Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ: ಮಾ.8ರಂದು ರಾಷ್ಟ್ರೀಯ ಲೋಕ್...

ಯಾದಗಿರಿ: ಮಾ.8ರಂದು ರಾಷ್ಟ್ರೀಯ ಲೋಕ್ ಅದಾಲತ್

ರಾಜಿ ಸಂಧಾನದ ಮೂಲಕ ವ್ಯಾಜ್ಯಗಳ ಇತ್ಯರ್ಥಕ್ಕೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ20 Feb 2025 8:41 PM IST
share
ಯಾದಗಿರಿ: ಮಾ.8ರಂದು ರಾಷ್ಟ್ರೀಯ ಲೋಕ್ ಅದಾಲತ್

ಯಾದಗಿರಿ: ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಬರುವ ಮಾ. 8 ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮರಿಯಪ್ಪ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯಾಲಯದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿದ ಅವರು, ಅಂದು ರಾಜಿಯಾಗಬಲ್ಲ ಅಪರಾಧಿಕ, ಬ್ಯಾಂಕ್ ವಸೂಲಾತಿ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಪಟ್ಟ, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ, ವಿದ್ಯುತ್ ನಿಯಂತ್ರಣ ಆಯೋಗ, ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ, ಸಾಲ ವಸೂಲಾತಿ ನ್ಯಾಯಾಧಿಕರಣ, ಚೆಕ್ಕು ಅಮಾನ್ಯ, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣ, ಕಾರ್ಮಿಕ ವಿವಾದಗಳ, ಭೂಸ್ವಾಧೀನ, ವೇತನ ,ಭತ್ಯೆ,ಪಿಂಚಣಿ, ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೇ ಹಾಗೂ ವೈವಾಹಿಕ-ಕುಟುಂಬ ನ್ಯಾಯಾಲಯ ಪ್ರಕರಣಗಳು ಸೇರಿದಂತೇ 18 ನಮೂನೆಯ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಈ ಲೋಕ್ ಅದಾಲತ್ ನಲ್ಲಿ ಬಗೆಹರಿಸಿಕೊಳ್ಳಬಹುದೆಂದು ಅವರು ಹೇಳಿದರು.

ಈಗ ಜಿಲ್ಲೆಯ ಕೋರ್ಟ್ ಗಳಲ್ಲಿ‌ ಒಟ್ಟು 19,556 ಪ್ರಕರಣಗಳು ಇದ್ದು, ಈಗಾಗಲೇ ಲೋಕ್ ಅದಾಲತ್ ಗಾಗಿ 3820 ಪ್ರಕರಣಗಳು ರಾಜಿಯಾಗಬಹುದಾದ ಪ್ರಕರಣಗಳು ಎಂದು ಗುರುತಿಸಿದ್ದು, ಮಾ.7ರತನಕ ಇನ್ನೂ ಹೆಚ್ಚಿಗೆ ಅಂದರೇ 5000 ಪ್ರಕರಣಗಳು ಇಲ್ಲಿ ರಾಜಿ ಸಂಧಾನ ಮಾಡಲು ಯತ್ನಿಸಲಾಗುತ್ತಿದೆ.

ಇದಕ್ಕಾಗಿ ಈಗಾಗಲೇ ನಗರ ಸೇರಿದಂತೆ ಜಿಲ್ಲೆಯ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಕಸ ಎತ್ತುವ‌ ವಾಹನಗಳಲ್ಲಿನ ಧ್ವನಿ‌ಮುದ್ರಿತ ಆಡಿಯೋ ಮೂಲಕ ಜನರಲ್ಲಿ ಈ ಕುರಿತು ಪ್ರಚಾರ ಮಾಡಲಾಗುತ್ತಿದೆ. ಮೂರು ಕಡೆ ಬ್ಯಾನರ್ ಕಟ್ಟುವ ಮೂಲಕ ಜನರಿಗೆ ಈ ಬಗ್ಗೆ ತಿಳಿಸಲಾಗುತ್ತಿದೆ ಎಂದು ನ್ಯಾಯಾಧೀಶ ಮರಿಯಪ್ಪ ವಿವರಿಸಿದರು.

ಕಳೆದ ಡಿ.14ರಂದು ನಡೆದ ಲೋಕ್ ಅದಾಲತ್ ನಲ್ಲಿ 4626 ಪ್ರಕರಣಗಳು ರಾಜಿ ಸಂಧಾನ ಮಾಡಲಾಗಿತ್ತು. ಇದೊಂದು ಕಡಿಮೆ ಖರ್ಚಿನಲ್ಲಿ ಶೀಘ್ರ ತಿರ್ಮಾನಕ್ಕಾಗಿ ಇರುವ ವಿಶೇಷ ಅವಕಾಶವಿದ್ದು, ಅರ್ಹರು ಇದರ ಉಪಯೋಗ ಪಡೆದುಕೊಳ್ಳಬೇಕೆಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X