Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ ಜಿಲ್ಲೆಯಲ್ಲಿ ಅ.24ರಿಂದ ವಿವಿಧ...

ಯಾದಗಿರಿ ಜಿಲ್ಲೆಯಲ್ಲಿ ಅ.24ರಿಂದ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ: ಡಿಸಿ ರಾಹುಲ್ ಪಾಂಡ್ವೆ

ವಾರ್ತಾಭಾರತಿವಾರ್ತಾಭಾರತಿ16 Oct 2026 7:42 PM IST
share
ಯಾದಗಿರಿ ಜಿಲ್ಲೆಯಲ್ಲಿ ಅ.24ರಿಂದ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ: ಡಿಸಿ ರಾಹುಲ್ ಪಾಂಡ್ವೆ

ಯಾದಗಿರಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಅಕ್ಟೋಬರ್ 24ರಂದು ನಡೆಯುವ ಭೂಮಾಪಕರ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ, ಅಕ್ಟೋಬರ್ 25ರಂದು ನಡೆಯುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಪರೀಕ್ಷೆ, ಅಕ್ಟೋಬರ್ 26ರಂದು ನಡೆಯುವ ನರ್ಸಿಂಗ್ ಮತ್ತು ಫಾರ್ಮಸಿ ಅಧಿಕಾರಿ ಹುದ್ದೆಗಳ ಪರೀಕ್ಷೆ ಹಾಗೂ ಅಕ್ಟೋಬರ್ 27ರಂದು ನಡೆಯುವ ಶಿಕ್ಷಕರ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ವಿವಿಧ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳ ಪೂರ್ವಭಾವಿ ಸಿದ್ಧತೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷೆಗಳ ಸಂದರ್ಭದಲ್ಲಿ ಯಾವುದೇ ಲೋಪಗಳಿಗೆ ಅವಕಾಶ ನೀಡದೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಗಳ ಅನ್ವಯ ವ್ಯವಸ್ಥಿತವಾಗಿ ಹಾಗೂ ಶಿಸ್ತುಬದ್ಧವಾಗಿ ಪರೀಕ್ಷೆಗಳನ್ನು ನಡೆಸಬೇಕು. ಬೆಳಿಗ್ಗೆ ಮತ್ತು ಮಧ್ಯಾಹ್ನದ ಅವಧಿಗಳಲ್ಲಿ ಪರೀಕ್ಷೆಗಳು ನಡೆಯಲಿರುವುದರಿಂದ ಸಮಯಪಾಲನೆಗೆ ಆದ್ಯತೆ ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಭೂಮಾಪಕರ ಹುದ್ದೆಗಳ ಪರೀಕ್ಷೆಗಾಗಿ ಆರು ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಅಕ್ಟೋಬರ್ 24ರಂದು ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಪರೀಕ್ಷೆ ನಡೆಯಲಿದೆ. ಒಟ್ಟು 2,561 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಪರೀಕ್ಷೆ ಅಕ್ಟೋಬರ್ 25ರಂದು ನಡೆಯಲಿದ್ದು, ಇದಕ್ಕಾಗಿ 25 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಒಟ್ಟು 9,626 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ಎರಡು ಅವಧಿಗಳಲ್ಲಿ ಪರೀಕ್ಷೆ ನಡೆಯಲಿದೆ.

ಅಕ್ಟೋಬರ್ 26ರಂದು ನರ್ಸಿಂಗ್ ಮತ್ತು ಫಾರ್ಮಸಿ ಅಧಿಕಾರಿ ಹುದ್ದೆಗಳ ಪರೀಕ್ಷೆ ನಡೆಯಲಿದ್ದು, ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ಪರೀಕ್ಷೆ ನಡೆಯಲಿದೆ. ಮೂರು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1,218 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಅಕ್ಟೋಬರ್ 27ರಂದು ವಸತಿ ಶಾಲೆಗಳ ಶಿಕ್ಷಕರ ಹಾಗೂ ದ್ವಿತೀಯ ದರ್ಜೆ ಸಹಾಯಕರ (ದ್ವಿ.ದ.ಸ.) ಹುದ್ದೆಗಳ ಪರೀಕ್ಷೆ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ನಡೆಯಲಿದೆ. ಒಂದು ಪರೀಕ್ಷಾ ಕೇಂದ್ರದಲ್ಲಿ ನಡೆಯುವ ಈ ಪರೀಕ್ಷೆಗೆ ಒಟ್ಟು 535 ಅಭ್ಯರ್ಥಿಗಳು ಹಾಜರಾಗಲಿದ್ದಾರೆ.

ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಉಪಮುಖ್ಯ ಅಧೀಕ್ಷಕರು ಹಾಗೂ ಪ್ರಶ್ನೆಪತ್ರಿಕೆ ನಿರ್ವಹಣೆಗೆ ನಿಯೋಜಿಸಲಾದ ಸಿಬ್ಬಂದಿ ಯಾವುದೇ ಲೋಪಗಳಿಗೆ ಅವಕಾಶ ನೀಡದೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಗೌಪ್ಯ ಸಾಮಗ್ರಿಗಳನ್ನು ಸ್ವೀಕರಿಸುವಾಗ ಹಾಗೂ ಹಸ್ತಾಂತರಿಸುವಾಗ ಎಚ್ಚರಿಕೆ ವಹಿಸಬೇಕು. ಪರೀಕ್ಷಾ ಕೊಠಡಿಗಳಲ್ಲಿ ಆಸನ ವ್ಯವಸ್ಥೆ ಸಮರ್ಪಕವಾಗಿರಬೇಕು ಮತ್ತು ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಕೊಠಡಿ ಮೇಲ್ವಿಚಾರಕರು ಎಲ್ಲ ಮಾರ್ಗಸೂಚಿಗಳನ್ನು ತಿಳಿದುಕೊಂಡು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕೈಗಡಿಯಾರ, ಕ್ಯಾಲ್ಕುಲೇಟರ್, ಬ್ಲೂಟೂತ್ ಸಾಧನ, ಮೊಬೈಲ್ ಫೋನ್, ಪೆನ್‌ಡ್ರೈವ್, ಇಯರ್‌ಫೋನ್, ಮೈಕ್ರೊಫೋನ್ ಸೇರಿದಂತೆ ನಿಷೇಧಿತ ಸಾಧನಗಳ ಬಳಕೆಯನ್ನು ತಡೆಯಲು ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ತಿಳಿಸಿದರು.

ಇತ್ತೀಚೆಗೆ ಪೊಲೀಸ್ ಇಲಾಖೆಯ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿದ್ದಕ್ಕಾಗಿ ಸಂಬಂಧಿಸಿದ ಅಧಿಕಾರಿಗಳನ್ನು ಅಭಿನಂದಿಸಿದ ಅವರು, ಮುಂಬರುವ ಪರೀಕ್ಷೆಗಳನ್ನೂ ಅಚ್ಚುಕಟ್ಟಾಗಿ ನಡೆಸುವಂತೆ ಸೂಚಿಸಿದರು.

ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗುವುದು ಎಂದು ತಿಳಿಸಿದರು. ಪರೀಕ್ಷೆಗೂ ಮುನ್ನ ಎಲ್ಲ ಕೇಂದ್ರಗಳ ಸಿಸಿಟಿವಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಹಾಗೂ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುದೀಪ್ ಮಾತನಾಡಿ, ಓಎಂಆರ್ ಉತ್ತರ ಪತ್ರಿಕೆಗಳು ಮತ್ತು ಪ್ರಶ್ನೆಪತ್ರಿಕೆಗಳ ನಿರ್ವಹಣೆ ಹಾಗೂ ಅಭ್ಯರ್ಥಿಗಳ ಪ್ರವೇಶಪತ್ರಗಳ ಪರಿಶೀಲನೆ ಕುರಿತು ಮೇಲ್ವಿಚಾರಕರಿಗೆ ಸೂಚನೆ ನೀಡಲಾಗಿದೆ ಎಂದರು. ಪರೀಕ್ಷಾ ಕೇಂದ್ರಗಳಲ್ಲಿ ಆಹಾರ ಪದಾರ್ಥಗಳು, ನೀರಿನ ಬಾಟಲಿಗಳು ಹಾಗೂ ಶೂಗಳ ಬಳಕೆಗೆ ನಿಷೇಧವಿದೆ. ಅಭ್ಯರ್ಥಿಗಳ ವಿವರಗಳನ್ನು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಪಡೆಯುವ ವ್ಯವಸ್ಥೆ ಮಾಡಲಾಗಿದೆ. ವಸ್ತ್ರಸಂಹಿತೆ ಪಾಲನೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆಯ ಗೌಪ್ಯ ಸಾಮಗ್ರಿಗಳ ಬಂಡಲ್‌ಗಳನ್ನು ಸಾಗಿಸಲು ತ್ರಿಸದಸ್ಯ ಸಮಿತಿ ರಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್‌ಗಳ ಅಳವಡಿಕೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸಭೆಯಲ್ಲಿ ಮಾಸ್ಟರ್ ಟ್ರೈನರ್‌ಗಳಾದ ಮಲ್ಲನಗೌಡ ಮತ್ತು ಶಿವಾನಂದ ಸೇರಿದಂತೆ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

YadgirRecruitment exams
share
ವಾರ್ತಾಭಾರತಿ
ವಾರ್ತಾಭಾರತಿ
Next Story
X