Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸೈದಾಪುರ | ದಲಿತರ ಸಮಸ್ಯೆಗಳಿಗೆ ತ್ವರಿತ...

ಸೈದಾಪುರ | ದಲಿತರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: ಎಸ್‌ಪಿ ಪೃಥ್ವಿಕ್ ಶಂಕರ್

ವಾರ್ತಾಭಾರತಿವಾರ್ತಾಭಾರತಿ16 May 2026 6:12 PM IST
share
ಸೈದಾಪುರ | ದಲಿತರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: ಎಸ್‌ಪಿ ಪೃಥ್ವಿಕ್ ಶಂಕರ್
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆಗಳ ಸಭೆ

ಸೈದಾಪುರ: ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲಿನ ದೌರ್ಜನ್ಯಗಳು, ಆರ್ಥಿಕ ಹಾಗೂ ಸಾಮಾಜಿಕ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ನೀಡುವುದೇ ಕುಂದುಕೊರತೆ ಸಭೆಯ ಪ್ರಮುಖ ಉದ್ದೇಶವಾಗಿದೆ ಎಂದು ಪೃಥ್ವಿಕ್ ಶಂಕರ್ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಯಲು ಪ್ರತಿ ತಿಂಗಳು ಜನರ ಬಳಿ ನೇರವಾಗಿ ತೆರಳಿ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲಾಗುತ್ತಿದೆ ಎಂದರು.

ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರೆ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದು ತಕ್ಷಣ ಸ್ಪಂದಿಸುವಂತೆ ಸೂಚಿಸಲಾಗುವುದು. ಕಾನೂನು ಕ್ರಮ ಅಗತ್ಯವಿದ್ದರೆ ಅದನ್ನೂ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

“ಯಾರ ಭಯದಲ್ಲೂ ಬದುಕಬೇಡಿ. ಪ್ರತಿಯೊಬ್ಬರಿಗೂ ತಮ್ಮ ಆಸಕ್ತಿ ಮತ್ತು ಆದಾಯಕ್ಕೆ ಅನುಗುಣವಾಗಿ ಸ್ವತಂತ್ರ ಹಾಗೂ ನ್ಯಾಯಯುತ ಜೀವನ ಸಾಗಿಸುವ ಹಕ್ಕನ್ನು ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ನೀಡಿದ್ದಾರೆ. ಆದ್ದರಿಂದ ಇಂತಹ ಸಭೆಗಳಲ್ಲಿ ಭಾಗವಹಿಸಿ ನಿಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹೇಳಬೇಕು” ಎಂದು ಸಲಹೆ ನೀಡಿದರು.

ದೌರ್ಜನ್ಯ ಸಲಹಾ ಸಮಿತಿಯ ಸದಸ್ಯ ಮರೆಪ್ಪ ಚಟ್ಟೇರಕರ್ ಮಾತನಾಡಿ, ಸಮಾಜದಲ್ಲಿ ಎಲ್ಲರೂ ಸಮಾನರು. ಮೇಲು-ಕೀಳು ಭಾವನೆ ಇರಬಾರದು. ದಲಿತರ ಹಕ್ಕುಗಳಿಗಾಗಿ ಅಂಬೇಡ್ಕರ್ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ ಎಂದು ಹೇಳಿದರು.

ಸಭೆಯಲ್ಲಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ಪರಿಶೀಲನೆ, ಜಮೀನು ಸಮಸ್ಯೆಗಳು, ಅಂಬೇಡ್ಕರ್ ಭವನ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಚೆನ್ನಬಸಪ್ಪ, ಡಿವೈಎಸ್ಪಿ ಸುರೇಶ, ಪಿಐ ರಾಜಶೇಖರ ಹಳಿಗೇರಾ, ಶಿವಾನಂದ ಎಂ.ಮರಡಿ, ಪಿಎಸ್ಐ ಭೀಮರಾಯ ಕೂಡ್ಲೂರು, ಪೇದೆ ರಾಜಕುಮಾರ್ , ಕಂದಾಯ ಇಲಾಖೆಯ ಉಪ ತಹಶೀಲ್ದಾರ್ ದಸ್ತಗಿರಿ ನಾಯಕ, ಪಿಡಿಓ ವಿಜಯಲಕ್ಷ್ಮೀ ಸೇರಿದಂತೆ ವಿವಿಧ ಗ್ರಾಮಗಳ ಸಾರ್ವಜನಿಕರು ಉಪಸ್ಥಿತರಿದ್ದರು.

Tags

Saidapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X