Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ನ.30ರವರೆಗೆ ಕಾಲುವೆಗಳಿಗೆ ನೀರು ಹರಿಸಿ :...

ನ.30ರವರೆಗೆ ಕಾಲುವೆಗಳಿಗೆ ನೀರು ಹರಿಸಿ : ಮಾಜಿ ಸಚಿವ ರಾಜುಗೌಡ ಆಗ್ರಹ

ರೈತರ ಸಮಸ್ಯೆ ನಿರ್ಲಕ್ಷಿಸಿದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ;ರೈತರ ಮೇಲಿನ ಪ್ರಕರಣ ಹಿಂಪಡೆಯಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ6 Nov 2026 10:17 PM IST
share
ನ.30ರವರೆಗೆ ಕಾಲುವೆಗಳಿಗೆ ನೀರು ಹರಿಸಿ : ಮಾಜಿ ಸಚಿವ ರಾಜುಗೌಡ ಆಗ್ರಹ

ಯಾದಗಿರಿ: ನಾರಾಯಣಪುರ ಜಲಾಶಯದ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ನವೆಂಬರ್ 30ರವರೆಗೆ ನಿರಂತರವಾಗಿ ನೀರು ಹರಿಸಬೇಕು. ರೈತರ ಬೆಳೆಗಳನ್ನು ಉಳಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ) ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಶುಕ್ರವಾರ ಹಮ್ಮಿಕೊಂಡಿದ್ದ ಯಾದಗಿರಿ ಬಂದ್ ಹಾಗೂ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರೈತರ ಹಿತಾಸಕ್ತಿ ಕಾಪಾಡುವಲ್ಲಿ ಸರ್ಕಾರ ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ರೈತರು ಬೆಳೆ ಉಳಿಸಿಕೊಳ್ಳಲು ನೀರಿಗಾಗಿ ಬೀದಿಗಿಳಿದು ಹೋರಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿರುವುದು ದುರದೃಷ್ಟಕರ. ಕೃಷ್ಣಾ ನದಿಯಲ್ಲಿ ನೀರಿದ್ದರೂ ಜಿಲ್ಲೆಯ ರೈತರಿಗೆ ನೀರು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತೆಲಂಗಾಣಕ್ಕೆ ನೀರು ಬಿಡಲು ಸಾಧ್ಯವಾದರೆ ನಮ್ಮ ರೈತರಿಗೆ ಏಕೆ ನೀರು ನೀಡಲು ಸಾಧ್ಯವಿಲ್ಲ ಎಂದು ಪ್ರಶ್ನಿಸಿದ ರಾಜುಗೌಡ, ಕುಡಿಯುವ ನೀರಿನ ಉದ್ದೇಶದಿಂದ ತೆಲಂಗಾಣಕ್ಕೆ ನೀರು ಹರಿಸಲಾಗಿದೆ ಎಂಬ ಸಮರ್ಥನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದರು. ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ರೈತರ ಹಿತದೃಷ್ಟಿಯಿಂದ ಮರುಪರಿಶೀಲಿಸಲು ಅವಕಾಶವಿದೆ. ಈ ಹಿಂದೆ ರೈತರ ಅನುಕೂಲಕ್ಕಾಗಿ ಇಂತಹ ನಿರ್ಧಾರಗಳನ್ನು ಬದಲಾಯಿಸಿ ನೀರು ಹರಿಸಿದ ಉದಾಹರಣೆಗಳಿವೆ. ಆದರೆ, ಪ್ರಸ್ತುತ ಸರ್ಕಾರ ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಟೀಕಿಸಿದರು.

ಅಕ್ಟೋಬರ್ 15ರಂದು ನಡೆದ ಕೃಷ್ಣಾ ಮೇಲ್ದಂಡೆ ಯೋಜನೆಯ 2026-27ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆಯ ದಾಖಲೆಗಳನ್ನು ಪ್ರದರ್ಶಿಸಿದ ಅವರು, ವಿವಿಧ ಜಿಲ್ಲೆಗಳಿಗೆ ಕುಡಿಯುವ ನೀರು, ಕೆರೆ ತುಂಬಿಸುವ ಯೋಜನೆ ಹಾಗೂ ಇತರ ಉದ್ದೇಶಗಳಿಗೆ ನೀರು ಕಾಯ್ದಿರಿಸಿರುವ ಕುರಿತು ವಿವರಿಸಿದರು. ವಿಜಯಪುರ ಮತ್ತು ಬಾಗಲಕೋಟೆ ಭಾಗಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಕಾಯ್ದಿರಿಸಲಾಗಿದೆ. ಯಾದಗಿರಿ ಜಿಲ್ಲೆಯ ರೈತರ ಬೆಳೆಗಳ ರಕ್ಷಣೆಗೆ ಅಗತ್ಯವಿರುವ ನೀರನ್ನು ಒದಗಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ವಿಜಯಪುರ ಹಾಗೂ ಬಾಗಲಕೋಟೆ ಭಾಗದ ಜನಪ್ರತಿನಿಧಿಗಳು ತಮ್ಮ ಪ್ರದೇಶದ ನೀರಿನ ಹಕ್ಕಿಗಾಗಿ ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಅದೇ ಮಾದರಿಯಲ್ಲಿ ಯಾದಗಿರಿ, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಗಳ ಜನಪ್ರತಿನಿಧಿಗಳು ರೈತರ ಹಿತಕ್ಕಾಗಿ ಒಗ್ಗಟ್ಟಾಗಬೇಕು. ಸಚಿವ ಎಂ.ಬಿ. ಪಾಟೀಲರು ತಮ್ಮ ಭಾಗಕ್ಕೆ ಕಾಯ್ದಿರಿಸಿರುವ ನೀರಿನಲ್ಲಿ ಸಾಧ್ಯವಾದಷ್ಟು ಪ್ರಮಾಣವನ್ನು ನಮ್ಮ ಭಾಗದ ರೈತರಿಗೂ ಒದಗಿಸಲು ಸಹಕರಿಸಬೇಕು. ಕೇವಲ ನಾಲ್ಕರಿಂದ ಐದು ಟಿಎಂಸಿ ನೀರು ದೊರೆತರೂ ಜಿಲ್ಲೆಯ ಮೆಣಸಿನಕಾಯಿ ಸೇರಿದಂತೆ ಹಲವು ಬೆಳೆಗಳನ್ನು ಉಳಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಆಡಳಿತ ಪಕ್ಷದ ಜನಪ್ರತಿನಿಧಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ರೈತರ ಸಮಸ್ಯೆ ಕುರಿತು ಕೇವಲ ಸಭೆ ನಡೆಸುವುದು, ಮನವಿ ಪತ್ರ ಸಲ್ಲಿಸುವುದರಿಂದ ಪ್ರಯೋಜನವಿಲ್ಲ. ಸರ್ಕಾರದ ಮೇಲೆ ಒತ್ತಡ ಹೇರಿ ನವೆಂಬರ್ 30ರವರೆಗೆ ಕಾಲುವೆಗಳಿಗೆ ನೀರು ಹರಿಸುವ ವ್ಯವಸ್ಥೆ ಮಾಡಬೇಕು. ರೈತರಿಗೆ ನೀರು ಕೊಡಿಸಿದರೆ ನಾವೇ ಎಲ್ಲ ಸಂಘಟನೆಗಳೊಂದಿಗೆ ಬಂದು ಜನಪ್ರತಿನಿಧಿಗಳಿಗೆ ಹಾರ ಹಾಕಿ ಅಭಿನಂದಿಸುತ್ತೇವೆ. ಆದರೆ, ರೈತರ ಸಂಕಷ್ಟವನ್ನು ನಿರ್ಲಕ್ಷಿಸಿದರೆ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಎಚ್ಚರಿಸಿದರು.

ರೈತರ ಮೇಲಿನ ಎಫ್‌ಐಆರ್ ಹಿಂಪಡೆಯಿರಿ :

ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಸುಮಾರು 30 ರೈತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂಬ ಮಾಹಿತಿ ಬಂದಿದೆ. ಬೆಳೆಗಳು ಒಣಗುತ್ತಿರುವ ನೋವಿನಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ಅಂತಹ ರೈತರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸುವುದು ಸರಿಯಲ್ಲ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕೂಡಲೇ ಪ್ರಕರಣಗಳನ್ನು ಹಿಂಪಡೆಯಲು ಕ್ರಮ ಕೈಗೊಳ್ಳಬೇಕು. ರೈತರ ವಿರುದ್ಧ ಪ್ರಕರಣಗಳನ್ನು ಮುಂದುವರಿಸಿದರೆ ತಾವೇ ಮೊದಲು ಬಂಧನಕ್ಕೆ ಒಳಗಾಗಲು ಸಿದ್ಧವಿದ್ದು, ರೈತರೊಂದಿಗೆ ಜೈಲ್ ಭರೋ ಚಳವಳಿ ನಡೆಸುವುದಾಗಿ ಎಚ್ಚರಿಸಿದರು.

ಹರಿಕೇರಿ ಕ್ರಾಸ್ ಬಳಿ ನೀರಿಗಾಗಿ ರೈತರು ನಡೆಸಿದ ಪ್ರತಿಭಟನೆಯನ್ನು ಉಲ್ಲೇಖಿಸಿದ ಅವರು, ಬೆಳೆಗಳು ಒಣಗುತ್ತಿರುವುದರಿಂದ ಕಂಗಾಲಾದ ರೈತರು ಮುಳ್ಳಿನ ಮೇಲೆ ಕುಳಿತು ಪ್ರತಿಭಟನೆ ನಡೆಸುವ ಪರಿಸ್ಥಿತಿ ಎದುರಾಗಿದೆ. ರೈತರ ನೋವನ್ನು ಕಂಡಾಗ ಸುಮ್ಮನಿರಲು ಸಾಧ್ಯವಿಲ್ಲ. ಅಧಿಕಾರದಲ್ಲಿರಲಿ, ಇಲ್ಲದಿರಲಿ ರೈತರ ಪರವಾಗಿ ಹೋರಾಟ ನಡೆಸುವುದು ತಮ್ಮ ಕರ್ತವ್ಯ. ರೈತರ ಹಿತಕ್ಕಾಗಿ ಜೈಲಿಗೆ ಹೋಗಲೂ ಸಿದ್ಧ ಎಂದು ಭಾವುಕರಾಗಿ ನುಡಿದರು.

ನವೆಂಬರ್ 12ರಂದು ಜಲಾಶಯದ ಬಳಿ ಮತ್ತೊಂದು ಹಂತದ ತೀವ್ರ ಹೋರಾಟ ನಡೆಸುವ ಕುರಿತು ಮಾತನಾಡಿದ ಅವರು, ಹೋರಾಟದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಜಲಾಶಯ ಅಥವಾ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಬಾರದು. ಜಲಾಶಯ ನಿರ್ಮಾಣವಾಗಿರುವುದು ಜನರ ಹಣದಿಂದ. ಅದನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ಹೋರಾಟ ಶಾಂತಿಯುತವಾಗಿರಬೇಕು. ಆದರೆ, ರೈತರ ಹಕ್ಕುಗಳ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಹೋರಾಟ ಯಾವುದೇ ಒಂದು ಪಕ್ಷದ ಅಥವಾ ವ್ಯಕ್ತಿಯ ಹೋರಾಟವಲ್ಲ. ಜಿಲ್ಲೆಯ ರೈತರ ಭವಿಷ್ಯಕ್ಕಾಗಿ ನಡೆಯುತ್ತಿರುವ ಹೋರಾಟವಾಗಿದೆ. ಇಂದು ಒಗ್ಗಟ್ಟಿನಿಂದ ಹೋರಾಡದಿದ್ದರೆ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಮತ್ತಷ್ಟು ಗಂಭೀರವಾಗಬಹುದು. ಆದ್ದರಿಂದ ಎಲ್ಲ ರಾಜಕೀಯ ಪಕ್ಷಗಳು, ರೈತ ಸಂಘಟನೆಗಳು ಹಾಗೂ ಸಾರ್ವಜನಿಕರು ಪಕ್ಷಾತೀತವಾಗಿ ಒಗ್ಗಟ್ಟಾಗಬೇಕು ಎಂದು ಕರೆ ನೀಡಿದರು.

ಬಂದ್‌ಗೆ ಬೆಂಬಲ ನೀಡಿದ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ದಲಿತ ಸಂಘಟನೆಗಳು, ಹಿತರಕ್ಷಣಾ ಸಮಿತಿಗಳು, ನ್ಯಾಯವಾದಿಗಳು, ವರ್ತಕರು, ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಗೆ ರಾಜುಗೌಡ ಕೃತಜ್ಞತೆ ಸಲ್ಲಿಸಿದರು. ರೈತರ ಹಿತಕ್ಕಾಗಿ ಯಾವುದೇ ಸಂಘಟನೆ ಹೋರಾಟಕ್ಕೆ ಕರೆ ನೀಡಿದರೂ ತಮ್ಮ ಬೆಂಬಲ ಸದಾ ಇರಲಿದೆ ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪ ವಿಭೂತಿಹಳ್ಳಿ, ಮಾಜಿ ಜಿಲ್ಲಾಧ್ಯಕ್ಷ ಅಮೀನರೆಡ್ಡಿ ಯಾಳಗಿ, ಬಿಜೆಪಿ ಮುಖಂಡರಾದ ರಾಚಣ್ಣಗೌಡ ಮುದ್ದಾಳ, ಲಲಿತಾ ಅನಪುರ, ದೇವೇಂದ್ರನಾಥ ನಾದ, ಮಹೇಶರೆಡ್ಡಿ ಮುದ್ದಾಳ, ಕರವೇ ಅಧ್ಯಕ್ಷ ಟಿ.ಎನ್. ಭೀಮುನಾಯಕ, ಶರಣು ಗದ್ದುಗೆ, ಮಲ್ಲಿಕಾರ್ಜುನ ಜಲ್ಲಪ್ಪಗೊಳ, ಹನುಮಗೌಡ ಬೀರನಕಲ್, ಉಮೇಶ ಮುದ್ದಾಳ, ಭೀಮಾಶಂಕರ ಯರಗೋಳ, ನಾಗರತ್ನ ಕುಪ್ಪಿ, ಶ್ರೀಧರ ಸಾಹುಕಾರ, ರುದ್ರಾಂಭಿಕಾ ಪಾಟೀಲ್, ಸರ್ವೇಶ್ವರ ಮುತ್ಯಾ, ವಿಜಯಕುಮಾರ, ಯಲ್ಲಪ್ಪ ಪೂಜಾರಿ, ಜನಾರ್ಧನ ರಾಠೋಡ್, ಲಕ್ಷ್ಮಿ ಪುತ್ರ ಪಾಟೀಲ್, ವಿಲಾಸ ಪಾಟೀಲ, ಪರಶುರಾಮ ಕುರಕುಂದಾ, ಸುರೇಶ ಚವ್ಹಾಣ, ವಿಶ್ವಾರಾಧ್ಯ ದಿಮ್ಮೆ, ನಗರಸಭೆ ಮಾಜಿ ಸದಸ್ಯ ಹಣಮಂತ ಇಟಗಿ, ಸುರೇಶ ಅಂಬಿಗೇರ, ಗೋಪಾಲ ದಾಸನಕೇರಿ, ಮಲ್ಲು ಮಾಳಿಕೇರಿ, ಸ್ವಾಮಿದೇವ ದಾಸನಕೇರಿ, ಮರಪ್ಪ ನಾಯಕ, ತೇಜುರಾಜ್ ರಾಠೋಡ್, ವಿರುಪಾಕ್ಷಯ್ಯ ಸ್ವಾಮಿ ಹಾಗೂ ಚಂದ್ರು ಕಡೆಚೂರ ಇದ್ದರು.

ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ಡಿಸಿ, ಎಸ್‌ಪಿ :

ಶುಕ್ರವಾರ ಮಧ್ಯಾಹ್ನ 2.30ರ ಸುಮಾರಿಗೆ ಬಂದ್‌ನ ಬಹಿರಂಗ ಸಭೆ ನಡೆಯುತ್ತಿದ್ದ ಸ್ಥಳಕ್ಕೆ ಜಿಲ್ಲಾಧಿಕಾರಿ ರಾಹುಲ್ ಪಾಂಡೈ ಹಾಗೂ ಎಸ್‌ಪಿ ಪೃಥ್ವಿಕ್ ಶಂಕರ್ ಆಗಮಿಸಿ ವೇದಿಕೆಯ ಮೇಲೆ ಹೋರಾಟಗಾರರಿಂದ ಮನವಿ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ಹೋರಾಟಗಾರರ ಬೇಡಿಕೆಗಳ ಮನವಿಯನ್ನು ಕೂಡಲೇ ಸರ್ಕಾರಕ್ಕೆ ಕಳುಹಿಸಲಾಗುವುದು. ಇಲ್ಲಿನ ರೈತರ ಸ್ಥಿತಿ ಹಾಗೂ ಜಲಾಶಯದಲ್ಲಿನ ನೀರಿನ ಲಭ್ಯತೆ ಕುರಿತು ಸರ್ಕಾರಕ್ಕೆ ವಿವರಿಸಲಾಗುವುದು ಎಂದು ತಿಳಿಸಿದರು.

Tags

Raju Gowdacanalswater
share
ವಾರ್ತಾಭಾರತಿ
ವಾರ್ತಾಭಾರತಿ
Next Story
X