ಸೈದಾಪುರ| ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಮೃತ್ಯು

ಸೈದಾಪುರ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಸೈದಾಪುರ ಹೊರವಲಯದ ಎನ್.ಎಚ್-150 ರಾಷ್ಟ್ರೀಯ ಹೆದ್ದಾರಿಯ ಕರಿಬೆಟ್ಟ ಕ್ರಾಸ್ ಸಮೀಪ ನಡೆದಿದೆ.
ಅಪಘಾತದಲ್ಲಿ ಸೈದಾಪುರ ಗ್ರಾಮದ ಬಸವಲಿಂಗಮ್ಮ (55), ಅವರ ಪುತ್ರ ತಿಮ್ಮಣ್ಣ (30) ಹಾಗೂ ಸೊಸೆ ನಾಗಮ್ಮ (26) ಮೃತ ದುರ್ದೈವಿಗಳು.
ಕೃಷಿ ಕೆಲಸ ಮುಗಿಸಿ ಮೂವರು ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಗಾಯಾಳುಗಳನ್ನು ರಾಯಚೂರು ಜಿಲ್ಲಾ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತಾದರೂ, ಮೂವರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಈ ಸಂಬಂಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




