ಯಾದಿಗಿರಿ| ಸಾರ್ವಜನಿಕರು ಆಶಾ ಕಿರಣ ಯೋಜನೆ ಸದುಪಯೋಗ ಪಡೆಯಿರಿ: ಆರ್.ವಿ. ನಾಯಕ

ಸುರಪುರ: ಸಾರ್ವಜನಿಕರ ಅನುಕೂಲಕ್ಕಾಗಿ ಸರಕಾರ ಆಶಾ ಕಿರಣ ಯೋಜನೆ ಜಾರಿಗೊಳಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಾಲೂಕ ಆರೋಗ್ಯಾಧಿಕಾರಿ ಡಾ.ಆರ್.ವಿ ನಾಯಕ ತಿಳಿಸಿದರು.
ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಆಶಾ ಕಿರಣ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹಾಗೂ ಆರೋಗ್ಯ ಸಚಿವರಾದ ದಿನೇಶ ಗುಂಡೂರಾವ್ ಅವರು ರಾಜ್ಯದಲ್ಲಿನ ಯಾವುದೇ ಜನರಿಗೆ ಮತ್ತು ಮಕ್ಕಳಿಗೆ ದೃಷ್ಟಿ ಸಮಸ್ಯೆ ಹಾಗೂ ಕಣ್ಣಿನ ಸಮಸ್ಯೆ ಉಂಟಾಗಬಾರದು ಎನ್ನುವ ಉದ್ದೇಶದಿಂದ ಈ ಯೋಜನೆಗೆ ಚಾಲನೆ ನೀಡಿದ್ದಾರೆ. ಆದ್ದರಿಂದ ಯಾರಿಗಾದರೂ ದೃಷ್ಟಿ ಸಮಸ್ಯೆ ಅಥವಾ ಕಣ್ಣಿನ ಸಮಸ್ಯೆ ಉಂಟಾದಲ್ಲಿ ಆಸ್ಪತ್ರೆಗೆ ಬಂದು ಉಚಿತ ತಪಾಸಣೆ ಮಾಡಿಸಿಕೊಳ್ಳುವುದು ಅಲ್ಲದೆ ಅಗತ್ಯವಿರುವವರು ಕನ್ನಡಕವನ್ನು ಪಡೆಯಬಹುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅನೇಕ ಜನರಿಗೆ ಕಣ್ಣಿನ ತಪಾಸಣೆ ಮಾಡಿ ನಂತರ ಕನ್ನಡಕವನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ನೇತ್ರ ತಜ್ಞ ಶಮೀಮ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು ಭಾಗವಹಿಸಿದ್ದರು.





