Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಮತದಾನದ ಹಕ್ಕಿನ ಜಾಗೃತಿಗೆ ಬೂತ್...

ಮತದಾನದ ಹಕ್ಕಿನ ಜಾಗೃತಿಗೆ ಬೂತ್ ಮಟ್ಟದಲ್ಲಿ ಅರಿವು ಮೂಡಿಸಿ: ಚಂದಪ್ಪ ಮುನಿಯಪ್ಪನ್ನೋರ್

ವಾರ್ತಾಭಾರತಿವಾರ್ತಾಭಾರತಿ3 July 2026 9:17 PM IST
share
ಮತದಾನದ ಹಕ್ಕಿನ ಜಾಗೃತಿಗೆ ಬೂತ್ ಮಟ್ಟದಲ್ಲಿ ಅರಿವು ಮೂಡಿಸಿ: ಚಂದಪ್ಪ ಮುನಿಯಪ್ಪನ್ನೋರ್

ಯಾದಗಿರಿ: ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಕುರಿತು ಜಿಲ್ಲೆಯ ಆರು ತಾಲೂಕುಗಳ ಸಂಘಟನೆಯ ಪದಾಧಿಕಾರಿಗಳು ಬೂತ್ ಮಟ್ಟದಲ್ಲಿ ಮತದಾರರಿಗೆ ಸಮಗ್ರ ಅರಿವು ಮೂಡಿಸುವ ಕಾರ್ಯ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಚಂದಪ್ಪ ಮುನಿಯಪ್ಪನ್ನೋರ್ ಸಲಹೆ ನೀಡಿದರು.

ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಚಾಲಕ ಡಾ. ಡಿ.ಜಿ. ಸಾಗರ ಹಾಗೂ ಜಿಲ್ಲಾ ಸಂಚಾಲಕ ಶಿವಪುತ್ರ ಜವಳಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಮನೆ ಮನೆಗೆ ತೆರಳಿ ಹೊಸ ಮತದಾರರ ಹೆಸರು ಸೇರ್ಪಡೆ, ಮತದಾರರ ಪಟ್ಟಿಯ ತಿದ್ದುಪಡಿ, ಅರ್ಜಿ ಭರ್ತಿ ಮಾಡುವ ವಿಧಾನ ಹಾಗೂ ಅಗತ್ಯ ದಾಖಲೆಗಳ ಕುರಿತು ಸಾರ್ವಜನಿಕರಿಗೆ ವಿವರವಾದ ಮಾಹಿತಿ ನೀಡಬೇಕು. ಎಸ್‌ಐಆರ್‌ಗೆ ಅಗತ್ಯ ದಾಖಲೆಗಳನ್ನು ಸಂಗ್ರಹಿಸುವುದು ಹಾಗೂ ಕುಟುಂಬದ ಮತದಾರರ ದಾಖಲೆಗಳನ್ನು ಬಿಎಲ್‌ಒಗಳಿಗೆ ಸಲ್ಲಿಸುವ ಕುರಿತು ಬೂತ್ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು ಎಂದು ಪದಾಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಸಮಿತಿ ಸಂಘಟನಾ ಸಂಚಾಲಕರಾಗಿ ಮಲ್ಲು ಪೂಜಾರಿ ಕುರುಕುಂದ ಹಾಗೂ ದೇವಿಂದ್ರಪ್ಪ ಹುಲಕಲ್ (ಜೆ) ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯ ಬಳಿಕ ಕದಂಬ ಫೌಂಡೇಶನ್ ಹಾಗೂ ಸುವರ್ಣ ಫೋಕಸ್ ಕನ್ನಡ ದಿನಪತ್ರಿಕೆ ವತಿಯಿಂದ ಗೋವಾ ರಾಜ್ಯದಲ್ಲಿ ಪ್ರದಾನವಾದ ಬುದ್ಧ ಶಾಂತಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಂದಪ್ಪ ಮುನಿಯಪ್ಪನ್ನೋರ್ ಅವರನ್ನು ಜಿಲ್ಲಾ ಸಂಚಾಲಕ ಶಿವಪುತ್ರ ಜವಳಿ ಹಾಗೂ ಸಂಘಟನೆಯ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಶಿವಲಿಂಗ ಅಸನಾಪುರ, ಮರೆಪ್ಪ ಕ್ರಾಂತಿ, ಎಂ. ಪಟೇಲ್, ತಾಯಪ್ಪ ಭಂಡಾರಿ, ಭೀಮಶಂಕರ ಗುಂಡಳ್ಳಿ, ಶರಬಣ್ಣ ದೋರನಹಳ್ಳಿ, ತಿಪ್ಪಣ್ಣ ಶಳ್ಳಿಗಿ, ರಂಗಸ್ವಾಮಿ ಗುರುಮಿಟಕಲ್, ರಮೇಶ್ ಬಾಚುಮಟ್ಟಿ, ವೆಂಕಟೇಶ್ ದೇವಪುರ, ಮಲ್ಲಿಕಾರ್ಜುನ ಉರಸಗುಂಡಗಿ, ಬಲಭೀಮ ಬೇವನಿಹಳ್ಳಿ, ಸಂತೋಷ್ ಗುಂಡಹಳ್ಳಿ, ವಾಸು ಕೋಗಿಲ್ಕರ್, ನಾಗರಾಜ ಕೋಡಮ್ಮನಹಳ್ಳಿ, ನಾಗರಾಜ ಹಳಿಸಾಗರ, ಸಿದ್ದಪ್ಪ ಕೋಡಮ್ಮನಹಳ್ಳಿ, ಚನ್ನಬಸ್ಸು, ಯಲ್ಲಪ್ಪ ಚಟ್ನಳ್ಳಿ, ಶರಣಪ್ಪ ಕುರುಕುಂದಿ, ಪರಶುರಾಮ್ ಚಲವಾದಿ, ಮಲ್ಲಪ್ಪ ಚಟ್ನಳ್ಳಿ, ಹೊನ್ನಪ್ಪ ಚಟ್ನಳ್ಳಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X