Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸೈದಾಪುರ | ಸಾರ್ವಜನಿಕರ ಸಮಸ್ಯೆಗಳಿಗೆ...

ಸೈದಾಪುರ | ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಅಧಿಕಾರಿಗಳ ಜವಾಬ್ದಾರಿ: ಸುರೇಶ ಅಂಕಲಗಿ

ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನಕ್ಕೆ ಚಾಲನೆ

ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ28 Nov 2026 6:20 PM IST
share
ಸೈದಾಪುರ | ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಅಧಿಕಾರಿಗಳ ಜವಾಬ್ದಾರಿ: ಸುರೇಶ ಅಂಕಲಗಿ

ಸೈದಾಪುರ: ಸಾರ್ವಜನಿಕರ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸುವುದರ ಜೊತೆಗೆ ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಯಾದಗಿರಿ ತಹಸೀಲ್ದಾರ್ ಸುರೇಶ ಅಂಕಲಗಿ ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ್ದ ಸೈದಾಪುರ ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ಹಾಗೂ ಸಾರ್ವಜನಿಕರಿಗೆ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡುವುದರ ಜೊತೆಗೆ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಇದಕ್ಕೂ ಮೊದಲು ಪ್ರಾಸ್ತಾವಿಕವಾಗಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಬೈಯಿ, ಸರ್ಕಾರದ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಅಭಿಯಾನದಲ್ಲಿ ಭಾಗವಹಿಸಿ ಸಾರ್ವಜನಿಕರಿಂದ ಅಹವಾಲು ಹಾಗೂ ಕುಂದುಕೊರತೆಗಳ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಸ್ಥಳದಲ್ಲಿಯೇ ಪರಿಹರಿಸಲು ಸಾಧ್ಯವಿರುವ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಲಾಗುವುದು. ಉಳಿದ ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ಹೊಣೆಗಾರಿಕೆ ನಿಗದಿಪಡಿಸಿ, ಏಳು ದಿನಗಳೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಭಿಯಾನದಲ್ಲಿ ವಿವಿಧ ಇಲಾಖೆಗಳ ಸೇವೆ ಮತ್ತು ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗಿತ್ತು. ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅಹವಾಲು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಇಒ ವೀರಪ್ಪ ಕೊನ್ನಳ್ಳಿ, ರವಿ ಎಂ. ಗೇಡ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕೆಮಿಕಲ್ ಮಿಶ್ರಿತ ನೀರು ಕುಡಿಯುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ ಶೆಟ್ಟಿಹಳ್ಳಿ ಗ್ರಾಮಸ್ಥರು :

ಸೈದಾಪುರ ಸಮೀಪದ ಶೆಟ್ಟಿಹಳ್ಳಿ ಗ್ರಾಮದಲ್ಲಿ ಕಳೆದ ಆರು ತಿಂಗಳಿಂದ ರಾಸಾಯನಿಕ ಮಿಶ್ರಿತ ನೀರು ಪೂರೈಕೆಯಾಗುತ್ತಿದ್ದು, ಇದರಿಂದ ಗ್ರಾಮಸ್ಥರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕುರಿತು ಪಂಚಾಯಿತಿ ಅಧಿಕಾರಿಗಳು ಸೇರಿದಂತೆ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಪ್ರಜಾಸೇವೆ ಅಭಿಯಾನದಲ್ಲಿ ಅಧಿಕಾರಿಗಳ ಮುಂದೆಯೇ ನೀರು ಕುಡಿಯುವಂತೆ ಒತ್ತಾಯಿಸಿ ತಮ್ಮ ಅಳಲು ತೋಡಿಕೊಂಡರು.

‘ನಾವು ಕುಡಿಯುತ್ತಿರುವ ನೀರನ್ನು ನೀವು ಕುಡಿದು ನೋಡಿ, ಆಗ ನಮ್ಮ ನೋವು ಅರ್ಥವಾಗುತ್ತದೆ’ ಎಂದು ಅಧಿಕಾರಿಗಳ ಮುಂದೆ ಅಸಮಾಧಾನ ವ್ಯಕ್ತಪಡಿಸಿದರು.

ನಂತರ ಗ್ರಾಮಸ್ಥರ ಅಹವಾಲು ಆಲಿಸಿದ ತಹಶೀಲ್ದಾರ್ ಸುರೇಶ ಅಂಕಲಗಿ ಹಾಗೂ ತಾಲ್ಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಬೈಯಿ, ಸ್ಥಳದಲ್ಲಿದ್ದ ಗ್ರಾಮ ಪಂಚಾಯತ್‌ ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ತಕ್ಷಣ ಗ್ರಾಮಕ್ಕೆ ತೆರಳಿ ಪರಿಶೀಲನೆ ನಡೆಸಿ, ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಪೂರೈಸುವಂತೆ ಸೂಚಿಸಿದರು. ಎರಡು ದಿನಗಳೊಳಗಾಗಿ ಶುದ್ಧ ಕುಡಿಯುವ ನೀರು ಒದಗಿಸುವುದಾಗಿ ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮಸ್ಥರು, ನಿಗದಿತ ಅವಧಿಯಲ್ಲಿ ಶುದ್ಧ ಕುಡಿಯುವ ನೀರು ಪೂರೈಸದಿದ್ದರೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ, ಜಿಲ್ಲೆಯ ಎಲ್ಲ ಅಧಿಕಾರಿಗಳಿಗೂ ಇದೇ ನೀರನ್ನು ಕುಡಿಯುವಂತೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

Tags

SaidapuraYadgiri
share
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X