Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಶಹಾಪುರ | ಚರಂಡಿ ಸ್ವಚ್ಛತೆ, ಬೀದಿ ದೀಪಗಳ...

ಶಹಾಪುರ | ಚರಂಡಿ ಸ್ವಚ್ಛತೆ, ಬೀದಿ ದೀಪಗಳ ನಿರ್ವಹಣೆಗೆ ಆಗ್ರಹ : ನಗರಸಭೆ ಅಧಿಕಾರಿಗಳ ವಿರುದ್ಧ ಯುವ ಸೇನೆ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ15 Oct 2026 7:31 PM IST
share
ಶಹಾಪುರ | ಚರಂಡಿ ಸ್ವಚ್ಛತೆ, ಬೀದಿ ದೀಪಗಳ ನಿರ್ವಹಣೆಗೆ ಆಗ್ರಹ : ನಗರಸಭೆ ಅಧಿಕಾರಿಗಳ ವಿರುದ್ಧ ಯುವ ಸೇನೆ ಆಕ್ರೋಶ

ಶಹಾಪುರ: ನಗರದ ವಿವಿಧ ವಾರ್ಡ್‌ಗಳಲ್ಲಿ ಚರಂಡಿ ಸ್ವಚ್ಛತೆ ಕೈಗೊಳ್ಳದಿರುವುದು ಹಾಗೂ ಬಸವೇಶ್ವರ ವೃತ್ತದಿಂದ ವಾಲ್ಮೀಕಿ ವೃತ್ತದವರೆಗೆ ಬೀದಿ ದೀಪಗಳು ಸಮರ್ಪಕವಾಗಿ ಉರಿಯದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕಲ್ಯಾಣ ಕರ್ನಾಟಕ ಯುವ ಸೇನೆ, ನಗರಸಭೆ ಅಧಿಕಾರಿಗಳು ಕೂಡಲೇ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿದೆ.

ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡ್‌ಗಳ ಚರಂಡಿಗಳಲ್ಲಿ ಕಸ, ಕಡ್ಡಿಗಳು ತುಂಬಿಕೊಂಡಿದ್ದು, ಸ್ವಚ್ಛತಾ ಕಾರ್ಯ ಕೈಗೊಳ್ಳದ ಕಾರಣ ತೀವ್ರ ದುರ್ವಾಸನೆ ಹರಡುತ್ತಿದೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆತಂಕ ಎದುರಾಗಿದೆ. ರಸ್ತೆ ಬದಿಗಳಲ್ಲಿಯೂ ಕಸ ಸಂಗ್ರಹವಾಗಿದ್ದು, ಸ್ವಚ್ಛತೆಗೆ ಆದ್ಯತೆ ನೀಡುವಲ್ಲಿ ನಗರಸಭೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಂಘಟನೆ ಆರೋಪಿಸಿದೆ.

ಇನ್ನೊಂದೆಡೆ, ಬಸವೇಶ್ವರ ವೃತ್ತದಿಂದ ಯಾದಗಿರಿ ಮಾರ್ಗವಾಗಿ ವಾಲ್ಮೀಕಿ ವೃತ್ತದವರೆಗೆ ಇರುವ ಬೀದಿ ದೀಪಗಳು ರಾತ್ರಿ ವೇಳೆ ಸಮರ್ಪಕವಾಗಿ ಉರಿಯುತ್ತಿಲ್ಲ. ಇದರಿಂದ ರಸ್ತೆ ಕತ್ತಲಲ್ಲಿ ಮುಳುಗುತ್ತಿದ್ದು, ಪಾದಚಾರಿಗಳು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ರಾತ್ರಿ ವೇಳೆ ಸಂಚರಿಸುವ ಸಾರ್ವಜನಿಕರಲ್ಲಿ ಸುರಕ್ಷತೆಯ ಆತಂಕವೂ ಎದುರಾಗಿದೆ.

ನಗರಸಭೆ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಎಲ್ಲ ವಾರ್ಡ್‌ಗಳ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ರಸ್ತೆ ಬದಿಯ ಕಸವನ್ನು ತೆರವುಗೊಳಿಸುವುದರ ಜೊತೆಗೆ, ಬಸವೇಶ್ವರ ವೃತ್ತದಿಂದ ವಾಲ್ಮೀಕಿ ವೃತ್ತದವರೆಗಿನ ಬೀದಿ ದೀಪಗಳು ಪ್ರತಿದಿನ ಸಂಜೆ ಸಮಯಕ್ಕೆ ಸರಿಯಾಗಿ ಉರಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ಯುವ ಸೇನೆಯ ತಾಲೂಕು ಅಧ್ಯಕ್ಷ ಕಾಶಪ್ಪ ಹಳಿಸಗರ ಒತ್ತಾಯಿಸಿದ್ದಾರೆ.

ಸಮಸ್ಯೆಗಳನ್ನು ತಕ್ಷಣ ಪರಿಹರಿಸದಿದ್ದರೆ ನಗರಸಭೆ ಕಚೇರಿ ಎದುರು ಧರಣಿ ನಡೆಸುವುದು ಅನಿವಾರ್ಯವಾಗಲಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Tags

Shahapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X