಹುದಿನಗಳ ಬೇಡಿಕೆ ಈಡೇರಲಿದೆ ಎಂದರು.

ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಭವಾನಿಸಿಂಗ್ ಠಾಕೂರು ಮಾತನಾಡಿದರು. ಸಂಘದ ರಾಜ್ಯ ಪರಿಷತ್ತಿನ ಸದಸ್ಯ ರಾಘವೇಂದ್ರ ಕಾಮನಟಗಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ವಾರ್ತಾ ಇಲಾಖೆಯಲ್ಲಿ ವಾಹನ ಚಾಲಕರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಹೊಂದಿದ ಗುರುನಾಥ ಅವರಿಗೆ ಸಂಘದಿಂದ ಸನ್ಮಾನಿಸಲಾಯಿತು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಅಳ್ಳಳ್ಳಿ, ಜೆಡಿಎಸ್ ಯುವ ಮುಖಂಡ ಬಂದಪ್ಪ ಅರಳಿ, ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಕಲಾಲ ಇದ್ದರು. ಪತ್ರಕರ್ತ ನರಸಪ್ಪ ನಾರಾಯಣನೋರ್ ಸ್ವಾಗತಿಸಿದರು. ವಿಶಾಲ್ ದೋರನಹಳ್ಳಿ ವಂದಿಸಿದರು.

ಪ್ರಶಸ್ತಿ ಜೊತೆಗೆ ನಗದು ಪುರಸ್ಕಾರ:

ಪತ್ರಕರ್ತರಾದ ಬಾಲಪ್ಪ ಕುಪ್ಪಿಗೆ ದಿ. ನಿಂಗಯ್ಯ ಕರೇಗಾರ ಸ್ಮರಣಾರ್ಥ, ದಯಾನಂದ ಹಿರೇಮಠ ಅವರಿಗೆ ದಿ. ಗೌತಮ ಚಿಕಣಿ ಸ್ಮರಣಾರ್ಥ, ಮಹೇಶ್ ಗಣೇರ್ ಅವರಿಗೆ ದಿ. ರಾಧಾಬಾಯಿ ಮತ್ತು ಶ್ಯಾಮರಾವ್ ಜಹಗೀರದಾರ, ಡಾ. ಮಲ್ಲಿಕಾರ್ಜುನ ಆಶನಾಳ ಅವರಿಗೆ ದಿ. ಚಂದ್ರಭಟ್ಟ ಜೋಶಿ ಯಾಳಗಿ, ಮಲ್ಲಿಕಾರ್ಜುನ ಕಾಡಂನೋರ್ ದಿ. ವಾಮಾನಾಚಾರ್ಯ ಪುರೋಹಿತ ಸ್ಮರಣಾರ್ಥ, ಮಂಜುನಾಥ ಎಸ್ ಬಿರಾದಾರ ಅವರಿಗೆ ದಿ. ಬಸಪ್ಪ ಅಂಗಡಿ ಹಾಗೂ ದಿ. ಕಮಲಮ್ಮ ಅಂಗಡಿ ಸ್ಮರಣಾರ್ಥ, ಆನಂದ ಗೊರ್ಕಲ್ ಅವರಿಗೆ ದಿ. ಪದ್ಮಾವತಿ ಮತ್ತು ದಿ. ಗುರುಸ್ವಾಮಿ ಪೋಲಂಪಲ್ಲಿ ದೋರನಹಳ್ಳಿ ಸ್ಮರಣಾರ್ಥ, ಬಸವರಾಜ ಕರೇಗಾರ ಅವರಿಗೆ ದಿ. ನಾಗಪ್ಪ ಮಾಸ್ಟರ್ ಸೇಡಂ ಸ್ಮರಣಾರ್ಥ ಜಿಲ್ಲಾ ಮಟ್ಟದ ಪ್ರಶಸ್ತಿ ಜೊತೆಗೆ ತಲಾ 2 ಸಾವಿರ ರೂಪಾಯಿ ನಗದು ನೀಡಿ ಸನ್ಮಾನಿಸಲಾಯಿತು.

ಪತ್ರಕರ್ತ ಹನುಮಂತು ಪಿ. ಅವರಿಗೆ ದಿ. ಸಾಹು ಮುರಾರಿರಾವ್ ಭೀ. ಶಿಂಧೆ ಸ್ಮರಣಾರ್ಥ ಮತ್ತು ಪತ್ರಿಕಾ ವಿತರಕ ಸಾಹೇಬಗೌಡ ಕಲಾಲ್ ಅವರಿಗೆ ದಿ. ಭೀಮರಾಯ ಕಲಾಲ್ ಸ್ಮರಣಾರ್ಥ ಪ್ರಶಸ್ತಿ ಜೊತೆಗೆ ಉಭಯರಿಗೆ 5 ಸಾವಿರ ರೂ. ನಗದು ನೀಡಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X