Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. S I R ವೇಳಾಪಟ್ಟಿ ಪ್ರಕಟ; ಅಗತ್ಯ ಸಹಕಾರ...

S I R ವೇಳಾಪಟ್ಟಿ ಪ್ರಕಟ; ಅಗತ್ಯ ಸಹಕಾರ ನೀಡಲು ಮತದಾರರಿಗೆ ಜಿಲ್ಲಾಧಿಕಾರಿಗಳಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ9 Jun 2026 6:59 PM IST
share
S I R ವೇಳಾಪಟ್ಟಿ ಪ್ರಕಟ; ಅಗತ್ಯ ಸಹಕಾರ ನೀಡಲು ಮತದಾರರಿಗೆ ಜಿಲ್ಲಾಧಿಕಾರಿಗಳಿಂದ ಮನವಿ

ಯಾದಗಿರಿ: ಭಾರತದ ಚುನಾವಣಾ ಆಯೋಗವು ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ವೇಳಾಪಟ್ಟಿ ಪ್ರಕಟಿಸಿದ್ದು, ಜೂ. 20ರಿಂದ ಆರಂಭವಾಗಲಿದೆ. ಪಾರದರ್ಶಕ ಮತದಾರರ ಪಟ್ಟಿ ತಯಾರಿಕೆಗೆ ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಾಂಡ್ವೆ ರಾಹುಲ್ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಂಡ್ವೆ ರಾಹುಲ್, ಈ ವೇಳಾಪಟ್ಟಿಯಂತೆ ನಮೂನೆ ಮುದ್ರಣ ಹಾಗೂ ತರಬೇತಿಯು ಜೂನ್ 20 ರಿಂದ ಜೂನ್ 29ರವರೆಗೆ ನಡೆಯಲಿದೆ. ಮನೆ ಮನೆ ಸಮೀಕ್ಷೆಯು ಜೂನ್ 30ರಿಂದ ಜುಲೈ 29ರವರೆಗೆ ನಡೆಯಲಿದೆ. ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 5 ರಂದು ಪ್ರಕಟಿಸಲಾಗುತ್ತದೆ ಎಂದು ಹೇಳಿದರು.

ಹಕ್ಕು ಮತ್ತು ಆಕ್ಷೇಪಣೆಯ ಅವಧಿಯನ್ನು ಆಗಸ್ಟ್ 5 ರಿಂದ ಸೆಪ್ಟೆಂಬರ್ 4ರವರೆಗೆ ನಿಗದಿಪಡಿಸಲಾಗಿದ್ದು, ಆಗಸ್ಟ್ 5 ರಿಂದ ಅಕ್ಟೋಬರ್ 3 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಗಳನ್ನು ವಿಲೇವಾರಿ ಮಾಡಲಾಗುತ್ತದೆ. ಅಂತಿಮ ಮತದಾರರ ಪಟ್ಟಿ ಯನ್ನು ಬರುವ ಅಕ್ಟೋಬರ್ 7 ರಂದು ಪ್ರಕಟಿಸಲಾಗುತ್ತಿದ್ದು, ಎಸ್ ಐ ಆರ್ ಅರ್ಹತಾ ದಿನಾಂಕ ಬರುವ ಅಕ್ಟೋಬರ್ 1ರಂದು ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯ ಶೋರಾಪುರ ತಾಲೂಕಿನಲ್ಲಿ 2,09,491 ಮತದಾರರ ಪೈಕಿ 1,97,852 ರಷ್ಟು ಮತದಾರರ (ಶೇ .94.44) ರಷ್ಟು ಮ್ಯಾಪಿಂಗ್ ಆಗಿದೆ. ಶಹಾಪುರ ತಾಲೂಕಿನಲ್ಲಿ 2,31,480 ಮತದಾರರ ಪೈಕಿ 2,20,935 ರಷ್ಟು( ಶೇ. 95.44) ರಷ್ಟು ಮ್ಯಾಪಿಂಗ್ ಆಗಿದೆ. ಯಾದಗಿರಿ 2,34,219 ಮತದಾರರ ಪೈಕಿ 2,28,849 ರಷ್ಟು ಮತದಾರರ ಮ್ಯಾಪಿಂಗ್ ಆಗಿದ್ದು, ಶೇ97.71 ರಷ್ಟು ಮ್ಯಾಪಿಂಗ್ ಆಗಿದೆ. ಗುರುಮಠಕಲ್ 1,34,832 ಮತದಾರರ ಪೈಕಿ 1,33,322 ರಷ್ಟು ಮತದಾರರ ಮ್ಯಾಪಿಂಗ್ ಆಗಿದೆ. ವಡಗೇರಾ,1,00,450 ಮತದಾರರ ಪೈಕಿ 98,340ರಷ್ಟು ಮತದಾರರ ಮ್ಯಾಪಿಂಗ್ ಆಗಿದ್ದು, ಶೇ 97.90 ರಷ್ಟು ಮ್ಯಾಪಿಂಗ್ ಆಗಿದೆ. ಹುಣಸಗಿ 1,43,024 ಮತದಾರರ ಪೈಕಿ 1,34,923 ಮತದಾರರ ಮ್ಯಾಪಿಂಗ್ ಆಗಿದ್ದು ಶೇ 94.34 ರಷ್ಟು ಮ್ಯಾಪಿಂಗ್ ಆಗಿದೆ. ಜಿಲ್ಲೆಯಲ್ಲಿ 2025ರನ್ವಯ ಒಟ್ಟು 10,53,496 ಮತದಾರರಿದ್ದು,ಈ ಪೈಕಿ ,10,14,221 ಮತದಾರರ ಮ್ಯಾಪಿಂಗ್ ಆಗಿದ್ದು,ಬಾಕಿ ಉಳಿದ ಮತದಾರರ ಮ್ಯಾಪಿಂಗ್ ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ್‌ ಕೋಲಾರ್, ಸಹಾಯಕ ಆಯುಕ್ತ ಶ್ರೀಧರ್ ಗೋಟುರ್ ಅವರು ಉಪಸ್ಥಿತರಿದ್ದರು.

Tags

S I R
share
ವಾರ್ತಾಭಾರತಿ
ವಾರ್ತಾಭಾರತಿ
Next Story
X